Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 8:1 - ಪರಿಶುದ್ದ ಬೈಬಲ್‌

1 ಸಮುವೇಲನು ಮುದುಕನಾದ ಮೇಲೆ ತನ್ನ ಮಕ್ಕಳನ್ನು ಇಸ್ರೇಲರಿಗೆ ನ್ಯಾಯಾಧೀಶರನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಮುವೇಲನು ಮುದುಕನಾದ ಮೇಲೆ ತನ್ನ ಮಕ್ಕಳನ್ನು ಇಸ್ರಾಯೇಲರಿಗೆ ನ್ಯಾಯಸ್ಥಾಪಕರನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸಮುವೇಲನು ಮುದುಕನಾದ ಮೇಲೆ ತನ್ನ ಮಕ್ಕಳನ್ನು ಇಸ್ರಯೇಲರಿಗೆ ನ್ಯಾಯಸ್ಥಾಪಕರನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸಮುವೇಲನು ಮುದುಕನಾದ ಮೇಲೆ ತನ್ನ ಮಕ್ಕಳನ್ನು ಇಸ್ರಾಯೇಲ್ಯರಿಗೆ ನ್ಯಾಯಸ್ಥಾಪಕರನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸಮುಯೇಲನು ವೃದ್ಧನಾದಾಗ ತನ್ನ ಪುತ್ರರನ್ನು ಇಸ್ರಾಯೇಲಿಗೆ ನ್ಯಾಯಾಧಿಪತಿಗಳನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 8:1
9 ತಿಳಿವುಗಳ ಹೋಲಿಕೆ  

ನೀನು ಈ ಕಾರ್ಯಗಳನ್ನು ಮಾಡಬೇಕೆಂದು ದೇವರ, ಯೇಸು ಕ್ರಿಸ್ತನ ಮತ್ತು ಆರಿಸಲ್ಪಟ್ಟ ದೇವದೂತರ ಸನ್ನಿಧಿಯಲ್ಲಿ ನಾನು ಆಜ್ಞಾಪಿಸುತ್ತೇನೆ. ಆದರೆ ಸತ್ಯವನ್ನು ತಿಳಿಯುವುದಕ್ಕಿಂತ ಮೊದಲೇ ಜನರಿಗೆ ತೀರ್ಪು ನೀಡಬೇಡ. ಯಾರಿಗೂ ಪಕ್ಷಪಾತ ತೋರಬೇಡ.


ಇದಾದ ಬಳಿಕ ನನ್ನ ಸಹೋದರ ಹಾನಾನಿಯನನ್ನು ಜೆರುಸಲೇಮಿನ ಆಡಳಿತಗಾರನನ್ನಾಗಿ ನೇಮಿಸಿದೆನು. ಹನನ್ಯನನ್ನು ಜೆರುಸಲೇಮಿನ ಕೋಟೆಗೆ ಅಧಿಪತಿಯನ್ನಾಗಿ ಆರಿಸಿದೆನು. ಹಾನಾನಿಯು ನಂಬಿಗಸ್ತನೂ ದೇವರಿಗೆ ಭಯಪಡುವವನೂ ಆಗಿದ್ದುದರಿಂದ ನಾನು ಅವನನ್ನು ಆರಿಸಿಕೊಂಡೆನು.


ಅಬ್ದೋನನಿಗೆ ನಲವತ್ತು ಮಕ್ಕಳೂ ಮೂವತ್ತು ಮೊಮ್ಮಕ್ಕಳೂ ಇದ್ದರು. ಇವರೆಲ್ಲರಿಗೆ ಸವಾರಿ ಮಾಡುವುದಕ್ಕೋಸ್ಕರ ಎಪ್ಪತ್ತು ಕತ್ತೆಗಳಿದ್ದವು. ಅಬ್ದೋನನು ಎಂಟು ವರ್ಷ ಇಸ್ರೇಲರಿಗೆ ನ್ಯಾಯಾಧೀಶನಾಗಿದ್ದನು.


ಯಾಯೀರನಿಗೆ ಮೂವತ್ತು ಗಂಡುಮಕ್ಕಳಿದ್ದರು. ಅವರು ಮೂವತ್ತು ಕತ್ತೆಗಳ ಮೇಲೆ ಸವಾರಿ ಮಾಡುತ್ತಿದ್ದರು. ಆ ಮೂವತ್ತು ಮಂದಿ ಗಂಡುಮಕ್ಕಳು ಗಿಲ್ಯಾದ್ ಪ್ರದೇಶದಲ್ಲಿ ಮೂವತ್ತು ಪಟ್ಟಣಗಳನ್ನು ತಮ್ಮ ಅಧೀನದಲ್ಲಿಟ್ಟುಕೊಂಡಿದ್ದರು. ಅವುಗಳಿಗೆ ಇಂದಿನವರೆಗೂ ಯಾಯೀರನ ಪಟ್ಟಣಗಳೆಂದು ಹೆಸರಿದೆ.


“ಬಿಳಿಯ ಕತ್ತೆಗಳ ಮೇಲೆ ಸವಾರಿ ಮಾಡುವವರೇ, ರತ್ನಗಂಬಳಿಯ ಮೇಲೆ ಕುಳಿತುಕೊಳ್ಳುವವರೇ, ಮಾರ್ಗಗಳ ಮೇಲೆ ಹೋಗುವ ಪ್ರಯಾಣಿಕರೇ, ಗಮನಿಸಿರಿ!


ಈಗ ನಿಮ್ಮನ್ನು ಮುನ್ನಡೆಸಲು ಒಬ್ಬ ರಾಜನಿದ್ದಾನೆ. ನಾನು ಮುದುಕನಾಗಿರುವೆ ಮತ್ತು ನನ್ನ ತಲೆ ನರೆತುಹೋಗಿದೆ. ನನ್ನ ಗಂಡುಮಕ್ಕಳು ನಿಮ್ಮೊಂದಿಗಿದ್ದಾರೆ. ನಾನು ಚಿಕ್ಕಂದಿನಿಂದಲೇ ನಿಮ್ಮ ನಾಯಕನಾಗಿದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು