Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 9:10 - ಪರಿಶುದ್ದ ಬೈಬಲ್‌

10 ಸೌಲನು ತನ್ನ ಸೇವಕನಿಗೆ, “ಒಳ್ಳೆಯ ಆಲೋಚನೆ; ನಡೆ ಹೋಗೋಣ” ಎಂದು ಹೇಳಿದನು. ಅವರು ಆ ಪಟ್ಟಣದಲ್ಲಿ ದೇವರ ಮನುಷ್ಯನಿದ್ದಲ್ಲಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಸೌಲನು ಆಳಿಗೆ, “ನೀನು ಹೇಳುವುದು ಒಳ್ಳೆಯದು; ಹೋಗೋಣ ನಡಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಗ ಸೌಲನು ಆಳಿಗೆ, “ನೀನು ಹೇಳುವುದು ಒಳ್ಳೆಯದು, ಹೋಗೋಣ, ನಡೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಗ ಸೌಲನು ಆಳಿಗೆ - ನೀನು ಹೇಳುವದು ಒಳ್ಳೇದು; ಹೋಗೋಣ ನಡಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಸೌಲನು ಸೇವಕನಿಗೆ, “ನಿನ್ನ ಮಾತು ಒಳ್ಳೆಯದು. ನಾವು ಹೋಗೋಣ ಬಾ,” ಎಂದನು. ದೇವರ ಮನುಷ್ಯನಿದ್ದ ಆ ಪಟ್ಟಣಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 9:10
4 ತಿಳಿವುಗಳ ಹೋಲಿಕೆ  

(ಹಿಂದಿನ ಕಾಲದಲ್ಲಿ ಇಸ್ರೇಲರು ಪ್ರವಾದಿಯನ್ನು “ದರ್ಶಿ” ಎಂದು ಕರೆಯುತ್ತಿದ್ದರು. ದೇವರಿಂದ ಏನಾದರೂ ಕೇಳಬೇಕಾಗಿದ್ದರೆ, “ದರ್ಶಿಯ ಬಳಿಗೆ ಹೋಗೋಣ” ಎನ್ನುತ್ತಿದ್ದರು.)


ಸೌಲನು ಮತ್ತು ಆ ಸೇವಕನು ಬೆಟ್ಟದ ಮೇಲೆ ನಡೆಯುತ್ತಾ ಆ ಪಟ್ಟಣಕ್ಕೆ ಹೋದರು. ಆ ದಾರಿಯಲ್ಲಿ ಅವರು ಕೆಲವು ಸ್ತ್ರೀಯರನ್ನು ಸಂಧಿಸಿದರು. ಆ ಸ್ತ್ರೀಯರು ನೀರನ್ನು ತರಲು ಹೋಗುತ್ತಿದ್ದರು. ಸೌಲನು ಮತ್ತು ಆ ಸೇವಕನು, “ದರ್ಶಿಯು ಇಲ್ಲಿರುವನೇ?” ಎಂದು ಆ ಯುವತಿಯರನ್ನು ಕೇಳಿದರು.


ಸೌಲನ ಚಿಕ್ಕಪ್ಪನು ಸೌಲನನ್ನು ಮತ್ತು ಅವನ ಸೇವಕನನ್ನು, “ನೀವು ಎಲ್ಲಿಗೆ ಹೋಗಿದ್ದಿರಿ?” ಎಂದು ಕೇಳಿದನು. ಸೌಲನು ಅವನಿಗೆ, “ನಾವು ಕತ್ತೆಗಳನ್ನು ಹುಡುಕುತ್ತಿದ್ದೆವು. ನಾವು ಅವುಗಳನ್ನು ಕಂಡುಕೊಳ್ಳಲಾರದೆ ಹೋದಾಗ ಸಮುವೇಲನನ್ನು ನೋಡಲು ಹೋದೆವು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು