1 ಸಮುಯೇಲ 7:4 - ಪರಿಶುದ್ದ ಬೈಬಲ್4 ಆದ್ದರಿಂದ ಇಸ್ರೇಲರು ಬಾಳ್‌ದೇವರನ್ನೂ ಅಷ್ಟೋರೆತ್ ದೇವತೆಯನ್ನೂ ತ್ಯಜಿಸಿ ಯೆಹೋವನ ಸೇವೆಯನ್ನು ಮಾತ್ರ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಹಾಗೆಯೇ ಇಸ್ರಾಯೇಲ್ಯರು ಬಾಳ್ ಅಷ್ಟೋರೆತ್ ದೇವತೆಗಳನ್ನು ತೆಗೆದುಹಾಕಿ ಯೆಹೋವನೊಬ್ಬನನ್ನೇ ಆರಾಧಿಸತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಹಾಗೆಯೇ ಇಸ್ರಯೇಲರು ಬಾಳ್ ಅಷ್ಟೋರೆತ್ ದೇವತೆಗಳನ್ನು ತೆಗೆದುಹಾಕಿ ಸರ್ವೇಶ್ವರಸ್ವಾಮಿಯೊಬ್ಬರಿಗೆ ಸೇವೆ ಸಲ್ಲಿಸತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಹಾಗೆಯೇ ಇಸ್ರಾಯೇಲ್ಯರು ಬಾಳ್ ಅಷ್ಟೋರೆತ್ ದೇವತೆಗಳನ್ನು ತೆಗೆದುಹಾಕಿ ಯೆಹೋವನೊಬ್ಬನನ್ನೇ ಸೇವಿಸತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ಇಸ್ರಾಯೇಲರು ಬಾಳನನ್ನೂ, ಅಷ್ಟೋರೆತನ್ನೂ ತೆಗೆದುಹಾಕಿ, ಯೆಹೋವ ದೇವರೊಬ್ಬರನ್ನೇ ಸೇವಿಸಿದರು. ಅಧ್ಯಾಯವನ್ನು ನೋಡಿ |
ಸೊಲೊಮೋನನು ನನ್ನನ್ನು ಅನುಸರಿಸುವುದನ್ನು ನಿಲ್ಲಿಸಿದ ಕಾರಣ ನಾನು ಅವನ ರಾಜ್ಯವನ್ನು ಅವನಿಂದ ತೆಗೆದುಕೊಳ್ಳುವೆನು. ಅವನು ಚೀದೋನ್ಯರ ದೇವತೆಯಾದ ಅಷ್ಟೋರೆತಳನ್ನೂ ಮೋವಾಬ್ಯರ ದೇವರಾದ ಕೆಮೋಷನನ್ನೂ ಅಮ್ಮೋನಿಯರ ದೇವರಾದ ಮಿಲ್ಕೋಮನನ್ನೂ ಪೂಜಿಸಿದನು. ಸೊಲೊಮೋನನು ತಾನು ಮಾಡುತ್ತಿದ್ದ ಸರಿಯಾದ ಮತ್ತು ಉತ್ತಮವಾದ ಕಾರ್ಯಗಳನ್ನು ನಿಲ್ಲಿಸಿದನು. ಅವನು ನನ್ನ ಕಟ್ಟಳೆಗಳನ್ನು ಮತ್ತು ಆಜ್ಞೆಗಳನ್ನು ಅನುಸರಿಸಲಿಲ್ಲ. ತನ್ನ ತಂದೆಯಾದ ದಾವೀದನು ಜೀವಿಸಿದಂತೆ ಅವನು ಜೀವಿಸುತ್ತಿಲ್ಲ.
ಸಮುವೇಲನು ಇಸ್ರೇಲರಿಗೆ, “ನೀವು ಯೆಹೋವನ ಬಳಿಗೆ ಪೂರ್ಣಮನಸ್ಸಿನಿಂದ ಮತ್ತೆ ಬರುವುದಾದರೆ ನಿಮ್ಮ ಬಳಿಯಿರುವ ಅನ್ಯದೇವರುಗಳನ್ನು ಎಸೆಯಬೇಕು. ನೀವು ಅಷ್ಟೋರೆತ್ ದೇವತೆಯ ವಿಗ್ರಹಗಳನ್ನು ತ್ಯಜಿಸಬೇಕು. ನೀವು ನಿಮ್ಮನ್ನು ಯೆಹೋವನಿಗೆ ಸಂಪೂರ್ಣವಾಗಿ ಒಪ್ಪಿಸಿಕೊಟ್ಟು ಆತನ ಸೇವೆಯನ್ನು ಮಾತ್ರ ಮಾಡಬೇಕು. ಆಗ ಆತನು ನಿಮ್ಮನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ” ಎಂದು ಹೇಳಿದನು.
ಯೋಷೀಯನು ಬೇತೇಲಿನ ಉನ್ನತಸ್ಥಳವನ್ನು ಮತ್ತು ಯಜ್ಞವೇದಿಕೆಯನ್ನು ಕೆಡವಿಬಿಟ್ಟನು. ನೆಬಾಟನ ಮಗನಾದ ಯಾರೊಬ್ಬಾಮನು ಈ ಯಜ್ಞವೇದಿಕೆಯನ್ನು ನಿರ್ಮಿಸಿದ್ದನು. ಇಸ್ರೇಲರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು. ಯೋಷೀಯನು ಯಜ್ಞವೇದಿಕೆಯನ್ನು ಮತ್ತು ಉನ್ನತಸ್ಥಳವನ್ನು ಕೆಡವಿಬಿಟ್ಟನು. ಯೋಷೀಯನು ಯಜ್ಞವೇದಿಕೆಯ ಕಲ್ಲುಗಳನ್ನು ಪುಡಿಪುಡಿಮಾಡಿ ಧೂಳಿನಲ್ಲಿ ಬೆರಸಿದನು. ಅವನು ಅಶೇರಸ್ತಂಭವನ್ನು ಸುಟ್ಟುಹಾಕಿದನು.