1 ಸಮುಯೇಲ 7:1 - ಪರಿಶುದ್ದ ಬೈಬಲ್1 ಕಿರ್ಯತ್ಯಾರೀಮಿನ ಜನರು ಬಂದು, ಯೆಹೋವನ ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡು ಹೋದರು. ಯೆಹೋವನ ಪೆಟ್ಟಿಗೆಯನ್ನು ಬೆಟ್ಟದ ಮೇಲಿದ್ದ ಅಬೀನಾದಾಬನ ಮನೆಯಲ್ಲಿಟ್ಟರು. ಯೆಹೋವನ ಪೆಟ್ಟಿಗೆಯನ್ನು ಕಾಯುವುದಕ್ಕಾಗಿ ಅಬೀನಾದಾಬನ ಮಗನಾದ ಎಲ್ಲಾಜಾರನನ್ನು ಪ್ರತಿಷ್ಠಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆಗ ಕಿರ್ಯತ್ಯಾರೀಮಿನವರು ಬಂದು ಯೆಹೋವನ ಮಂಜೂಷವನ್ನು ತೆಗೆದುಕೊಂಡು ಹೋಗಿ, ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮನೆಯಲ್ಲಿಟ್ಟು, ಅವನ ಮಗನಾದ ಎಲ್ಲಾಜಾರನನ್ನು ಅದರ ಸೇವೆಗೋಸ್ಕರ ಪ್ರತಿಷ್ಠಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಆಗ ಕಿರ್ಯತ್ಯಾರೀಮಿನವರು ಬಂದು ಸರ್ವೇಶ್ವರನ ಮಂಜೂಷವನ್ನು ತೆಗೆದುಕೊಂಡು ಹೋದರು. ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮನೆಯಲ್ಲಿ ಅದನ್ನು ಇಟ್ಟು, ಅವನ ಮಗ ಎಲ್ಲಾಜಾರನನ್ನು ಅದರ ಸೇವೆಗಾಗಿ ಪ್ರತಿಷ್ಠಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆಗ ಕಿರ್ಯತ್ಯಾರೀವಿುನವರು ಬಂದು ಯೆಹೋವನ ಮಂಜೂಷವನ್ನು ತೆಗೆದುಕೊಂಡು ಹೋಗಿ ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮನೆಯಲ್ಲಿಟ್ಟು ಅವನ ಮಗನಾದ ಎಲ್ಲಾಜಾರನನ್ನು ಅದರ ಸೇವೆಗೋಸ್ಕರ ಪ್ರತಿಷ್ಠಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಕಿರ್ಯತ್ ಯಾರೀಮಿನವರು ಬಂದು ಯೆಹೋವ ದೇವರ ಮಂಜೂಷವನ್ನು ತೆಗೆದುಕೊಂಡು, ಗುಡ್ಡದ ಮೇಲೆ ಇರುವ ಅಬೀನಾದಾಬನ ಮನೆಯಲ್ಲಿ ತಂದಿಟ್ಟರು. ಅವನ ಪುತ್ರನಾದ ಎಲಿಯಾಜರನನ್ನು ಯೆಹೋವ ದೇವರ ಮಂಜೂಷವನ್ನು ಕಾಯಲು ಪ್ರತಿಷ್ಠಿಸಿದರು. ಅಧ್ಯಾಯವನ್ನು ನೋಡಿ |