Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 9:15 - ಪರಿಶುದ್ದ ಬೈಬಲ್‌

15 ಹಿಂದಿನ ದಿನ, ಯೆಹೋವನು ಸಮುವೇಲನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸೌಲನು ಬರುವುದಕ್ಕೆ ಒಂದು ದಿನ ಮುಂದಾಗಿ ಯೆಹೋವನು ಸಮುವೇಲನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸೌಲನು ಬರುವುದಕ್ಕೆ ಒಂದು ದಿವಸ ಮುಂದಾಗಿಯೇ ಸರ್ವೇಶ್ವರ ಸಮುವೇಲನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಸೌಲನು ಬರುವದಕ್ಕೆ ಒಂದು ದಿವಸ ಮುಂದಾಗಿ ಯೆಹೋವನು ಸಮುವೇಲನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ ಸೌಲನು ಬರುವುದಕ್ಕೆ ಒಂದು ದಿವಸ ಮುಂಚೆ, ಯೆಹೋವ ದೇವರು ಸಮುಯೇಲನಿಗೆ ತಿಳಿಯಪಡಿಸಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 9:15
13 ತಿಳಿವುಗಳ ಹೋಲಿಕೆ  

ಬಳಿಕ ಜನರು ತಮಗೆ ರಾಜನು ಬೇಕೆಂದು ಕೇಳಿಕೊಂಡರು. ದೇವರು ಅವರಿಗೆ ಕೀಷನ ಮಗನಾದ ಸೌಲನನ್ನು ಕೊಟ್ಟನು. ಸೌಲನು ಬೆನ್ಯಾಮಿನ್ ಕುಲದವನು. ಅವನು ನಲವತ್ತು ವರ್ಷಗಳ ಕಾಲ ರಾಜನಾಗಿದ್ದನು.


ಒಂದು ದಿನ ಸಮುವೇಲನು ಸೌಲನಿಗೆ, “ಯೆಹೋವನು ಇಸ್ರೇಲರ ಮೇಲೆ ನಿನ್ನನ್ನು ರಾಜನನ್ನಾಗಿ ಅಭಿಷೇಕಿಸಲು ನನ್ನನ್ನು ಕಳುಹಿಸಿದನು. ಈಗ ಯೆಹೋವನ ಸಂದೇಶವನ್ನು ಕೇಳು.


ನನ್ನ ಒಡೆಯನಾದ ಯೆಹೋವನು ಒಂದು ಕಾರ್ಯವನ್ನು ಮಾಡಲು ನಿರ್ಧರಿಸಬಹುದು. ಆದರೆ ಆತನು ಹಾಗೆ ಮಾಡುವ ಮುಂಚಿತವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ಮುಂತಿಳಿಸುವನು.


ಯೆಹೋವನು ತನಗೆ ವಿಧೇಯರಾಗಿರುವವರಿಗೆ ಆಪ್ತಮಿತ್ರನಂತಿರುವನು. ಆತನು ಅವರಿಗೆ ತನ್ನ ಒಡಂಬಡಿಕೆಯನ್ನು ಉಪದೇಶಿಸುವನು.


ಆತನು ಅವರ ಕಿವಿಗಳಲ್ಲಿ ಮಾತಾಡಬಹುದು. ಆಗ ಅವರು ದೇವರ ಎಚ್ಚರಿಕೆಗಳಿಂದ ಬಹು ಭಯಗೊಳ್ಳುವರು.


“ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನೇ, ನೀನು ನನಗೆ ಮುಂದಿನ ಸಂಗತಿಗಳನ್ನು ತೋರಿಸಿರುವೆ. ‘ನಾನು ನಿನ್ನ ಕುಟುಂಬವನ್ನು ಸ್ಥಿರಪಡಿಸುವೆನು’ ಎಂದು ಹೇಳಿರುವೆ. ಆ ಕಾರಣದಿಂದಲೇ ನಿನ್ನ ಸೇವಕನಾದ ನಾನು ನಿನ್ನಲ್ಲಿ ಈ ಪ್ರಾರ್ಥನೆಯನ್ನು ಸಲ್ಲಿಸಲು ತೀರ್ಮಾನಿಸಿದ್ದೇನೆ.


ಯೋನಾತಾನನು, “ಎಂದಿಗೂ ಇಲ್ಲ. ನನ್ನ ತಂದೆಯು ನಿನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿಲ್ಲ! ನನ್ನ ತಂದೆಯು ನನಗೆ ತಿಳಿಸದೆ ಏನನ್ನೂ ಮಾಡುವುದಿಲ್ಲ. ಅದು ಬಹು ಮುಖ್ಯವಾದದ್ದೇ ಆಗಿರಲಿ ಇಲ್ಲವೆ ಮುಖ್ಯವಾಗಿಲ್ಲದ್ದೇ ಆಗಿರಲಿ, ನನ್ನ ತಂದೆಯು ನನಗೆ ತಿಳಿಸೇ ತಿಳಿಸುತ್ತಾನೆ. ನನ್ನ ತಂದೆಯು ನಿನ್ನನ್ನು ಕೊಲ್ಲಬೇಕೆಂದಿದ್ದರೆ ನಾನು ನಿನಗೆ ತಿಳಿಸುತ್ತಿರಲಿಲ್ಲವೇ?” ಎಂದು ಹೇಳಿದನು.


ಕಳೆದ ರಾತ್ರಿ ದೇವರ ಬಳಿಯಿಂದ ದೂತನೊಬ್ಬನು ನನ್ನ ಬಳಿಗೆ ಬಂದಿದ್ದನು. ಆ ದೇವರನ್ನೇ ನಾನು ಆರಾಧಿಸುವುದು. ನಾನು ಆತನವನು.


ಸಮುವೇಲನು ಸೌಲನನ್ನು ಕಂಡಾಗ ಯೆಹೋವನು ಅವನಿಗೆ, “ನಾನು ನಿನಗೆ ಹೇಳಿದ ಮನುಷ್ಯ ಇವನೇ. ಇವನು ನನ್ನ ಜನರನ್ನು ಆಳುತ್ತಾನೆ” ಎಂದು ಹೇಳಿದನು.


ಸೌಲನು ಮತ್ತು ಆ ಸೇವಕನು ಗುಡ್ಡವನ್ನು ಹತ್ತಿ ಪಟ್ಟಣದ ಕಡೆ ನಡೆದರು. ಅವರು ಪಟ್ಟಣವನ್ನು ಪ್ರವೇಶಿಸುತ್ತಿದ್ದಾಗ, ಸಮುವೇಲನು ಅವರ ಕಡೆ ಬರುತ್ತಿರುವುದನ್ನು ಕಂಡರು. ಸಮುವೇಲನು ಆಗ ತಾನೇ ಪಟ್ಟಣದಿಂದ ಹೊರಬಂದು, ಆರಾಧನೆಯ ಸ್ಥಳದ ಕಡೆ ಹೊರಟಿದ್ದನು.


ಯೆಹೋವನು ಶೀಲೋವಿನಲ್ಲಿ ಸಮುವೇಲನಿಗೆ ದರ್ಶನ ಕೊಡುವುದನ್ನು ಮುಂದುವರಿಸಿದನು. ಯೆಹೋವನು ಸಮುವೇಲನಿಗೆ ತನ್ನ ವಾಕ್ಯದ ಮೂಲಕ ತನ್ನನ್ನು ಪ್ರಕಟಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು