Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 6:18 - ಪರಿಶುದ್ದ ಬೈಬಲ್‌

18 ಫಿಲಿಷ್ಟಿಯರು ಚಿನ್ನದ ಇಲಿಗಳನ್ನೂ ಕಳುಹಿಸಿದ್ದರು. ಫಿಲಿಷ್ಟಿಯರ ಐದು ಅಧಿಪತಿಗಳಿಗೆ ಸೇರಿದ್ದ ಐದು ಪಟ್ಟಣಗಳ ಸಂಖ್ಯೆಗನುಸಾರವಾಗಿ ಈ ಇಲಿಗಳಿದ್ದವು. ಈ ಪಟ್ಟಣಗಳ ಸುತ್ತ ಗೋಡೆಗಳಿದ್ದು ಹಳ್ಳಿಗಳು ಈ ಪಟ್ಟಣಗಳನ್ನು ಸುತ್ತುವರಿದಿದ್ದವು. ಬೇತ್‌ಷೆಮೆಷಿನ ಜನರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಒಂದು ಕಲ್ಲಿನ ಮೇಲಿಟ್ಟರು. ಬೇತ್‌ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿ ಆ ಕಲ್ಲು ಈಗಲೂ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರು ಕಳುಹಿಸಿದ ಬಂಗಾರದ ಇಲಿಗಳು ಫಿಲಿಷ್ಟಿಯರ ಐದು ಮಂದಿ ಅರಸುಗಳ ಅಧೀನದಲ್ಲಿದ್ದ ಎಲ್ಲಾ ಗ್ರಾಮ ನಗರಗಳ ಸಂಖ್ಯೆಗಳಿಗೂ ಸರಿಯಾಗಿದ್ದವು. ಬೇತ್ ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿ ಇರುವ ಯೆಹೋವನ ಮಂಜೂಷವೂ ಇಡಲ್ಪಟ್ಟ ಆ ದೊಡ್ಡ ಕಲ್ಲೇ ಇದಕ್ಕೆ ಸಾಕ್ಷಿಯಾಗಿ ಇಂದಿಗೂ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅವರು ಕಳುಹಿಸಿದ ಬಂಗಾರದ ಇಲಿಗಳು ಫಿಲಿಷ್ಟಿಯರ ಐದು ಮಂದಿ ರಾಜರ ಅಧೀನದಲ್ಲಿದ್ದ ಎಲ್ಲ ಪುಟ್ಟ ಗ್ರಾಮಗಳ ಹಾಗು ಕೋಟೆಪೇಟೆಗಳ ಸಂಖ್ಯೆಗೆ ಸರಿಯಾಗಿದ್ದವು. ಸರ್ವೇಶ್ವರನ ಮಂಜೂಷವನ್ನು ಇಡಲಾಗಿದ್ದ ಆ ದೊಡ್ಡ ಕಲ್ಲು ಇಂದಿನವರೆಗೂ ಬೇತ್ ಷೆಮೆಷಿನ ಯೆಹೋಶುವಿನ ಹೊಲದಲ್ಲಿ ಸಾಕ್ಷಿಯಾಗಿ ನಿಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವರು ಕಳುಹಿಸಿದ ಬಂಗಾರದ ಇಲಿಗಳು ಫಿಲಿಷ್ಟಿಯರ ಐದು ಮಂದಿ ಪ್ರಭುಗಳ ಅಧೀನದಲ್ಲಿದ್ದ ಎಲ್ಲಾ ಗ್ರಾಮನಗರಗಳ ಸಂಖ್ಯೆಗೂ ಸರಿಯಾಗಿದ್ದವು. ಬೇತ್‍ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿ ಇಂದಿನವರೆಗೂ ಇರುವ ಯೆಹೋವನ ಮಂಜೂಷವು ಇಡಲ್ಪಟ್ಟ ಆ ದೊಡ್ಡ ಕಲ್ಲೇ ಈ ಗ್ರಾಮನಗರಗಳಿಗೆ ಮೇರೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವರು ಕಳುಹಿಸಿದ ಬಂಗಾರದ ಇಲಿಗಳು ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಬಲವುಳ್ಳ ಪಟ್ಟಣಗಳ, ಗ್ರಾಮಗಳ ಲೆಕ್ಕಕ್ಕೆ ಸರಿಯಾಗಿದ್ದವು. ಯೆಹೋವ ದೇವರ ಮಂಜೂಷವನ್ನಿಟ್ಟ ದೊಡ್ಡ ಬಂಡೆಯು ಇಂದಿನವರೆಗೂ ಬೇತ್ ಷೆಮೆಷ್ ಊರಿನವನಾದ ಯೆಹೋಶುವನ ಹೊಲದಲ್ಲಿ ಸಾಕ್ಷಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 6:18
4 ತಿಳಿವುಗಳ ಹೋಲಿಕೆ  

ಈಜಿಪ್ಟಿನ ಶೀಹೋರ್ ನದಿಯಿಂದ ಉತ್ತರದ ಎಕ್ರೋನ್ ಸೀಮೆಯವರೆಗೂ ಚಾಚಿಕೊಂಡಿರುವ ಭೂಮಿಯನ್ನು ನೀನು ವಶಪಡಿಸಿಕೊಂಡಿಲ್ಲ. ಆ ಭೂಮಿಯು ಇನ್ನೂ ಕಾನಾನ್ಯರ ಅಧೀನದಲ್ಲಿದೆ. ನೀನು ಗಾಜಾ, ಅಷ್ಡೋದ್, ಅಷ್ಕೆಲೋನ್, ಗತೂರು ಮತ್ತು ಎಕ್ರೋನಿನ ಎಂಬ ಐದು ಮಂದಿ ಫಿಲಿಷ್ಟಿಯರ ನಾಯಕರನ್ನು ಇನ್ನೂ ಸೋಲಿಸಬೇಕಾಗಿದೆ.


ಆ ಪಟ್ಟಣಗಳೆಲ್ಲಾ ಬಹಳ ಪ್ರಬಲವಾಗಿದ್ದವು. ಅವುಗಳಿಗೆ ಎತ್ತರವಾದ ಪೌಳಿಗೋಡೆಗಳಿದ್ದು ಕದಗಳಿಂದಲೂ ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟಿದ್ದವು. ಇನ್ನೂ ಅನೇಕ ಪಟ್ಟಣಗಳಿಗೆ ಕೋಟೆಗಳಿರಲಿಲ್ಲ.


ಫಿಲಿಷ್ಟಿಯರು, “ಇಸ್ರೇಲರ ದೇವರು ನಮ್ಮನ್ನು ಕ್ಷಮಿಸಬೇಕಾದರೆ ನಾವು ಯಾವ ಕಾಣಿಕೆಗಳನ್ನು ಕಳುಹಿಸಬೇಕು?” ಎಂದು ಕೇಳಿದರು. ಅರ್ಚಕರು ಮತ್ತು ಮಾಂತ್ರಿಕರು, “ನಿಮ್ಮಲ್ಲಿ ಐದು ಮಂದಿ ಅಧಿಪತಿಗಳಿದ್ದೀರಿ. ಪ್ರತಿಯೊಂದು ನಗರಕ್ಕೆ ಒಬ್ಬ ಅಧಿಪತಿಯಿದ್ದಾನೆ. ನೀವು ಮತ್ತು ನಿಮ್ಮ ಅಧಿಪತಿಗಳೆಲ್ಲರೂ ಒಂದೇ ರೀತಿಯಲ್ಲಿ ತೊಂದರೆಗೊಳಗಾಗಿದ್ದೀರಿ. ಆದ್ದರಿಂದ ಚಿನ್ನದಲ್ಲಿ ಐದು ಗಡ್ಡೆಗಳನ್ನು ಹಾಗೂ ಐದು ಇಲಿಗಳನ್ನು ಮಾಡಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು