Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 6:4 - ಪರಿಶುದ್ದ ಬೈಬಲ್‌

4 ಫಿಲಿಷ್ಟಿಯರು, “ಇಸ್ರೇಲರ ದೇವರು ನಮ್ಮನ್ನು ಕ್ಷಮಿಸಬೇಕಾದರೆ ನಾವು ಯಾವ ಕಾಣಿಕೆಗಳನ್ನು ಕಳುಹಿಸಬೇಕು?” ಎಂದು ಕೇಳಿದರು. ಅರ್ಚಕರು ಮತ್ತು ಮಾಂತ್ರಿಕರು, “ನಿಮ್ಮಲ್ಲಿ ಐದು ಮಂದಿ ಅಧಿಪತಿಗಳಿದ್ದೀರಿ. ಪ್ರತಿಯೊಂದು ನಗರಕ್ಕೆ ಒಬ್ಬ ಅಧಿಪತಿಯಿದ್ದಾನೆ. ನೀವು ಮತ್ತು ನಿಮ್ಮ ಅಧಿಪತಿಗಳೆಲ್ಲರೂ ಒಂದೇ ರೀತಿಯಲ್ಲಿ ತೊಂದರೆಗೊಳಗಾಗಿದ್ದೀರಿ. ಆದ್ದರಿಂದ ಚಿನ್ನದಲ್ಲಿ ಐದು ಗಡ್ಡೆಗಳನ್ನು ಹಾಗೂ ಐದು ಇಲಿಗಳನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಜನರು, “ನಾವು ಪ್ರಾಯಶ್ಚಿತ್ತಾರ್ಥವಾಗಿ ಏನು ಕಳುಹಿಸಬೇಕು?” ಎಂದು ಕೇಳಲು ಅವರು, “ನಿಮಗೂ ನಿಮ್ಮ ಪ್ರಭುಗಳಿಗೂ ಒಂದೇ ವಿಧವಾದ ವ್ಯಾಧಿ ಇರುವುದರಿಂದ ಪ್ರಭುಗಳ ಸಂಖ್ಯೆಗೆ ಸರಿಯಾಗಿ ಬಂಗಾರದ ಐದು ಗಡ್ಡೆಗಳನ್ನೂ, ಬಂಗಾರದ ಐದು ಇಲಿಗಳನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆ ಜನರು, “ನಾವು ಪ್ರಾಯಶ್ಚಿತಾರ್ಥವಾಗಿ ಏನನ್ನು ಕಳುಹಿಸಬೇಕು?” ಎಂದು ವಿಚಾರಿಸಿದರು. ಅದಕ್ಕೆ ಅವರು, “ನಿಮಗೂ ನಿಮ್ಮ ರಾಜರುಗಳಿಗೂ ಒಂದೇ ವಿಧವಾದ ವ್ಯಾಧಿ ಇರುವುದರಿಂದ ನಿಮ್ಮ ರಾಜರುಗಳ ಸಂಖ್ಯೆಗೆ ಸರಿಯಾಗಿ ಐದು ಬಂಗಾರದ ಗಡ್ಡೆಗಳನ್ನು ಹಾಗು ಐದು ಬಂಗಾರದ ಇಲಿಗಳನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಜನರು - ನಾವು ಪ್ರಾಯಶ್ಚಿತ್ತಾರ್ಥವಾಗಿ ಕಳುಹಿಸತಕ್ಕದ್ದೇನು ಎನ್ನಲು ಅವರು - ನಿಮಗೂ ನಿಮ್ಮ ಪ್ರಭುಗಳಿಗೂ ಒಂದೇ ವಿಧ ವ್ಯಾಧಿಯಿರುವದರಿಂದ ಪ್ರಭುಗಳ ಸಂಖ್ಯೆಗೆ ಸರಿಯಾಗಿ ಬಂಗಾರದ ಐದು ಗಡ್ಡೆಗಳನ್ನೂ ಇಲಿಗಳನ್ನೂ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಅವರು, “ದೋಷಪರಿಹಾರ ಕಾಣಿಕೆಗಾಗಿ ನಾವು ಅದರ ಸಂಗಡ ಕಳುಹಿಸತಕ್ಕದ್ದೇನು?” ಎಂದರು. ಅದಕ್ಕವರು, “ನಿಮಗೂ ನಿಮ್ಮ ಪ್ರಭುಗಳಿಗೂ ಒಂದೇ ವಿಧ ವ್ಯಾಧಿಯಿರುವುದರಿಂದ ಫಿಲಿಷ್ಟಿಯರ ಅಧಿಪತಿಗಳ ಸಂಖ್ಯೆಗೆ ಸರಿಯಾಗಿ ಒಬ್ಬೊಬ್ಬರಿಗೆ ಬಂಗಾರದ ಐದು ಗಡ್ಡೆಗಳನ್ನು ಮತ್ತು ಬಂಗಾರದ ಐದು ಇಲಿಗಳನ್ನೂ ಕಳುಹಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 6:4
10 ತಿಳಿವುಗಳ ಹೋಲಿಕೆ  

ಐದು ಮಂದಿ ಫಿಲಿಷ್ಟಿಯ ಪ್ರಭುಗಳು, ಎಲ್ಲಾ ಕಾನಾನ್ಯರು, ಚೀದೋನ್ಯರು, ಲೆಬನೋನ್ ಪರ್ವತಾವಳಿಯಲ್ಲಿ ಬಾಳ್‌ಹೆರ್ಮೊನ್ ಬೆಟ್ಟದಿಂದ ಲೆಬೂಹಮಾತಿನ ದಾರಿಯವರೆಗೆ ವಾಸವಾಗಿರುವ ಹಿವ್ವಿಯರು.


ಈಜಿಪ್ಟಿನ ಶೀಹೋರ್ ನದಿಯಿಂದ ಉತ್ತರದ ಎಕ್ರೋನ್ ಸೀಮೆಯವರೆಗೂ ಚಾಚಿಕೊಂಡಿರುವ ಭೂಮಿಯನ್ನು ನೀನು ವಶಪಡಿಸಿಕೊಂಡಿಲ್ಲ. ಆ ಭೂಮಿಯು ಇನ್ನೂ ಕಾನಾನ್ಯರ ಅಧೀನದಲ್ಲಿದೆ. ನೀನು ಗಾಜಾ, ಅಷ್ಡೋದ್, ಅಷ್ಕೆಲೋನ್, ಗತೂರು ಮತ್ತು ಎಕ್ರೋನಿನ ಎಂಬ ಐದು ಮಂದಿ ಫಿಲಿಷ್ಟಿಯರ ನಾಯಕರನ್ನು ಇನ್ನೂ ಸೋಲಿಸಬೇಕಾಗಿದೆ.


ಆದರೆ ಫಿಲಿಷ್ಟಿಯರು ದೇವರ ಪವಿತ್ರ ಪೆಟ್ಟಿಗೆಯನ್ನು “ಗತ್”ಗೆ ಕಳುಹಿಸಿದ ನಂತರ ಯೆಹೋವನು “ಗತ್” ನಗರವನ್ನು ದಂಡಿಸಿದನು. ಅಲ್ಲಿಯ ಜನರು ಬಹಳ ಭಯಗೊಂಡರು. ಚಿಕ್ಕವರು, ದೊಡ್ಡವರು ಎನ್ನದೆ ಎಲ್ಲರಿಗೂ ದೇವರು ತೊಂದರೆ ಮಾಡಿದನು. ಗತ್ ಜನರಿಗೂ ದೇವರು ಗಡ್ಡೆರೋಗವನ್ನು ಬರಮಾಡಿದನು.


ಅಷ್ಡೋದಿನ ಮತ್ತು ಅವರ ನೆರೆಹೊರೆಯ ಜನರ ಜೀವನವನ್ನು ಯೆಹೋವನು ಕಠಿಣಗೊಳಿಸಿದನು. ಯೆಹೋವನು ಅವರಿಗೆ ಹೆಚ್ಚು ತೊಂದರೆ ಕೊಟ್ಟನು. ಆತನು ಅವರಿಗೆ ಗಡ್ಡೆರೋಗವನ್ನು ಬರಮಾಡಿದನು. ಅಲ್ಲದೆ ಯೆಹೋವನು ಅವರ ಬಳಿಗೆ ಇಲಿಗಳನ್ನು ಕಳುಹಿಸಿದನು. ಆ ಇಲಿಗಳು ಅವರ ಹಡಗುಗಳಲ್ಲೆಲ್ಲಾ ಮತ್ತು ಭೂಮಿಯಲ್ಲೆಲ್ಲಾ ಹರಡಿಕೊಂಡವು. ನಗರದ ಜನರು ಬಹು ಭಯಗೊಂಡರು.


