1 ಸಮುಯೇಲ 8:6 - ಪರಿಶುದ್ದ ಬೈಬಲ್6 ಹೀಗೆ ಹಿರಿಯರೆಲ್ಲರು ತಮ್ಮನ್ನು ಮುನ್ನಡೆಸಲು ರಾಜನೊಬ್ಬನು ಬೇಕೆಂದರು. ಸಮುವೇಲನಿಗೆ ಇದು ಸರಿಯೆನಿಸಲಿಲ್ಲ. ಆದ್ದರಿಂದ ಅವನು ಯೆಹೋವನಲ್ಲಿ ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನ್ಯಾಯಸ್ಥಾಪನೆಗೋಸ್ಕರ ನಮಗೊಬ್ಬ ಅರಸನನ್ನು ನೇಮಿಸಿಕೊಡು ಎಂಬ ಅವರ ಮಾತಿಗೆ ಸಮುವೇಲನು ದುಃಖಪಟ್ಟು ಯೆಹೋವನನ್ನು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ‘ನ್ಯಾಯಸ್ಥಾಪನೆಗಾಗಿ ನಮಗೊಬ್ಬ ಅರಸನನ್ನು ನೇಮಿಸಿಕೊಡಿ’ ಎಂಬ ಮಾತಿಗೆ ಸಮುವೇಲನು ದುಃಖಪಟ್ಟನು. ಸರ್ವೇಶ್ವರನನ್ನು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನ್ಯಾಯಸ್ಥಾಪನೆಗೋಸ್ಕರ ನಮಗೊಬ್ಬ ಅರಸನನ್ನು ನೇವಿುಸಿಕೊಡು ಎಂಬ ಮಾತಿಗೆ ಸಮುವೇಲನು ದುಃಖಪಟ್ಟು ಯೆಹೋವನನ್ನು ಪ್ರಾರ್ಥಿಸಲು ಆತನು ಅವನಿಗೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ನಮಗೆ ನ್ಯಾಯತೀರಿಸುವ ಒಬ್ಬ ಅರಸನನ್ನು ನೇಮಿಸು,” ಎಂದು ಅವರು ಹೇಳಿದ್ದು ಸಮುಯೇಲನಿಗೆ ಕೆಟ್ಟದ್ದಾಗಿ ಕಾಣಿಸಿತು. ಅವನು ಯೆಹೋವ ದೇವರಿಗೆ ಪ್ರಾರ್ಥನೆಮಾಡಿದನು. ಅಧ್ಯಾಯವನ್ನು ನೋಡಿ |