Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 6:9 - ಪರಿಶುದ್ದ ಬೈಬಲ್‌

9 ಆದರೆ ಅದರ ಕಡೆ ಗಮನವಿರಲಿ. ಅದು ತಾನಾಗಿ ಇಸ್ರೇಲಿಗೆ ಸೇರಿದ ಬೇತ್‌ಷೆಮೆಷಿನ ಕಡೆಗೆ ಹೋದರೆ, ಆಗ ಆ ದೊಡ್ಡ ಕೇಡನ್ನು ನಮಗುಂಟು ಮಾಡಿದವನು ಯೆಹೋವನೇ ಸರಿ. ಆದರೆ ಹಸುಗಳು ಬೇತ್‌ಷೆಮೆಷಿಗೆ ಹೋಗದಿದ್ದರೆ, ನಮ್ಮನ್ನು ಶಿಕ್ಷಿಸಿದವನು ಯೆಹೋವನಲ್ಲವೆಂದು ನಮಗೆ ಗೊತ್ತಾಗುವುದು. ನಮಗುಂಟಾದ ಕಾಯಿಲೆಯು ತಾನಾಗಿಯೇ ಬಂದದ್ದೆಂದು ತಿಳಿಯುವುದು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅ ಹಸುಗಳು ತಾವಾಗಿ ಸ್ವದೇಶದ ದಾರಿ ಹಿಡಿದು ಬೇತ್ ಷೆಮೆಷಿನ ಕಡೆಗೆ ಹೋದರೆ ಈ ದೊಡ್ಡ ಕೇಡನ್ನು ಬರಮಾಡಿದವನು ಯೆಹೋವನೇ ಎಂದೂ, ಆ ಮಾರ್ಗವನ್ನು ಹಿಡಿಯದಿದ್ದರೆ ಆತನ ಹಸ್ತವು ನಮ್ಮನ್ನು ಬಾಧಿಸಲ್ಲಿಲ್ಲ ಇದು ಆಕಸ್ಮಿಕವಾಗಿ ಬಂದಿದೆ ಎಂದು, ತಿಳಿದುಕೊಳ್ಳಿರಿ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಬಂಡಿ ಹೋಗುವ ದಾರಿಯನ್ನು ಗಮನಿಸಿರಿ. ಅದು ತಾನಾಗಿ ಸ್ವದೇಶದ ದಾರಿಹಿಡಿದು ಬೇತ್‍ಷೆಮೆಷಿನ ಕಡೆಗೆ ಹೋದರೆ ಈಗ ಬಂದಿರುವ ಕೇಡನ್ನು ಕಳುಹಿಸಿದವನು ಆ ಸರ್ವೇಶ್ವರನೇ ಎಂದು ತಿಳಿಯಿರಿ. ಬಂಡಿ ಆ ಮಾರ್ಗವನ್ನು ಹಿಡಿಯದಿದ್ದರೆ ಆ ಸರ್ವೇಶ್ವರನ ಹಸ್ತ ನಮ್ಮನ್ನು ಮುಟ್ಟಲಿಲ್ಲ, ಈ ಕೇಡು ಆಕಸ್ಮಿಕವಾಗಿ ಬಂದಿದೆ ಎಂದು ತಿಳಿದುಕೊಳ್ಳಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅದು ತಾನಾಗಿ ಸ್ವದೇಶದ ದಾರಿ ಹಿಡಿದು ಬೇತ್‍ಷೆಮೆಷಿನ ಕಡೆಗೆ ಹೋದರೆ ಈ ದೊಡ್ಡ ಕೇಡನ್ನು ಬರಮಾಡಿದವನು ಯೆಹೋವನೇ ಎಂದೂ ಆ ಮಾರ್ಗ ಹಿಡಿಯದಿದ್ದರೆ ಆತನ ಹಸ್ತವು ನಮ್ಮನ್ನು ಮುಟ್ಟಲಿಲ್ಲ, ಅದು ನಮ್ಮ ಅದೃಷ್ಟವೇ ಎಂದೂ ತಿಳಿದುಕೊಳ್ಳಿರಿ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ನೋಡಿರಿ, ಅದು ತನ್ನ ಮೇರೆಯಾದ ಬೇತ್ ಷೆಮೆಷ್ ಎಂಬ ಮಾರ್ಗವನ್ನು ಹಿಡಿದು ಹೋದರೆ, ಯೆಹೋವ ದೇವರು ಈ ದೊಡ್ಡ ಕೇಡನ್ನು ನಮಗೆ ಮಾಡಿದ್ದಾರೆ, ಇಲ್ಲದೆ ಹೋದರೆ ಅವರ ಹಸ್ತವು ನಮ್ಮನ್ನು ಮುಟ್ಟಲಿಲ್ಲ, ಅದು ತಾನಾಗಿಯೇ ನಮಗೆ ಆಯಿತೆಂದು ತಿಳಿದುಕೊಳ್ಳಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 6:9
13 ತಿಳಿವುಗಳ ಹೋಲಿಕೆ  

ಬಾಲಾದಲ್ಲಿ ಆ ಸೀಮೆಯು ಪಶ್ಚಿಮಕ್ಕೆ ತಿರುಗಿಕೊಂಡು ಸೇಯೀರ್ ಬೆಟ್ಟಪ್ರದೇಶಕ್ಕೆ ಹೋಗುತ್ತದೆ; ಅಲ್ಲಿಂದ ಅದು ಕೆಸಾಲೋನ್ ಎಂಬ ಯಾರೀಮ್ ಬೆಟ್ಟದ ಉತ್ತರ ಮಾರ್ಗವಾಗಿ ಇಳಿಯುತ್ತಾ ಬೇತ್‌ಷೆಮೆಷಿಗೂ ಅಲ್ಲಿಂದ ತಿಮ್ನಾ ಊರಿಗೂ ಹೋಗುತ್ತದೆ.


“ಅದೇ ಸಮಯದಲ್ಲಿ ಯೆಹೂದ್ಯ ಯಾಜಕನು ಆ ದಾರಿಯಲ್ಲಿ ಹೋಗುತ್ತಿದ್ದನು. ಯಾಜಕನು ಆ ಮನುಷ್ಯನನ್ನು ನೋಡಿದರೂ ಅವನಿಗೆ ಸಹಾಯಮಾಡದೆ, ತನ್ನ ಪ್ರಯಾಣವನ್ನು ಮುಂದುವರಿಸಿದನು.


ಇದಲ್ಲದೆ ಲೋಕದಲ್ಲಿ ಇನ್ನೂ ಕೆಲವು ಅನ್ಯಾಯಗಳನ್ನು ಗಮನಿಸಿದ್ದೇನೆ. ಅತಿವೇಗದ ಓಟಗಾರನಿಗೆ ಓಟದಲ್ಲಿ ಯಾವಾಗಲೂ ಗೆಲುವಾಗದು; ಬಲಿಷ್ಠವಾದ ಸೈನ್ಯಕ್ಕೆ ಯುದ್ಧದಲ್ಲಿ ಯಾವಾಗಲೂ ಜಯವಾಗದು; ಜ್ಞಾನಿಗೆ ಯಾವಾಗಲೂ ಆಹಾರ ದೊರಕದು; ಜಾಣನಿಗೆ ಯಾವಾಗಲೂ ಐಶ್ವರ್ಯ ದೊರೆಯದು; ಪ್ರವೀಣರಿಗೆ ಯಾವಾಗಲೂ ಹೊಗಳಿಕೆಬಾರದು; ಸಮಯ ಬಂದಾಗ, ಪ್ರತಿಯೊಬ್ಬರಿಗೂ ಕೇಡುಗಳಾಗುತ್ತವೆ.


ಅದಕ್ಕೆ ಆ ಯುವಕನು, “ನಾನು ಆಕಸ್ಮಿಕವಾಗಿ ಗಿಲ್ಬೋವದ ಶಿಖರದ ಮೇಲಿದ್ದೆ. ಸೌಲನು ತನ್ನ ಭರ್ಜಿಯ ಮೇಲೆ ಒರಗಿಕೊಂಡಿದ್ದನ್ನು ಅಲ್ಲಿಂದಲೇ ನಾನು ನೋಡಿದೆ. ಫಿಲಿಷ್ಟಿಯರ ರಥಗಳು ಮತ್ತು ಕುದುರೆಸವಾರರು ಸೌಲನ ಹತ್ತಿರಕ್ಕೆ ಬರುತ್ತಿದ್ದರು.


ಅರ್ಚಕರು ಮತ್ತು ಮಾಂತ್ರಿಕರು, “ಇಸ್ರೇಲರ ಪವಿತ್ರ ಪೆಟ್ಟಿಗೆಯನ್ನು ಹಿಂದಕ್ಕೆ ಕಳುಹಿಸುವುದಾದರೆ, ಬರಿದಾಗಿ ಕಳುಹಿಸಬೇಡಿ. ನೀವು ಕಾಣಿಕೆಗಳನ್ನು ಕಳುಹಿಸಲೇಬೇಕು. ಆಗ ಇಸ್ರೇಲರ ದೇವರು ನಿಮ್ಮ ಪಾಪಗಳನ್ನು ಪರಿಹರಿಸುತ್ತಾನೆ. ಆಗ ನೀವೆಲ್ಲಾ ಗುಣಹೊಂದುವಿರಿ; ಶುದ್ಧರಾಗುವಿರಿ. ದೇವರು ನಿಮ್ಮನ್ನು ದಂಡಿಸುವುದನ್ನು ನಿಲ್ಲಿಸಬೇಕಾದರೆ ನೀವು ಈ ಕಾರ್ಯಗಳನ್ನು ಮಾಡಬೇಕು. ಆಗ ದೇವರು ನಿಮ್ಮನ್ನು ಬಾಧಿಸುವುದಿಲ್ಲ” ಎಂದು ಉತ್ತರಿಸಿದರು.


ಆಯಿನ್, ಯುಟ್ಟಾ ಮತ್ತು ಬೇತ್‌ಷೆಮೆಷ್ ಎಂಬ ಪಟ್ಟಣಗಳನ್ನು ಸಹ ಕೊಟ್ಟರು. ಅವರ ಪಶುಗಳಿಗಾಗಿ ಪಟ್ಟಣಗಳ ಸಮೀಪದಲ್ಲಿದ್ದ ಭೂಮಿಯನ್ನು ಸಹ ಕೊಟ್ಟರು. ಈ ಎರಡು ಗುಂಪುಗಳಿಗೆ ಅವರು ಒಂಭತ್ತು ಪಟ್ಟಣಗಳನ್ನು ಕೊಟ್ಟರು.


ತುತ್ತೂರಿಯ ಎಚ್ಚರಿಕೆಯ ಶಬ್ಧವನ್ನು ಕೇಳಿದ ಜನರು ಖಂಡಿತವಾಗಿ ಹೆದರಿ ನಡುಗುವರು. ಒಂದು ಗಂಡಾಂತರವು ಪಟ್ಟಣಕ್ಕೆ ಬಂದಿರುವುದಾದರೆ ಅದನ್ನು ಬರಮಾಡಿದಾತನು ಯೆಹೋವನೇ.


ಆದರೆ ದೇವರೇ, ನೀನು ಅವರನ್ನು ಶಿಕ್ಷಿಸಿದರೆ ಅವರು ಅದನ್ನು ನೋಡುವರು. ನಿನ್ನ ಜನರ ಮೇಲೆ ನಿನಗಿರುವ ಗಾಢಪ್ರೀತಿಯನ್ನು ಆ ದುಷ್ಟಜನರು ನೋಡಲಿ. ಆಗ ಅವರು ಅವಮಾನ ಹೊಂದುವರು. ನಿನ್ನ ಶತ್ರುಗಳು ತಮ್ಮ ದುಷ್ಟತನದ ಬೆಂಕಿಯಲ್ಲಿಯೇ ಸುಟ್ಟುಹೋಗುವರು.


ಅರ್ಚಕರು ಮತ್ತು ಮಾಂತ್ರಿಕರು ಹೇಳಿದಂತೆಯೇ ಫಿಲಿಷ್ಟಿಯರು ಮಾಡಿದರು. ಫಿಲಿಷ್ಟಿಯರು ಆಗ ತಾನೇ ಕರುಹಾಕಿದ ಎರಡು ಹಸುಗಳನ್ನು ತಂದು, ಅವುಗಳನ್ನು ಬಂಡಿಗೆ ಹೂಡಿದರು. ಅವುಗಳ ಕರುಗಳನ್ನು ಮನೆಯ ದೊಡ್ಡಿಯಲ್ಲಿ ಬಿಟ್ಟರು.


ಹಸುಗಳು ಬೇತ್‌ಷೆಮೆಷಿಗೆ ನೇರವಾಗಿ ಹೋದವು. ಅವು ದಾರಿಯಲ್ಲಿಯೇ ಹೋದವು. ಅವು ದಾರಿಯುದ್ದಕ್ಕೂ ಕೂಗುತ್ತಾ ನಡೆದವು. ಅವು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಲಿಲ್ಲ. ಫಿಲಿಷ್ಟಿಯರ ಅಧಿಪತಿಗಳು ಬೇತ್‌ಷೆಮೆಷಿನ ಗಡಿಯವರೆಗೂ ಹಸುಗಳನ್ನು ಹಿಂಬಾಲಿಸಿಕೊಂಡು ಹೋದರು.


ಕಪ್ಪೆಗಳಿಂದ ಬಿಡುಗಡೆಯಾದದ್ದನ್ನು ಫರೋಹನು ಕಂಡು ಮತ್ತೆ ತನ್ನ ಹೃದಯವನ್ನು ಕಠಿಣಪಡಿಸಿಕೊಂಡನು. ಮೋಶೆ ಆರೋನರ ಬೇಡಿಕೆಯನ್ನು ಅವನು ಈಡೇರಿಸಲಿಲ್ಲ. ಯೆಹೋವನು ಹೇಳಿದಂತೆಯೇ ಇದಾಯಿತು.


ಮಾಕಚ್, ಶಾಲ್ಬೀಮ್, ಬೇತ್‌ಷೆಮೆಷ್, ಏಲೋನ್, ಬೇತ್‌ಹಾನಾನ್‌ಗಳಿಗೆ ಬೆನ್‌ದೆಕರನು ರಾಜ್ಯಪಾಲನಾಗಿದ್ದನು.


ಹೀಗೆ ಯೆಹೂದದ ಅರಸನಾದ ಅಮಚ್ಯನು ಇಸ್ರೇಲರ ಅರಸನನ್ನು ಮುಖಾಮುಖಿಯಾಗಿ ಬೇತ್ಷೆಮೆಷಿನಲ್ಲಿ ಸಂಧಿಸಿದನು. ಬೇತ್ಷೆಮೆಷ್ ಯೆಹೂದ ರಾಜ್ಯದ ಪಟ್ಟಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು