1 ಸಮುಯೇಲ 7:10 - ಪರಿಶುದ್ದ ಬೈಬಲ್10 ಸಮುವೇಲನು ಕುರಿಮರಿಯನ್ನು ಸಮರ್ಪಿಸುವಾಗ, ಫಿಲಿಷ್ಟಿಯರು ಇಸ್ರೇಲರೊಡನೆ ಹೋರಾಡಲು ಬಂದರು. ಆದರೆ ಯೆಹೋವನು ಫಿಲಿಷ್ಟಿಯರ ಹತ್ತಿರ ದೊಡ್ಡ ಗುಡುಗನ್ನು ಉಂಟುಮಾಡಿದನು. ಗುಡುಗಿನ ಶಬ್ದವು ಫಿಲಿಷ್ಟಿಯರಲ್ಲಿ ಕಳವಳವನ್ನೂ ಭಯವನ್ನೂ ಉಂಟುಮಾಡಿತು. ಅವರ ಸೇನಾಧಿಪತಿಗಳಿಗೆ ಅವರನ್ನು ಹತೋಟಿಯಲ್ಲಿಡಲಾಗಲಿಲ್ಲ. ಆದಕಾರಣ ಇಸ್ರೇಲರು ಫಿಲಿಷ್ಟಿಯರನ್ನು ಯುದ್ಧದಲ್ಲಿ ಸೋಲಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಹೇಗೆಂದರೆ, ಸಮುವೇಲನು ಯಜ್ಞವನ್ನು ಅರ್ಪಿಸುವ ವೇಳೆಯಲ್ಲಿ ಫಿಲಿಷ್ಟಿಯರು ಇಸ್ರಾಯೇಲರ ವಿರುದ್ಧ ಯುದ್ಧಕ್ಕೋಸ್ಕರ ಸಮೀಪಿಸಲಾಗಿ, ಯೆಹೋವನು ದೊಡ್ಡ ಗುಡುಗಿನಿಂದ ಅವರನ್ನು ಕಳವಳಗೊಳಿಸಿ ಇಸ್ರಾಯೇಲರಿಗೆ ಸೋತು ಓಡಿ ಹೋಗುವಂತೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಹೇಗೆಂದರೆ, ಸಮುವೇಲನು ಬಲಿಯನ್ನರ್ಪಿಸುವ ವೇಳೆಯಲ್ಲಿ ಫಿಲಿಷ್ಟಿಯರು ಯುದ್ಧಕ್ಕಾಗಿ ಸಮೀಪಿಸಿದರು. ಸರ್ವೇಶ್ವರ ದೊಡ್ಡ ಗುಡುಗಿನಿಂದ ಅವರನ್ನು ಕಳವಳಗೊಳಿಸಿ, ಇಸ್ರಯೇಲರಿಗೆ ಸೋತು ಓಡಿಹೋಗುವಂತೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಸಮುವೇಲನು ಯಜ್ಞವನ್ನರ್ಪಿಸುವ ವೇಳೆಯಲ್ಲಿ ಫಿಲಿಷ್ಟಿಯರು ಯುದ್ಧಕ್ಕೋಸ್ಕರ ಸಮೀಪಿಸಲಾಗಿ ಯೆಹೋವನು ದೊಡ್ಡ ಗುಡುಗಿನಿಂದ ಅವರನ್ನು ಕಳವಳಗೊಳಿಸಿ ಇಸ್ರಾಯೇಲ್ಯರಿಗೆ ಸೋತು ಓಡಿಹೋಗುವಂತೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಸಮುಯೇಲನು ದಹನಬಲಿಯನ್ನು ಅರ್ಪಿಸುವಾಗ, ಫಿಲಿಷ್ಟಿಯರು ಇಸ್ರಾಯೇಲಿನ ಮೇಲೆ ಯುದ್ಧಮಾಡಲು ಸಮೀಪಕ್ಕೆ ಬಂದರು. ಆಗ ಯೆಹೋವ ದೇವರು ಫಿಲಿಷ್ಟಿಯರ ಮೇಲೆ ದೊಡ್ಡ ಶಬ್ದದಿಂದ ಗುಡುಗಿ ಅವರನ್ನು ಕಳವಳಗೊಳಿಸಿ, ಇಸ್ರಾಯೇಲರಿಗೆ ಸೋತು ಓಡಿಹೋಗುವಂತೆ ಮಾಡಿದರು. ಅಧ್ಯಾಯವನ್ನು ನೋಡಿ |