1 ಸಮುಯೇಲ 7:13 - ಪರಿಶುದ್ದ ಬೈಬಲ್13 ಫಿಲಿಷ್ಟಿಯರು ಸೋತುಹೋದರು. ಅವರು ಮತ್ತೆ ಇಸ್ರೇಲರ ಭೂಮಿಯಲ್ಲಿ ಹೆಜ್ಜೆ ಇಡಲಿಲ್ಲ. ಸಮುವೇಲನ ಜೀವಿತದ ಉಳಿದ ಭಾಗದಲ್ಲಿ ಯೆಹೋವನು ಫಿಲಿಷ್ಟಿಯರಿಗೆ ವಿರುದ್ಧವಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಫಿಲಿಷ್ಟಿಯರು ಬಹಳವಾಗಿ ತಗ್ಗಿಸಲ್ಪಟ್ಟದರಿಂದ ತಿರುಗಿ ಇಸ್ರಾಯೇಲ್ಯರ ಪ್ರಾಂತ್ಯದೊಳಗೆ ಬರಲೇ ಇಲ್ಲ. ಸಮುವೇಲನ ಜೀವಮಾನದಲ್ಲೆಲ್ಲಾ ಯೆಹೋವನ ಹಸ್ತವು ಫಿಲಿಷ್ಟಿಯರಿಗೆ ವಿರೋಧವಾಗಿಯೇ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಫಿಲಿಷ್ಟಿಯರು ಸೋತುಹೋದುದರಿಂದ ಮತ್ತೆ ಇಸ್ರಯೇಲರ ಪ್ರಾಂತ್ಯದೊಳಗೆ ಬರಲೇ ಇಲ್ಲ. ಸಮುವೇಲನ ಜೀವಮಾನದಲ್ಲೆಲ್ಲಾ ಸರ್ವೇಶ್ವರನ ಹಸ್ತ ಫಿಲಿಷ್ಟಿಯರಿಗೆ ವಿರೋಧವಾಗಿಯೇ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಫಿಲಿಷ್ಟಿಯರು ಬಹಳವಾಗಿ ತಗ್ಗಿಸಲ್ಪಟ್ಟದರಿಂದ ತಿರಿಗಿ ಇಸ್ರಾಯೇಲ್ಯರ ಪ್ರಾಂತದೊಳಗೆ ಬರಲೇ ಇಲ್ಲ. ಸಮುವೇಲನ ಜೀವಮಾನದಲ್ಲೆಲ್ಲಾ ಯೆಹೋವನ ಹಸ್ತವು ಫಿಲಿಷ್ಟಿಯರಿಗೆ ವಿರೋಧವಾಗಿಯೇ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಫಿಲಿಷ್ಟಿಯರು ಸೋತುಹೋದುದರಿಂದ ಇಸ್ರಾಯೇಲಿನ ಮೇರೆಯಲ್ಲಿ ಬರಲೇ ಇಲ್ಲ. ಇದಲ್ಲದೆ ಸಮುಯೇಲನು ಇದ್ದ ದಿವಸಗಳೆಲ್ಲಾ ಯೆಹೋವ ದೇವರ ಕೈ ಫಿಲಿಷ್ಟಿಯರಿಗೆ ವಿರೋಧವಾಗಿತ್ತು. ಅಧ್ಯಾಯವನ್ನು ನೋಡಿ |