1 ಸಮುಯೇಲ 7:8 - ಪರಿಶುದ್ದ ಬೈಬಲ್8 ಇಸ್ರೇಲರು ಸಮುವೇಲನಿಗೆ, “ನಮ್ಮ ದೇವರಾದ ಯೆಹೋವನಲ್ಲಿ ನಮಗಾಗಿ ಪ್ರಾರ್ಥಿಸು! ನಿಲ್ಲಿಸಬೇಡ! ಫಿಲಿಷ್ಟಿಯರಿಂದ ನಮ್ಮನ್ನು ರಕ್ಷಿಸಲು ಯೆಹೋವನಲ್ಲಿ ಬೇಡಿಕೊ!” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 “ನಮ್ಮ ದೇವರಾದ ಯೆಹೋವನು ನಮ್ಮನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವ ಹಾಗೆ ನೀನು ನಮಗೋಸ್ಕರ ಆತನಿಗೆ ಮೊರೆಯಿಡು, ಸುಮ್ಮನಿರಬೇಡ” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅವರು ಸಮುವೇಲನಿಗೆ, “ನಮ್ಮ ದೇವರಾದ ಸರ್ವೇಶ್ವರ ನಮ್ಮನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವ ಹಾಗೆ ನೀವು ನಮಗೋಸ್ಕರ ಪ್ರಾರ್ಥನೆಮಾಡಿ, ಸುಮ್ಮನಿರಬೇಡಿ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಮ್ಮ ದೇವರಾದ ಯೆಹೋವನು ನಮ್ಮನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವ ಹಾಗೆ ನೀನು ನಮಗೋಸ್ಕರ ಆತನಿಗೆ ಮೊರೆಯಿಡು, ಸುಮ್ಮನಿರಬೇಡ ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅವರು ಸಮುಯೇಲನಿಗೆ, “ನಮ್ಮ ದೇವರಾದ ಯೆಹೋವ ದೇವರು ನಮ್ಮನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವವರೆಗೆ, ನೀನು ನಮಗೋಸ್ಕರವಾಗಿ ಪ್ರಾರ್ಥನೆಮಾಡಿ ಮೊರೆಯಿಡುವುದನ್ನು ನಿಲ್ಲಿಸಬೇಡ,” ಎಂದರು. ಅಧ್ಯಾಯವನ್ನು ನೋಡಿ |
ಆ ಜನರು ಯೆಹೋವನ ಸಂದೇಶವನ್ನು ತಂದ ಪ್ರವಾದಿಗಳಾಗಿದ್ದರೆ, ಅವರು ಪ್ರಾರ್ಥನೆ ಸಲ್ಲಿಸಲಿ. ಇನ್ನೂ ಯೆಹೋವನ ಆಲಯದಲ್ಲಿರುವ ವಸ್ತುಗಳ ಬಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಇನ್ನೂ ರಾಜನ ಅರಮನೆಯಲ್ಲಿರುವ ವಸ್ತುಗಳ ಬಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಇನ್ನೂ ಜೆರುಸಲೇಮಿನಲ್ಲಿರುವ ಪದಾರ್ಥಗಳ ಬಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಆ ವಸ್ತುಗಳನ್ನೆಲ್ಲ ಬಾಬಿಲೋನಿಗೆ ತೆಗೆದುಕೊಂಡು ಹೋಗಬಾರದೆಂದು ಅವರು ಪ್ರಾರ್ಥನೆ ಸಲ್ಲಿಸಲಿ.