1 ಸಮುಯೇಲ 6:2 - ಪರಿಶುದ್ದ ಬೈಬಲ್2 ಫಿಲಿಷ್ಟಿಯರು ತಮ್ಮ ಅರ್ಚಕರನ್ನು ಮತ್ತು ಮಾಂತ್ರಿಕರನ್ನು ಕರೆದು, “ಯೆಹೋವನ ಪೆಟ್ಟಿಗೆಯನ್ನು ಏನು ಮಾಡೋಣ? ಇದನ್ನು ಮರಳಿ ಹಿಂದಕ್ಕೆ ಕಳುಹಿಸುವುದು ಹೇಗೆ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಂತರ ಫಿಲಿಷ್ಟಿಯರು ಪೂಜಾರಿಗಳನ್ನೂ, ಕಣಿಹೇಳುವವರನ್ನೂ ಕರೆದು ಅವರಿಗೆ, “ಯೆಹೋವನ ಮಂಜೂಷವನ್ನು ಏನು ಮಾಡಬೇಕು? ಅದನ್ನು ಪುನಃ ಅದರ ಸ್ಥಳಕ್ಕೆ ಹೇಗೆ ಕಳುಹಿಸಬೇಕು ತಿಳಿಸಿರಿ” ಅನ್ನಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಫಿಲಿಷ್ಟಿಯರು ಅವರ ಪೂಜಾರಿಗಳನ್ನೂ ಮಂತ್ರಗಾರರನ್ನೂ ಕರೆದು, “ಸರ್ವೇಶ್ವರನ ಮಂಜೂಷವನ್ನು ಏನು ಮಾಡಬೇಕು? ಅದನ್ನು ಮರಳಿ ಅದರ ಸ್ಥಳಕ್ಕೆ ಹೇಗೆ ಕಳುಹಿಸುವುದು? ನಮಗೆ ತಿಳಿಸಿ,” ಎಂದು ಕೇಳಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಫಿಲಿಷ್ಟಿಯರು ಪೂಜಾರಿಗಳನ್ನೂ ಕಣಿಹೇಳುವವರನ್ನೂ ಕರೆದು ಅವರಿಗೆ - ಯೆಹೋವನ ಮಂಜೂಷವನ್ನು ಏನು ಮಾಡಬೇಕು? ಅದನ್ನು ತಿರಿಗಿ ಅದರ ಸ್ಥಳಕ್ಕೆ ಹೇಗೆ ಕಳುಹಿಸಬೇಕು? ತಿಳಿಸಿರಿ ಅನ್ನಲು ಅವರು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಫಿಲಿಷ್ಟಿಯರು ಯಾಜಕರನ್ನೂ ಕಣಿಹೇಳುವವರನ್ನೂ ಕರೆದು, “ಯೆಹೋವ ದೇವರ ಮಂಜೂಷವನ್ನು ನಾವೇನು ಮಾಡಬೇಕು? ನಾವು ಅದನ್ನು ಹೇಗೆ ಅದರ ಸ್ಥಳಕ್ಕೆ ಕಳುಹಿಸುವುದು ನಮಗೆ ತಿಳಿಸಿರಿ,” ಎಂದರು. ಅಧ್ಯಾಯವನ್ನು ನೋಡಿ |
ಆಗ ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ತನ್ನಲ್ಲಿಗೆ ಕರೆಸಿದನು. ಅವನು ಆ ವಿದ್ವಾಂಸರಿಗೆ, “ಈ ಬರವಣಿಗೆಯನ್ನು ಓದಿ ನನಗೆ ಅದರ ಅರ್ಥವನ್ನು ಹೇಳಬಲ್ಲ ಮನುಷ್ಯನಿಗೆ ನಾನು ಬಹುಮಾನವನ್ನು ಕೊಡುತ್ತೇನೆ. ಆ ಮನುಷ್ಯನಿಗೆ ನಾನು ಕಂದು ಬಣ್ಣದ ವಸ್ತ್ರಗಳನ್ನು ಕೊಡುತ್ತೇನೆ. ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.