1 ಸಮುಯೇಲ 8:7 - ಪರಿಶುದ್ದ ಬೈಬಲ್7 ಯೆಹೋವನು ಅವನಿಗೆ, “ಜನರು ನಿನಗೆ ಹೇಳಿದಂತೆ ಮಾಡು ಅವರು ನಿನ್ನನ್ನು ತಿರಸ್ಕರಿಸಲಿಲ್ಲ. ಆದರೆ ನನ್ನನ್ನು ತಿರಸ್ಕರಿಸಿದ್ದಾರೆ! ಅವರಿಗೆ ನಾನು ರಾಜನಾಗಿರುವುದು ಬೇಕಿಲ್ಲ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆಗ ಯೆಹೋವನು ಸಮುವೇಲನಿಗೆ, “ಜನರು ಹೇಳಿದಂತೆಯೇ ಮಾಡು; ಅವರು ನಿನ್ನನ್ನಲ್ಲ, ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳ್ವಿಕೆಯನ್ನು ಬೇಡವೆನ್ನುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಸರ್ವೇಶ್ವರ ಅವನಿಗೆ, “ಜನರು ಹೇಳಿದಂತೆಯೇ ಮಾಡು; ಅವರು ನಿನ್ನನ್ನಲ್ಲ, ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳ್ವಿಕೆ ಬೇಡವೆನ್ನುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಜನರು ಹೇಳಿದಂತೆಯೇ ಮಾಡು; ಅವರು ನಿನ್ನನ್ನಲ್ಲ, ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳಿಕೆಗೆ ಬೇಡವೆನ್ನುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆಗ ಯೆಹೋವ ದೇವರು ಸಮುಯೇಲನಿಗೆ, “ಜನರು ನಿನಗೆ ಹೇಳಿದ್ದೆಲ್ಲದರಲ್ಲಿ ಅವರ ಮಾತು ಕೇಳು. ಏಕೆಂದರೆ ಅವರು ನಿನ್ನನ್ನು ತಿರಸ್ಕಾರ ಮಾಡಿಲ್ಲ. ನಾನು ಅವರನ್ನು ಆಳದ ಹಾಗೆ ನನ್ನನ್ನೇ ತಿರಸ್ಕಾರಮಾಡಿದ್ದಾರೆ. ಅಧ್ಯಾಯವನ್ನು ನೋಡಿ |
ಅಲ್ಲದೆ ಮೋಶೆಯು, “ನೀವು ಗೊಣಗುಟ್ಟುತ್ತಿರುವುದನ್ನು ಯೆಹೋವನು ಕೇಳಿದ್ದಾನೆ. ಆದ್ದರಿಂದ ರಾತ್ರಿಯಲ್ಲಿ ಆತನು ನಿಮಗೆ ಮಾಂಸವನ್ನು ಕೊಡುವನು. ಪ್ರತಿ ಮುಂಜಾನೆ ನಿಮಗೆ ಬೇಕಾದಷ್ಟು ರೊಟ್ಟಿಯು ದೊರಕುವುದು. ನೀವು (ಆರೋನನ ಮೇಲೂ ನನ್ನ ಮೇಲೂ) ಗೊಣಗುಟ್ಟುತ್ತಿದ್ದೀರಿ? ಆದರೆ ನಮಗೆ ದೂರು ಹೇಳಲು ನಾವೆಷ್ಟರವರು? ನೀವು ಯೆಹೋವನ ವಿರುದ್ಧವಾಗಿ ದೂರು ಹೇಳುತ್ತಿದ್ದೀರೆಂಬುದು ನಿಮ್ಮ ಜ್ಞಾಪಕದಲ್ಲಿರಲಿ” ಎಂದು ಹೇಳಿದನು.
ಆದ್ದರಿಂದ ನಾನು ಅವರ ಉಪಾಯಗಳನ್ನೇ ಬಳಸಿಕೊಳ್ಳಲು ನಿರ್ಧರಿಸಿದೆನು. ಅವರು ಬಹು ಭಯಪಡುವ ವಸ್ತುಗಳಿಂದಲೇ ಅವರನ್ನು ಶಿಕ್ಷಿಸಲು ತೀರ್ಮಾನಿಸಿದೆನು. ಎಕೆಂದರೆ ನಾನು ಅವರನ್ನು ಕರೆದರೂ ಅವರು ಕಿವಿಗೊಡಲಿಲ್ಲ. ನಾನು ಅವರೊಂದಿಗೆ ಮಾತಾಡಿದರೂ ಅವರು ಕೇಳಲಿಲ್ಲ. ಆದ್ದರಿಂದ ನಾನು ಅವರಿಗೆ ಅದನ್ನೇ ಮಾಡುವೆನು. ನಾನು ಯಾವದನ್ನು ಕೆಟ್ಟದೆಂದು ಪರಿಗಣಿಸಿದ್ದೆನೋ ಅದನ್ನೇ ಅವರು ಮಾಡಿದರು. ನಾನು ಇಷ್ಟಪಡದ ಸಂಗತಿಗಳನ್ನು ಅವರು ಮಾಡಿದರು.”
ನಾನು ನಿಮ್ಮ ಪೂರ್ವಿಕರಿಗೆ ‘ಪ್ರತಿ ಏಳು ವರ್ಷದ ಕೊನೆಯಲ್ಲಿ ಪ್ರತಿಯೊಬ್ಬ ವ್ಯಕ್ತಿಯು ತನ್ನ ಇಬ್ರಿಯ ಗುಲಾಮರನ್ನು ಬಿಡುಗಡೆ ಮಾಡಬೇಕು. ತನ್ನನ್ನು ನಿಮಗೆ ಮಾರಿಕೊಂಡ ಇಬ್ರಿಯ ಸಹೋದರ ನಿಮ್ಮಲ್ಲಿದ್ದರೆ ಅವನು ಆರು ವರ್ಷ ಸೇವೆಮಾಡಿದ ನಂತರ ಅವನನ್ನು ಬಿಡುಗಡೆ ಮಾಡಬೇಕು’ ಎಂದು ಹೇಳಿದ್ದೆ. ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕಿವಿಗೆ ಹಾಕಿಕೊಳ್ಳಲಿಲ್ಲ; ನನ್ನ ಕಡೆಗೆ ಗಮನ ಕೊಡಲಿಲ್ಲ.