1 ಸಮುಯೇಲ 6:21 - ಪರಿಶುದ್ದ ಬೈಬಲ್21 ಕಿರ್ಯತ್ಯಾರೀಮಿನಲ್ಲಿ ಒಬ್ಬ ಯಾಜಕನಿದ್ದನು. ಬೇತ್‌ಷೆಮೆಷಿನ ಜನರು ಕಿರ್ಯತ್ಯಾರೀಮಿನವರ ಬಳಿಗೆ ಸಂದೇಶಕರನ್ನು ಕಳುಹಿಸಿ, “ಫಿಲಿಷ್ಟಿಯರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಹಿಂದಕ್ಕೆ ತಂದಿರುವರು. ನೀವು ಬಂದು ಅದನ್ನು ನಿಮ್ಮ ಪಟ್ಟಣಕ್ಕೆ ತೆಗೆದುಕೊಂಡು ಹೋಗಿ” ಎಂದು ತಿಳಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಕಿರ್ಯತ್ಯಾರೀಮಿನವರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ಫಿಲಿಷ್ಟಿಯರು ಯೆಹೋವನ ಮಂಜೂಷವನ್ನು ಕಳುಹಿಸಿದ್ದಾರೆ; ನೀವು ಬಂದು ಅದನ್ನು ತೆಗೆದುಕೊಂಡು ಹೋಗಿರಿ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಕಿರ್ಯತ್ಯಾರೀಮಿನವರ ಬಳಿಗೆ ದೂತರನ್ನು ಕಳುಹಿಸಿ, “ಫಿಲಿಷ್ಟಿಯರು ಸರ್ವೇಶ್ವರನ ಮಂಜೂಷವನ್ನು ಕಳುಹಿಸಿದ್ದಾರೆ; ನೀವು ಬಂದು ಅದನ್ನು ತೆಗೆದುಕೊಂಡು ಹೋಗಿ,” ಎಂದು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಕಿರ್ಯತ್ಯಾರೀವಿುನವರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ - ಫಿಲಿಷ್ಟಿಯರು ಯೆಹೋವನ ಮಂಜೂಷವನ್ನು ಕಳುಹಿಸಿದ್ದಾರೆ; ನೀವು ಬಂದು ಅದನ್ನು ತೆಗೆದುಕೊಂಡು ಹೋಗಿರಿ ಎಂದು ಹೇಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅವರು ಕಿರ್ಯತ್ ಯಾರೀಮಿನ ನಿವಾಸಿಗಳಿಗೆ ದೂತರನ್ನು ಕಳುಹಿಸಿ, “ಫಿಲಿಷ್ಟಿಯರು ಯೆಹೋವ ದೇವರ ಮಂಜೂಷವನ್ನು ತಿರುಗಿ ಕಳುಹಿಸಿದ್ದಾರೆ, ನೀವು ಬಂದು ಅದನ್ನು ನಿಮ್ಮ ಬಳಿಗೆ ತೆಗೆದುಕೊಂಡು ಹೋಗಿರಿ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |
ಆಗ ದಾವೀದನು ತನ್ನ ಜನರೊಂದಿಗೆ ಯೆಹೂದದ ಬಾಳಾ ಎಂಬಲ್ಲಿಗೆ ಹೋದನು. ಯೆಹೂದದ ಬಾಳಾ ಎಂಬ ಸ್ಥಳದಲ್ಲಿದ್ದ ಪವಿತ್ರ ಪೆಟ್ಟಿಗೆಯನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದನು. ಯೆಹೋವನನ್ನು ಆರಾಧಿಸುವುದಕ್ಕಾಗಿ ಜನರು ಪವಿತ್ರ ಪೆಟ್ಟಿಗೆಯ ಬಳಿ ಹೋಗುತ್ತಿದ್ದರು. ಪವಿತ್ರ ಪೆಟ್ಟಿಗೆಯು ಯೆಹೋವನ ಪೀಠದಂತಿತ್ತು. ಪವಿತ್ರ ಪೆಟ್ಟಿಗೆಯ ಮೇಲ್ಭಾಗದಲ್ಲಿ ಕೆರೂಬಿಗಳಿದ್ದವು. ಯೆಹೋವನು ರಾಜನಂತೆ ದೂತರ ಮೇಲೆ ಆಸೀನನಾಗಿದ್ದನು.