ಹೀಗೆ ನಿಮ್ಮ ದೇಶವನ್ನು ನಾಶಗೊಳಿಸುತ್ತಿರುವ ಗಡ್ಡೆಗಳ, ಇಲಿಗಳ ಮಾದರಿಗಳನ್ನು ಮಾಡಿಸಿರಿ. ಇಸ್ರೇಲರ ದೇವರಿಗೆ ಚಿನ್ನದ ಆ ಮಾದರಿಗಳನ್ನು ಕಾಣಿಕೆಯಾಗಿ ಸಲ್ಲಿಸಿರಿ. ಆಗ ಇಸ್ರೇಲರ ದೇವರು ನಿಮ್ಮನ್ನೂ ನಿಮ್ಮ ದೇವರುಗಳನ್ನೂ ನಿಮ್ಮ ದೇಶವನ್ನೂ ಶಿಕ್ಷಿಸುವುದನ್ನು ನಿಲ್ಲಿಸಬಹುದು.


ಬಹಳ ಜನರು ಸತ್ತರು; ಸಾಯದೆ ಉಳಿದ ಜನರಿಗೆ ಗಡ್ಡೆರೋಗವು ಬಂದಿತು. ಅವರ ಗೋಳಾಟವು ಆಕಾಶಮಂಡಲವನ್ನು ಮುಟ್ಟಿತ್ತು.


ಅಲ್ಲದೆ ಮೋಶೆಯು ಹೇಳಿದಂತೆಯೇ ಇಸ್ರೇಲರು ತಮ್ಮ ನೆರೆಮನೆಯವರ ಬಳಿಗೆ ಹೋಗಿ ಬಟ್ಟೆಗಳನ್ನೂ ಬೆಳ್ಳಿಬಂಗಾರಗಳ ವಸ್ತುಗಳನ್ನೂ ಕೇಳಿಕೊಂಡರು.


ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಬಂಡಿಯ ಮೇಲಿಡಿರಿ. ಚಿನ್ನದ ಮಾದರಿಗಳನ್ನು ಚೀಲದಲ್ಲಿಟ್ಟು ಪೆಟ್ಟಿಗೆಯ ಪಕ್ಕದಲ್ಲಿಡಿರಿ. ಈ ಚಿನ್ನದ ಮಾದರಿಗಳು ನೀವು ನಿಮ್ಮ ಪಾಪಕ್ಷಮೆಗಾಗಿ ದೇವರಿಗೆ ಕಳುಹಿಸುತ್ತಿರುವ ಕಾಣಿಕೆಗಳಾಗಿವೆ; ಬಂಡಿಯನ್ನು ಅದರ ದಾರಿಯಲ್ಲಿ ಕಳುಹಿಸಿರಿ.


ಸಂಸೋನನು ಬಹಳ ಕೋಪಗೊಂಡನು. ಯೆಹೋವನ ಆತ್ಮವು ಸಂಸೋನನ ಮೇಲೆ ಪ್ರಬಲವಾಗಿ ಬಂತು. ಅವನು ಅಷ್ಕೆಲೋನ್ ನಗರಕ್ಕೆ ಧಾವಿಸಿದನು. ಆ ನಗರದಲ್ಲಿ ಅವನು ಮೂವತ್ತು ಜನ ಫಿಲಿಷ್ಟಿಯರನ್ನು ಕೊಂದನು. ಆಮೇಲೆ ಅವನು ಹೆಣಗಳ ಮೇಲಿನ ಎಲ್ಲ ಬಟ್ಟೆಗಳನ್ನೂ ಸ್ವತ್ತನ್ನೂ ಸುಲಿದುಕೊಂಡನು. ಆ ಬಟ್ಟೆಗಳನ್ನು ತಂದು ಒಗಟಿನ ಅರ್ಥ ಹೇಳಿದ ಜನರಿಗೆ ಕೊಟ್ಟನು. ಬಳಿಕ ಅವನು ತನ್ನ ತಂದೆಯ ಮನೆಗೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು