1 ಸಮುಯೇಲ 6:14 - ಪರಿಶುದ್ದ ಬೈಬಲ್14-15 ಬೇತ್‌ಷೆಮೆಷಿನ ಯೆಹೋಶುವನಿಗೆ ಸೇರಿದ ಹೊಲಕ್ಕೆ ಆ ಬಂಡಿಯು ಬಂದಿತು. ಆ ಹೊಲದ ಒಂದು ದೊಡ್ಡ ಕಲ್ಲಿನ ಬಳಿ ಆ ಬಂಡಿಯು ನಿಂತಿತು. ಬೇತ್‌ಷೆಮೆಷಿನ ಜನರು ಬಂಡಿಯ ಕಟ್ಟಿಗೆಗಳನ್ನು ಒಡೆದು ಆ ಹಸುಗಳನ್ನು ಯೆಹೋವನಿಗೆ ಆಹುತಿಯಾಗಿ ಅರ್ಪಿಸಿದರು. ಕೆಲವು ಲೇವಿಯರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಇಳಿಸಿದರು. ಅಲ್ಲದೆ ಅವರು ಚಿನ್ನದ ಮಾದರಿಗಳಿದ್ದ ಚೀಲವನ್ನು ಇಳಿಸಿದರು. ಲೇವಿಯರು ಯೆಹೋವನ ಪೆಟ್ಟಿಗೆಯನ್ನು ಮತ್ತು ಆ ಚೀಲವನ್ನು ದೊಡ್ಡಕಲ್ಲಿನ ಮೇಲಿಟ್ಟರು. ಅದೇ ದಿನ ಬೇತ್‌ಷೆಮೆಷಿನ ಜನರು ಯೆಹೋವನಿಗೆ ಸರ್ವಾಂಗಹೋಮಗಳನ್ನು ಅರ್ಪಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಬಂಡಿಯು ಬೇತ್ ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿದ್ದ ದೊಡ್ಡ ಕಲ್ಲಿನ ಬಳಿಯಲ್ಲಿ ಬಂದು ನಿಂತಿತು. ಆಗ ಅವರು ಹೋಗಿ ಬಂಡಿಯ ಕಟ್ಟಿಗೆಗಳನ್ನು ಸೀಳಿ, ಆ ಹಸುಗಳನ್ನು ಯೆಹೋವನಿಗೆ ಯಜ್ಞಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆ ಬಂಡಿ ಬೇತ್‍ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿದ್ದ ಒಂದು ದೊಡ್ಡ ಕಲ್ಲಿನ ಬಳಿ ಬಂದು ನಿಂತಿತು. ಅವರು ಅಲ್ಲಿಗೆ ಹೋಗಿ, ಬಂಡಿಯ ಕಟ್ಟಿಗೆಗಳನ್ನು ಮುರಿದು, ಅಗ್ನಿ ಮಾಡಿ ಆ ಹಸುಗಳನ್ನು ಸರ್ವೇಶ್ವರನಿಗೆ ದಹನಬಲಿಯಾಗಿ ಅರ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಬಂಡಿಯು ಬೇತ್‍ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿದ್ದ ದೊಡ್ಡ ಕಲ್ಲಿನ ಬಳಿಯಲ್ಲಿ ಬಂದು ನಿಲ್ಲಲು ಅವರು ಹೋಗಿ ಬಂಡಿಯ ಕಟ್ಟಿಗೆಗಳನ್ನು ಒಡೆದು ಅಗ್ನಿಮಾಡಿ ಆ ಹಸುಗಳನ್ನು ಯೆಹೋವನಿಗೋಸ್ಕರ ಆಹುತಿಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆ ಬಂಡಿಯು ಬೇತ್ ಷೆಮೆಷ್ ಊರಿನವನಾದ ಯೆಹೋಶುವನ ಹೊಲದಲ್ಲಿ ಬಂದು ನಿಂತಿತು. ಅಲ್ಲಿ ಒಂದು ದೊಡ್ಡ ಬಂಡೆ ಇತ್ತು. ಆಗ ಅವರು ಆ ಬಂಡಿಯ ಕಟ್ಟಿಗೆಗಳನ್ನು ಸೀಳಿ, ಹಸುಗಳನ್ನು ಯೆಹೋವ ದೇವರಿಗೆ ದಹನಬಲಿಯಾಗಿ ಅರ್ಪಿಸಿದರು. ಅಧ್ಯಾಯವನ್ನು ನೋಡಿ |
ಫಿಲಿಷ್ಟಿಯರು ಚಿನ್ನದ ಇಲಿಗಳನ್ನೂ ಕಳುಹಿಸಿದ್ದರು. ಫಿಲಿಷ್ಟಿಯರ ಐದು ಅಧಿಪತಿಗಳಿಗೆ ಸೇರಿದ್ದ ಐದು ಪಟ್ಟಣಗಳ ಸಂಖ್ಯೆಗನುಸಾರವಾಗಿ ಈ ಇಲಿಗಳಿದ್ದವು. ಈ ಪಟ್ಟಣಗಳ ಸುತ್ತ ಗೋಡೆಗಳಿದ್ದು ಹಳ್ಳಿಗಳು ಈ ಪಟ್ಟಣಗಳನ್ನು ಸುತ್ತುವರಿದಿದ್ದವು. ಬೇತ್‌ಷೆಮೆಷಿನ ಜನರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಒಂದು ಕಲ್ಲಿನ ಮೇಲಿಟ್ಟರು. ಬೇತ್‌ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿ ಆ ಕಲ್ಲು ಈಗಲೂ ಇದೆ.