1 ಸಮುಯೇಲ 7:14 - ಪರಿಶುದ್ದ ಬೈಬಲ್14 ಫಿಲಿಷ್ಟಿಯರು ಎಕ್ರೋನ್‌ನಿಂದ ಗತ್‌ವರೆಗಿನ ಪ್ರದೇಶದ ಇಸ್ರೇಲ್ ಪಟ್ಟಣಗಳನ್ನು ವಶಪಡಿಸಿಕೊಂಡಿದ್ದರು. ಆದರೆ ಇಸ್ರೇಲರು ಆ ಪಟ್ಟಣಗಳನ್ನು ಮರಳಿ ಗೆದ್ದುಕೊಂಡರು ಮತ್ತು ಆ ಪಟ್ಟಣದ ಸುತ್ತಲಿನ ಪ್ರದೇಶಗಳನ್ನು ವಶಪಡಿಸಿಕೊಂಡರು. ಇಸ್ರೇಲರ ಮತ್ತು ಅಮೋರಿಯರ ಮಧ್ಯೆ ಶಾಂತಿ ನೆಲೆಸಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅವರು ಎಕ್ರೋನ್ ಮೊದಲುಗೊಂಡು ಗತ್ ಊರಿನ ವರೆಗೆ ಇಸ್ರಾಯೇಲರಿಂದ ಕಿತ್ತುಕೊಂಡಿದ್ದ ಎಲ್ಲಾ ಪಟ್ಟಣಗಳು ಇಸ್ರಾಯೇಲರಿಗೇ ದೊರಕಿದವು. ಅವುಗಳಿಗೆ ಸೇರಿದ ಗ್ರಾಮಗಳನ್ನೂ ಇಸ್ರಾಯೇಲರು ಫಿಲಿಷ್ಟಿಯರಿಂದ ತೆಗೆದುಕೊಂಡರು. ಇಸ್ರಾಯೇಲರಿಗೂ ಅಮೋರಿಯರಿಗೂ ಸಮಾಧಾನವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅವರು ಎಕ್ರೋನ್ ಮೊದಲುಗೊಂಡು ಗತ್ ಊರಿನವರೆಗೆ ಇಸ್ರಯೇಲರಿಂದ ಕಿತ್ತುಕೊಂಡಿದ್ದ ಎಲ್ಲ ಪಟ್ಟಣಗಳು ಇಸ್ರಯೇಲರಿಗೆ ದೊರಕಿದವು. ಅವುಗಳಿಗೆ ಸೇರಿದ ಗ್ರಾಮಗಳನ್ನೂ ಇಸ್ರಯೇಲರು ಫಿಲಿಷ್ಟಿಯರಿಂದ ತೆಗೆದುಕೊಂಡರು. ಇಸ್ರಯೇಲರಿಗೂ ಅಮೋರಿಯರಿಗೂ ಸಮಾಧಾನವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅವರು ಎಕ್ರೋನ್ ಮೊದಲುಗೊಂಡು ಗತ್ ಊರಿನವರೆಗೆ ಇಸ್ರಾಯೇಲ್ಯರಿಂದ ಕಿತ್ತುಕೊಂಡಿದ್ದ ಎಲ್ಲಾ ಪಟ್ಟಣಗಳು ಇಸ್ರಾಯೇಲ್ಯರಿಗೇ ದೊರಕಿದವು. ಅವುಗಳಿಗೆ ಸೇರಿದ ಗ್ರಾಮಗಳನ್ನೂ ಇಸ್ರಾಯೇಲ್ಯರು ಫಿಲಿಷ್ಟಿಯರಿಂದ ತೆಗೆದುಕೊಂಡರು. ಇಸ್ರಾಯೇಲ್ಯರಿಗೂ ಅಮೋರಿಯರಿಗೂ ಸಮಾಧಾನವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಫಿಲಿಷ್ಟಿಯರು ಇಸ್ರಾಯೇಲಿನಿಂದ ತೆಗೆದುಕೊಂಡಿದ್ದ ಎಕ್ರೋನ್ ಮೊದಲ್ಗೊಂಡು ಗತ್ ಊರಿನವರೆಗೂ ಇರುವ ಪಟ್ಟಣಗಳನ್ನು ಇಸ್ರಾಯೇಲ್ಯರು ಫಿಲಿಷ್ಟಿಯರಿಂದ ತಿರುಗಿ ತೆಗೆದುಕೊಂಡರು. ಅವುಗಳ ಮೇರೆಗಳನ್ನು ಇಸ್ರಾಯೇಲರು ಫಿಲಿಷ್ಟಿಯರ ಕೈಯಿಂದ ಬಿಡಿಸಿಕೊಂಡರು. ಇಸ್ರಾಯೇಲಿಗೂ, ಅಮೋರಿಯರಿಗೂ ಮಧ್ಯೆ ಸಮಾಧಾನ ಉಂಟಾಗಿತ್ತು. ಅಧ್ಯಾಯವನ್ನು ನೋಡಿ |