Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 6:17 - ಪರಿಶುದ್ದ ಬೈಬಲ್‌

17 ಈ ರೀತಿ ಫಿಲಿಷ್ಟಿಯರು ತಾವು ಯೆಹೋವನಿಗೆ ಮಾಡಿದ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಚಿನ್ನದ ಗಡ್ಡೆಗಳನ್ನು ಕಾಣಿಕೆಗಳನ್ನಾಗಿ ಕಳುಹಿಸಿದರು. ಅವರು ಪ್ರತಿಯೊಂದು ಫಿಲಿಷ್ಟಿಯ ನಗರಕ್ಕೆ ಒಂದರಂತೆ ಚಿನ್ನದ ಗಡ್ಡೆಗಳನ್ನು ಕಳುಹಿಸಿದ್ದರು. ಅಷ್ಡೋದ್, ಗಾಜಾ, ಅಷ್ಕೆಲೋನ್, ಗತ್ ಮತ್ತು ಎಕ್ರೋನ್‌ಗಳೇ ಆ ನಗರಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಫಿಲಿಷ್ಟಿಯರು ಯೆಹೋವನಿಗೆ ಸಮರ್ಪಿಸಿದ ಚಿನ್ನದ ಗಡ್ಡೆಗಳು ಅಷ್ಡೋದ್, ಗಾಜಾ, ಅಷ್ಕೆಲೋನ್, ಗತ್ ಊರು, ಎಕ್ರೋನ್ ಎಂಬ ಅವರ ಸಂಸ್ಥಾನಗಳ ಸಂಖ್ಯೆಗಳಿಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಫಿಲಿಷ್ಟಿಯರು ಸರ್ವೇಶ್ವರನಿಗೆ ಪ್ರಾಯಶ್ಚಿತಾರ್ಥವಾಗಿ ಸಮರ್ಪಿಸಿದ ಚಿನ್ನದ ಗಡ್ಡೆಗಳ ಸಂಸ್ಥಾನಾನುಸಾರವಾದ ಪಟ್ಟಿ ಇದು: ಅಷ್ಡೋದ್, ಗಾಜಾ, ಪರವಾಗಿ ಒಂದು, ಅಷ್ಕೆಲೋನ್ ಪರವಾಗಿ ಒಂದು, ಗತ್ ಪರವಾಗಿ ಒಂದು ಮತ್ತು ಎಕ್ರೋನ್ ಪರವಾಗಿ ಒಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಫಿಲಿಷ್ಟಿಯರು ಯೆಹೋವನಿಗೆ ಸಮರ್ಪಿಸಿದ ಚಿನ್ನದ ಗಡ್ಡೆಗಳು ಅಷ್ಡೋದ್, ಗಾಜಾ, ಅಷ್ಕೆಲೋನ್, ಗತ್ಊರು, ಎಕ್ರೋನ್ ಎಂಬ ಅವರ ಸಂಸ್ಥಾನಗಳ ಸಂಖ್ಯೆಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಫಿಲಿಷ್ಟಿಯರು ದೋಷಪರಿಹಾರ ಕಾಣಿಕೆಗಾಗಿ, ಗಡ್ಡೆರೋಗದ ಬಂಗಾರ ಸ್ವರೂಪಗಳನ್ನು ಅಷ್ಡೋದಿನಿಂದ ಒಂದೂ, ಗಾಜನಿಂದ ಒಂದೂ, ಅಷ್ಕೆಲೋನದಿಂದ ಒಂದೂ, ಗತ್‌ನಿಂದ ಒಂದೂ, ಎಕ್ರೋನಿನಿಂದ ಒಂದೂ ಯೆಹೋವ ದೇವರಿಗೆ ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 6:17
19 ತಿಳಿವುಗಳ ಹೋಲಿಕೆ  

ಗತ್‌ನಲ್ಲಿ ಈ ಸುದ್ದಿಯನ್ನು ಹೇಳದಿರು. ಅಷ್ಕೆಲೋನಿನ ಬೀದಿಗಳಲ್ಲಿ ಇದನ್ನು ಸಾರದಿರು. ಫಿಲಿಷ್ಟಿಯರ ಪಟ್ಟಣಗಳೆಲ್ಲಾ ಸಂತೋಷಪಡುವವು. ಆ ವಿದೇಶಿಯರ ಹೆಣ್ಣುಮಕ್ಕಳು ಉಲ್ಲಾಸಪಡುವರು.


ಹೋಗಿ ಕಲ್ನೆಯ ಕಡೆಗೆ ದಿಟ್ಟಿಸಿರಿ. ಅಲ್ಲಿಂದ ದೊಡ್ಡ ಪಟ್ಟಣವಾದ ಹಾಮಾತಿಗೆ ಹೋಗಿರಿ. ಫಿಲಿಷ್ಟಿಯರ ಗತ್ ಪಟ್ಟಣಕ್ಕೆ ಹೋಗಿರಿ. ಆ ಜನಾಂಗಗಳಿಗಿಂತ ನೀವು ಉತ್ತಮರೋ? ಇಲ್ಲ. ಅವರ ರಾಜ್ಯವು ನಿಮಗಿಂತ ವಿಸ್ತಾರವಾಗಿದೆ.


ಎಲ್ಲಾ ಅರಬೀಯರು ಮತ್ತು ಧಿಚ್ ದೇಶದ ಎಲ್ಲಾ ರಾಜರು ಪಾನಪಾತ್ರೆಯಿಂದ ಕುಡಿಯುವಂತೆ ಮಾಡಿದೆ. ಫಿಲಿಷ್ಟಿಯ ದೇಶದ ಎಲ್ಲಾ ರಾಜರು ಅಂದರೆ ಅಷ್ಕೆಲೋನ್, ಗಾಜಾ, ಎಕ್ರೋನ್ ಮತ್ತು ಅಷ್ಡೋದಿನ ಶೇಷಭಾಗದ ರಾಜರು ಈ ಪಾನಪಾತ್ರೆಯಿಂದ ಕುಡಿಯುವಂತೆ ಮಾಡಿದೆನು.


ಉಜ್ಜೀಯನು ಫಿಲಿಷ್ಟಿಯರೊಂದಿಗೆ ಯುದ್ಧಮಾಡಿ ಅವರ ಪಟ್ಟಣಗಳಾದ ಗತ್, ಯೆಬ್ನೆ ಮತ್ತು ಅಷ್ಡೋದ್‌ಗಳ ಪೌಳಿಗೋಡೆಗಳನ್ನು ಕೆಡವಿಹಾಕಿದನು. ಅವನು ಅಷ್ಡೋದಿನ ಮತ್ತು ಇತರ ಫಿಲಿಷ್ಟಿಯರ ಪ್ರಾಂತ್ಯಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.


ಒಂದು ದಿನ, ಅಹಜ್ಯನು ಸಮಾರ್ಯದ ತನ್ನ ಮನೆಯ ಮಾಳಿಗೆಯ ಮೇಲಿದ್ದನು. ಅಹಜ್ಯನು ಮನೆಯ ಮೇಲಿನ ಮರದ ಕಂಬಗಳ ಮೂಲಕ ಕೆಳಕ್ಕೆ ಬಿದ್ದನು. ಅವನಿಗೆ ಬಹಳ ಗಾಯಗಳಾದವು. ಅಹಜ್ಯನು ಸಂದೇಶಕರನ್ನು ಕರೆದು ಅವರಿಗೆ, “ಎಕ್ರೋನಿನ ದೇವರಾದ ಬಾಳ್ಜೆಬೂಬನ ಅರ್ಚಕರ ಬಳಿಗೆ ಹೋಗಿ, ನನ್ನ ಗಾಯಗಳು ಗುಣವಾಗುತ್ತವೆಯೇ ಎಂಬುದನ್ನು ಅವರಿಂದ ತಿಳಿದುಕೊಳ್ಳಿ” ಎಂದು ಹೇಳಿದನು.


ಈ ನಾಲ್ಕು ಜನರು ಗತ್ ಊರಿನ ರೆಫಾಯರು. ಅವರೆಲ್ಲರೂ ದಾವೀದನಿಂದ ಮತ್ತು ಅವನ ಜನರಿಂದ ಕೊಲ್ಲಲ್ಪಟ್ಟರು.


ಫಿಲಿಷ್ಟಿಯರು, “ಇಸ್ರೇಲರ ದೇವರು ನಮ್ಮನ್ನು ಕ್ಷಮಿಸಬೇಕಾದರೆ ನಾವು ಯಾವ ಕಾಣಿಕೆಗಳನ್ನು ಕಳುಹಿಸಬೇಕು?” ಎಂದು ಕೇಳಿದರು. ಅರ್ಚಕರು ಮತ್ತು ಮಾಂತ್ರಿಕರು, “ನಿಮ್ಮಲ್ಲಿ ಐದು ಮಂದಿ ಅಧಿಪತಿಗಳಿದ್ದೀರಿ. ಪ್ರತಿಯೊಂದು ನಗರಕ್ಕೆ ಒಬ್ಬ ಅಧಿಪತಿಯಿದ್ದಾನೆ. ನೀವು ಮತ್ತು ನಿಮ್ಮ ಅಧಿಪತಿಗಳೆಲ್ಲರೂ ಒಂದೇ ರೀತಿಯಲ್ಲಿ ತೊಂದರೆಗೊಳಗಾಗಿದ್ದೀರಿ. ಆದ್ದರಿಂದ ಚಿನ್ನದಲ್ಲಿ ಐದು ಗಡ್ಡೆಗಳನ್ನು ಹಾಗೂ ಐದು ಇಲಿಗಳನ್ನು ಮಾಡಿಸಬೇಕು.


ಆದ್ದರಿಂದ ಫಿಲಿಷ್ಟಿಯರು ದೇವರ ಪವಿತ್ರ ಪೆಟ್ಟಿಗೆಯನ್ನು ಎಕ್ರೋನಿಗೆ ಕಳುಹಿಸಿದರು. ದೇವರ ಪವಿತ್ರ ಪೆಟ್ಟಿಗೆಯು ಎಕ್ರೋನಿಗೆ ಬಂದಾಗ, ಅಲ್ಲಿನ ಜನರು, “ಇಸ್ರೇಲರ ದೇವರನ್ನು ನಮ್ಮ ನಗರವಾದ ಎಕ್ರೋನಿಗೆ ನೀವೇಕೆ ತರುತ್ತಿರುವಿರಿ? ನಮ್ಮನ್ನೂ ನಮ್ಮ ಜನರನ್ನೂ ನೀವು ಕೊಲ್ಲಬೇಕೆಂದಿರುವಿರಾ?” ಎಂದು ಆಕ್ಷೇಪಿಸಿದರು.


ಅಷ್ಡೋದಿನ ಜನರು ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳನ್ನು ಒಟ್ಟಿಗೆ ಸೇರಿಸಿ “ಇಸ್ರೇಲರ ಯೆಹೋವನ ಪವಿತ್ರ ಪೆಟ್ಟಿಗೆಯನ್ನು ನಾವು ಏನು ಮಾಡೋಣ?” ಎಂದು ಕೇಳಿದರು. ಅಧಿಪತಿಗಳು, “ಇಸ್ರೇಲರ ಪವಿತ್ರ ಪೆಟ್ಟಿಗೆಯನ್ನು ‘ಗತ್’ ನಗರಕ್ಕೆ ಕಳುಹಿಸಿ” ಎಂದು ಹೇಳಿದರು. ಅಂತೆಯೇ, ಅವರು ಅದನ್ನು ಗತ್ ನಗರಕ್ಕೆ ಕಳುಹಿಸಿದರು.


ಫಿಲಿಷ್ಟಿಯರು ದೇವರ ಪವಿತ್ರ ಪೆಟ್ಟಿಗೆಯನ್ನು ಎಬೆನೆಜೆರಿನಿಂದ ಅಷ್ಡೋದಿಗೆ ತೆಗೆದುಕೊಂಡು ಹೋದರು.


ಫಿಲಿಷ್ಟಿಯರು ಸಂಸೋನನನ್ನು ಬಂಧಿಸಿ ಅವನ ಕಣ್ಣುಗಳನ್ನು ಕಿತ್ತು ಗಾಜಾ ನಗರಕ್ಕೆ ತೆಗೆದುಕೊಂಡು ಹೋದರು. ಅವನು ಓಡಿಹೋಗದಂತೆ ಅವನಿಗೆ ಸಂಕೋಲೆಗಳನ್ನು ಬಿಗಿದರು. ಅವರು ಸಂಸೋನನನ್ನು ಒಂದು ಸೆರೆಮನೆಯಲ್ಲಿಟ್ಟು ಧಾನ್ಯಬೀಸುವ ಕೆಲಸಕ್ಕೆ ಹಚ್ಚಿದರು.


ಒಂದು ದಿನ ಸಂಸೋನನು ಗಾಜಾ ನಗರಕ್ಕೆ ಹೋದನು. ಅವನು ಅಲ್ಲಿ ಒಬ್ಬ ವೇಶ್ಯೆಯನ್ನು ಕಂಡು ಆ ರಾತ್ರಿ ಅವಳೊಂದಿಗಿರಲು ಅವಳ ಮನೆಯೊಳಗೆ ಹೋದನು.


ಯೆಹೂದ್ಯರು ಗಾಜಾ ನಗರವನ್ನೂ ಅದರ ಸುತ್ತಮುತ್ತಲಿನ ಎಲ್ಲಾ ಸಣ್ಣ ಪಟ್ಟಣಗಳನ್ನೂ ಸ್ವಾಧೀನಪಡಿಸಿಕೊಂಡರು. ಯೆಹೂದ್ಯರು ಅಷ್ಕೆಲೋನ್ ಮತ್ತು ಎಕ್ರೋನ್ ನಗರಗಳನ್ನೂ ಅವುಗಳ ಸುತ್ತಮುತ್ತಲಿನ ಎಲ್ಲಾ ಸಣ್ಣಪುಟ್ಟ ಪಟ್ಟಣಗಳನ್ನೂ ಸಹ ಸ್ವಾಧೀನಪಡಿಸಿಕೊಂಡರು.


“ಅವನು ಕುರಿಮರಿಯನ್ನು ಕೊಡುವುದಕ್ಕೆ ಶಕ್ತನಾಗಿಲ್ಲದಿದ್ದರೆ, ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ಅವುಗಳಲ್ಲಿ ಒಂದನ್ನು ದೋಷಪರಿಹಾರಕ ಯಜ್ಞವನ್ನಾಗಿಯೂ ಇನ್ನೊಂದನ್ನು ಸರ್ವಾಂಗಹೋಮವಾಗಿಯೂ ಸಮರ್ಪಿಸಬೇಕು.


“ಈಜಿಪ್ಟಿನವರಿಗೆ ಕಳುಹಿಸಿದಂತೆ ನಿಮಗೂ ಮೈಯಲ್ಲಿ ಬಾಧಿಸುವ ಹುಣ್ಣುಗಳನ್ನು ಕಳುಹಿಸುವನು. ದೇಹದಲ್ಲಿ ಗಡ್ಡೆಗಳುಂಟಾಗುವವು. ಕೀವುಸೋರುವ ಹುಣ್ಣುಗಳು, ಗುಣವಾಗದ ತುರಿಸುವ ಕಜ್ಜಿಗಳು ಉಂಟಾಗುವವು.


ಯೆಹೋವನು ಹೇಳುವುದೇನೆಂದರೆ, “ಗಾಜದ ಜನರನ್ನು ಅವರು ಮಾಡಿದ ಅಪರಾಧಗಳ ನಿಮಿತ್ತ ಖಂಡಿತವಾಗಿಯೂ ಶಿಕ್ಷಿಸುವೆನು. ಯಾಕೆಂದರೆ ಅವರು ಒಂದು ಇಡೀ ಜನಾಂಗವನ್ನೇ ಎದೋಮಿಗೆ ಗುಲಾಮರನ್ನಾಗಿ ಕಳುಹಿಸಿದರು.


ಸಂಸೋನನು ಬಹಳ ಕೋಪಗೊಂಡನು. ಯೆಹೋವನ ಆತ್ಮವು ಸಂಸೋನನ ಮೇಲೆ ಪ್ರಬಲವಾಗಿ ಬಂತು. ಅವನು ಅಷ್ಕೆಲೋನ್ ನಗರಕ್ಕೆ ಧಾವಿಸಿದನು. ಆ ನಗರದಲ್ಲಿ ಅವನು ಮೂವತ್ತು ಜನ ಫಿಲಿಷ್ಟಿಯರನ್ನು ಕೊಂದನು. ಆಮೇಲೆ ಅವನು ಹೆಣಗಳ ಮೇಲಿನ ಎಲ್ಲ ಬಟ್ಟೆಗಳನ್ನೂ ಸ್ವತ್ತನ್ನೂ ಸುಲಿದುಕೊಂಡನು. ಆ ಬಟ್ಟೆಗಳನ್ನು ತಂದು ಒಗಟಿನ ಅರ್ಥ ಹೇಳಿದ ಜನರಿಗೆ ಕೊಟ್ಟನು. ಬಳಿಕ ಅವನು ತನ್ನ ತಂದೆಯ ಮನೆಗೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು