Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 9:11 - ಪರಿಶುದ್ದ ಬೈಬಲ್‌

11 ಸೌಲನು ಮತ್ತು ಆ ಸೇವಕನು ಬೆಟ್ಟದ ಮೇಲೆ ನಡೆಯುತ್ತಾ ಆ ಪಟ್ಟಣಕ್ಕೆ ಹೋದರು. ಆ ದಾರಿಯಲ್ಲಿ ಅವರು ಕೆಲವು ಸ್ತ್ರೀಯರನ್ನು ಸಂಧಿಸಿದರು. ಆ ಸ್ತ್ರೀಯರು ನೀರನ್ನು ತರಲು ಹೋಗುತ್ತಿದ್ದರು. ಸೌಲನು ಮತ್ತು ಆ ಸೇವಕನು, “ದರ್ಶಿಯು ಇಲ್ಲಿರುವನೇ?” ಎಂದು ಆ ಯುವತಿಯರನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರಿಬ್ಬರೂ ಗುಡ್ಡವನ್ನು ಹತ್ತಿ ದೇವರ ಮನುಷ್ಯನಿದ್ದ ಪಟ್ಟಣವನ್ನು ಸಮೀಪಿಸಲು ನೀರು ಸೇದುವುದಕ್ಕೋಸ್ಕರ ಊರ ಹೊರಗೆ ಬಂದಿದ್ದ ಸ್ತ್ರೀಯರನ್ನು ಕಂಡು, “ದರ್ಶಿಯು ಊರಲ್ಲಿದ್ದಾನೋ” ಎಂದು ಕೇಳಿದರು. ಅವರು, “ಇದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವರಿಬ್ಬರೂ ಗುಡ್ಡ ಹತ್ತಿ ದೇವಪುರುಷನಿದ್ದ ಪಟ್ಟಣವನ್ನು ಸಮೀಪಿಸಿದರು. ನೀರು ಸೇದುವುದಕ್ಕಾಗಿ ಹೊರಗೆ ಬಂದಿದ್ದ ಮಹಿಳೆಯರನ್ನು ಕಂಡು, “ದಾರ್ಶನಿಕರು ಊರಲ್ಲಿ ಇದ್ದಾರೋ?” ಎಂದು ಕೇಳಲು, ಅವರು “ಹೌದು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರಿಬ್ಬರೂ ದಿನ್ನೆಯನ್ನು ಹತ್ತಿ ದೇವರ ಮನುಷ್ಯನಿದ್ದ ಪಟ್ಟಣವನ್ನು ಸಮೀಪಿಸಲು ನೀರು ಸೇದುವದಕ್ಕೋಸ್ಕರ ಹೊರಗೆ ಬಂದಿದ್ದ ಸ್ತ್ರೀಯರನ್ನು ಕಂಡು - ದರ್ಶಿಯು ಊರಲ್ಲಿದ್ದಾನೋ ಎಂದು ಕೇಳಲು ಅವರು - ಇದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರು ದಿಣ್ಣೆಯನ್ನು ಹತ್ತಿ ಪಟ್ಟಣದೊಳಗೆ ಹೋಗುವಾಗ, ನೀರು ಸೇದಲು ಬರುವ ಹುಡುಗಿಯರನ್ನು ಕಂಡು, “ದರ್ಶಿಯು ಇಲ್ಲಿ ಇದ್ದಾನೋ?” ಎಂದು ಅವರನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 9:11
9 ತಿಳಿವುಗಳ ಹೋಲಿಕೆ  

ಅವನು ಊರ ಹೊರಗಿದ್ದ ಬಾವಿಯ ಬಳಿಯಲ್ಲಿ ಒಂಟೆಗಳನ್ನು ಮಲಗಿಸಿದನು; ಪ್ರತಿಸಾಯಂಕಾಲ ಸ್ತ್ರೀಯರು ನೀರನ್ನು ತೆಗೆದುಕೊಂಡು ಹೋಗುವುದಕ್ಕಾಗಿ ಆ ಬಾವಿಗೆ ಬರುತ್ತಿದ್ದರು.


ಮೋಶೆಯು ಮಿದ್ಯಾನ್ಯರ ಒಂದು ಬಾವಿಯ ಬಳಿ ಕುಳಿತುಕೊಂಡಿದ್ದನು. ಮಿದ್ಯಾನ್ಯರ ಒಬ್ಬ ಪುರೋಹಿತನಿಗೆ ಏಳು ಮಂದಿ ಹೆಣ್ಣುಮಕ್ಕಳಿದ್ದರು. ಆ ಹುಡುಗಿಯರು ಬಂದು ತಮ್ಮ ತಂದೆಯ ಕುರಿಗಳಿಗೆ ನೀರನ್ನು ಕುಡಿಸಲು ಬಾವಿಯಿಂದ ನೀರು ಸೇದಿ ತೊಟ್ಟಿಗಳಲ್ಲಿ ಹಾಕುತ್ತಿದ್ದರು.


ತಾಳ ಝಲ್ಲರಿಗಳ ಧ್ವನಿಯನ್ನು ಕೇಳಿರಿ; ಬಾವಿಗಳ ಹತ್ತಿರ ನೆರೆದ ಜನಸಮೂಹದ ಧ್ವನಿಯನ್ನು ಕೇಳಿರಿ; ಅಲ್ಲಿ ಅವು ಯೆಹೋವನ ವಿಜಯದ ಬಗ್ಗೆ ಹೇಳುತ್ತವೆ. ಯೆಹೋವನ ಜನರು ಪಟ್ಟಣ ದ್ವಾರದಲ್ಲಿ ಯುದ್ಧಕ್ಕೆ ಹೋದಾಗ ಇಸ್ರೇಲಿನಲ್ಲಿ ಅವರ ವಿಜಯದ ಬಗ್ಗೆ ಹೇಳುತ್ತವೆ.


ಆ ಸೇವಕನು ಪ್ರಾರ್ಥನೆ ಮಾಡಿ ಮುಗಿಸುವುದಕ್ಕಿಂತ ಮೊದಲೇ ರೆಬೆಕ್ಕ ಎಂಬ ಯುವತಿಯು ಬಾವಿಯ ಬಳಿಗೆ ಬಂದಳು. ರೆಬೆಕ್ಕಳು ಬೆತೂವೇಲನ ಮಗಳು. ಬೆತೂವೇಲನು ಮಿಲ್ಕಳ ಮತ್ತು ನಾಹೋರನ ಮಗನು. ನಾಹೋರನು ಅಬ್ರಹಾಮನ ತಮ್ಮ. ರೆಬೆಕ್ಕಳು ತನ್ನ ಹೆಗಲ ಮೇಲೆ ನೀರಿನ ಕೊಡವನ್ನು ತೆಗೆದುಕೊಂಡು ಬಾವಿಗೆ ಬಂದಳು.


ಆ ಕುರುಬರು, “ಕುರಿಮಂದೆಗಳೆಲ್ಲ ಒಟ್ಟಿಗೆ ಸೇರುವವರೆಗೆ ನಾವು ಬಾವಿಯ ಮೇಲಿರುವ ಕಲ್ಲನ್ನು ತೆಗೆದು ಕುರಿಗಳಿಗೆ ನೀರು ಕುಡಿಸುವಂತಿಲ್ಲ; ಅವು ಒಟ್ಟಿಗೆ ಕೂಡಿಬಂದಾಗಲೇ ನೀರು ಕುಡಿಸುತ್ತೇವೆ” ಎಂದು ಹೇಳಿದರು.


ಯಾಕೋಬನು ಕುರುಬರೊಡನೆ ಮಾತಾಡುತ್ತಿರುವಾಗ ರಾಹೇಲಳು ತನ್ನ ತಂದೆಯ ಕುರಿಗಳೊಡನೆ ಬಂದಳು. (ಕುರಿಗಳನ್ನು ನೋಡಿಕೊಳ್ಳುವುದು ರಾಹೇಲಳ ಕೆಲಸವಾಗಿತ್ತು.)


ಸೌಲನು ತನ್ನ ಸೇವಕನಿಗೆ, “ಒಳ್ಳೆಯ ಆಲೋಚನೆ; ನಡೆ ಹೋಗೋಣ” ಎಂದು ಹೇಳಿದನು. ಅವರು ಆ ಪಟ್ಟಣದಲ್ಲಿ ದೇವರ ಮನುಷ್ಯನಿದ್ದಲ್ಲಿಗೆ ಹೋದರು.


ಒಳ್ಳೆಯವನಿಂದ ಕದ್ದುಕೊಳ್ಳುವ ಅಥವಾ ಅವನ ಮನೆಯನ್ನೇ ತೆಗೆದುಕೊಳ್ಳುವ ಕಳ್ಳನಂತೆ ಇರಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು