Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 6:13 - ಪರಿಶುದ್ದ ಬೈಬಲ್‌

13 ಬೇತ್‌ಷೆಮೆಷಿನ ಕಣಿವೆಯಲ್ಲಿ ಅಲ್ಲಿನ ಜನರು ಗೋಧಿಯ ಬೆಳೆಯನ್ನು ಕೊಯ್ಯುತ್ತಿದ್ದರು. ಅವರು ಕಣ್ಣೆತ್ತಿ ನೋಡಿದಾಗ, ಪವಿತ್ರ ಪೆಟ್ಟಿಗೆಯು ಅವರಿಗೆ ಕಾಣಿಸಿತು. ಅವರಿಗೆ ಬಹಳ ಸಂತೋಷವಾಯಿತು. ಅವರು ಅದನ್ನು ಸ್ವೀಕರಿಸಲು ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಬೇತ್ ಷೆಮೆಷಿನವರು ಅಲ್ಲಿನ ತಗ್ಗಿನಲ್ಲಿ ಗೋದಿಯ ಬೆಳೆಯನ್ನು ಕೊಯ್ಯುತ್ತಿದ್ದರು. ಅವರು ಕಣ್ಣೆತ್ತಿ ಯೆಹೋವನ ಮಂಜೂಷವನ್ನು ನೋಡಿ ಬಹು ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬೇತ್ ಷೆಮೆಷಿನವರು ಅಲ್ಲಿನ ತಗ್ಗಿನಲ್ಲಿ ಗೋದಿಬೆಳೆಯನ್ನು ಕೊಯ್ಯುತ್ತಿದ್ದರು. ಕಣ್ಣೆತ್ತಿ ಸರ್ವೇಶ್ವರನ ಮಂಜೂಷವನ್ನು ನೋಡಿ ಬಹಳ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಬೇತ್‍ಷೆಮೆಷಿನವರು ಅಲ್ಲಿನ ತಗ್ಗಿನಲ್ಲಿ ಗೋದಿಯ ಬೆಳೆಯನ್ನು ಕೊಯ್ಯುತ್ತಿದ್ದರು. ಅವರು ಕಣ್ಣೆತ್ತಿ ಯೆಹೋವನ ಮಂಜೂಷವನ್ನು ನೋಡಿ ಬಹುಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಬೇತ್ ಷೆಮೆಷ್ ಊರಿನವರು ತಗ್ಗಿನಲ್ಲಿ ಗೋಧಿಯ ಪೈರನ್ನು ಕೊಯ್ಯುತ್ತಿದ್ದರು. ಅವರು ತಮ್ಮ ಕಣ್ಣುಗಳನ್ನು ಎತ್ತಿ ಮಂಜೂಷವನ್ನು ಕಂಡು, ಅದನ್ನು ಕಂಡದ್ದಕ್ಕೆ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 6:13
3 ತಿಳಿವುಗಳ ಹೋಲಿಕೆ  

ಬಾಲಾದಲ್ಲಿ ಆ ಸೀಮೆಯು ಪಶ್ಚಿಮಕ್ಕೆ ತಿರುಗಿಕೊಂಡು ಸೇಯೀರ್ ಬೆಟ್ಟಪ್ರದೇಶಕ್ಕೆ ಹೋಗುತ್ತದೆ; ಅಲ್ಲಿಂದ ಅದು ಕೆಸಾಲೋನ್ ಎಂಬ ಯಾರೀಮ್ ಬೆಟ್ಟದ ಉತ್ತರ ಮಾರ್ಗವಾಗಿ ಇಳಿಯುತ್ತಾ ಬೇತ್‌ಷೆಮೆಷಿಗೂ ಅಲ್ಲಿಂದ ತಿಮ್ನಾ ಊರಿಗೂ ಹೋಗುತ್ತದೆ.


ಹಸುಗಳು ಬೇತ್‌ಷೆಮೆಷಿಗೆ ನೇರವಾಗಿ ಹೋದವು. ಅವು ದಾರಿಯಲ್ಲಿಯೇ ಹೋದವು. ಅವು ದಾರಿಯುದ್ದಕ್ಕೂ ಕೂಗುತ್ತಾ ನಡೆದವು. ಅವು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಲಿಲ್ಲ. ಫಿಲಿಷ್ಟಿಯರ ಅಧಿಪತಿಗಳು ಬೇತ್‌ಷೆಮೆಷಿನ ಗಡಿಯವರೆಗೂ ಹಸುಗಳನ್ನು ಹಿಂಬಾಲಿಸಿಕೊಂಡು ಹೋದರು.


ಬೇತ್‌ಷೆಮೆಷಿನ ಯೆಹೋಶುವನಿಗೆ ಸೇರಿದ ಹೊಲಕ್ಕೆ ಆ ಬಂಡಿಯು ಬಂದಿತು. ಆ ಹೊಲದ ಒಂದು ದೊಡ್ಡ ಕಲ್ಲಿನ ಬಳಿ ಆ ಬಂಡಿಯು ನಿಂತಿತು. ಬೇತ್‌ಷೆಮೆಷಿನ ಜನರು ಬಂಡಿಯ ಕಟ್ಟಿಗೆಗಳನ್ನು ಒಡೆದು ಆ ಹಸುಗಳನ್ನು ಯೆಹೋವನಿಗೆ ಆಹುತಿಯಾಗಿ ಅರ್ಪಿಸಿದರು. ಕೆಲವು ಲೇವಿಯರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಇಳಿಸಿದರು. ಅಲ್ಲದೆ ಅವರು ಚಿನ್ನದ ಮಾದರಿಗಳಿದ್ದ ಚೀಲವನ್ನು ಇಳಿಸಿದರು. ಲೇವಿಯರು ಯೆಹೋವನ ಪೆಟ್ಟಿಗೆಯನ್ನು ಮತ್ತು ಆ ಚೀಲವನ್ನು ದೊಡ್ಡಕಲ್ಲಿನ ಮೇಲಿಟ್ಟರು. ಅದೇ ದಿನ ಬೇತ್‌ಷೆಮೆಷಿನ ಜನರು ಯೆಹೋವನಿಗೆ ಸರ್ವಾಂಗಹೋಮಗಳನ್ನು ಅರ್ಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು