16 “ನಾಳೆ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ಒಬ್ಬ ಮನುಷ್ಯನನ್ನು ಕಳುಹಿಸುತ್ತೇನೆ. ಅವನು ಬೆನ್ಯಾಮೀನ್ ಕುಟುಂಬಕ್ಕೆ ಸೇರಿದವನು. ನೀನು ಅವನನ್ನು ಅಭಿಷೇಕಿಸು. ನನ್ನ ಜನರಾದ ಇಸ್ರೇಲರಿಗೆ ಅವನು ರಾಜನಾಗುತ್ತಾನೆ. ಈ ಮನುಷ್ಯನು ನನ್ನ ಜನರನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ. ನನ್ನ ಜನರ ಸಂಕಟವನ್ನು ನಾನು ನೋಡಿದ್ದೇನೆ; ನನ್ನ ಜನರ ಗೋಳನ್ನು ನಾನು ಆಲಿಸಿದ್ದೇನೆ” ಎಂದು ತಿಳಿಸಿದ್ದನು.
16 “ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ದೇಶದ ಒಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು. ನೀನು ಅವನನ್ನು ಇಸ್ರಾಯೇಲರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. ಅವರ ಕೂಗು ನನಗೆ ಮುಟ್ಟಿತು; ಅವರನ್ನು ಕಟಾಕ್ಷಿಸಿದ್ದೇನೆ” ಎಂದು ತಿಳಿಸಿದ್ದನು.
16 “ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ನಾಡಿನವನೊಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು. ನೀನು ಅವನನ್ನು ಇಸ್ರಯೇಲರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. ಅವರ ಕೂಗು ನನಗೆ ಮುಟ್ಟಿತು; ಅವರ ಮೇಲೆ ನನಗೆ ಕನಿಕರವಿದೆ,” ಎಂದು ತಿಳಿಸಿದರು.
16 ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ದೇಶದವನೊಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು; ನೀನು ಅವನನ್ನು ಇಸ್ರಾಯೇಲ್ಯರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. ಅವರ ಕೂಗು ನನಗೆ ಮುಟ್ಟಿತು; ಅವರನ್ನು ಕಟಾಕ್ಷಿಸಿದ್ದೇನೆ ಎಂದು ತಿಳಿಸಿದ್ದನು.
16 “ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನನ ದೇಶದವನಾದ ಒಬ್ಬ ಮನುಷ್ಯನನ್ನು ನಿನ್ನ ಬಳಿಗೆ ಕಳುಹಿಸುವೆನು. ನೀನು ಅವನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವನು. ಏಕೆಂದರೆ ನನ್ನ ಜನರ ಕೂಗು ನನ್ನ ಬಳಿಗೆ ಬಂದು ಮುಟ್ಟಿತು,” ಎಂಬುದೆ.
ಸಮುವೇಲನು ವಿಶೇಷವಾದ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ಸೌಲನ ತಲೆಯ ಮೇಲೆ ಆ ಎಣ್ಣೆಯನ್ನು ಸುರಿದನು. ಸಮುವೇಲನು ಸೌಲನಿಗೆ ಮುದ್ದಿಟ್ಟು, “ಯೆಹೋವನು ತನ್ನ ಜನರನ್ನು ಮುಂದೆ ನಡೆಸಲು ನಿನ್ನನ್ನು ಅವರಿಗೆ ನಾಯಕನನ್ನಾಗಿ ಅಭಿಷೇಕಿಸಿದ್ದಾನೆ. ನೀನು ಯೆಹೋವನ ಜನರನ್ನು ಆಳುವೆ; ಅವರನ್ನು ಸುತ್ತುವರೆದಿರುವ ಶತ್ರುಗಳಿಂದ ರಕ್ಷಿಸುವೆ. ಯೆಹೋವನು ತನ್ನ ಜನರನ್ನು ಆಳುವುದಕ್ಕಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ. ಇದು ನಿಜವೆಂಬುದಕ್ಕೆ ಸಾಕ್ಷಿಯೇನೆಂದರೆ:
ಯೆಹೋವನು ಸಮುವೇಲನಿಗೆ, “ನೀನು ಸೌಲನಿಗಾಗಿ ಎಷ್ಟುಕಾಲ ಶೋಕಿಸುವೆ? ನಾನು ಸೌಲನನ್ನು ಇಸ್ರೇಲರ ರಾಜತ್ವದಿಂದ ತಿರಸ್ಕರಿಸಿರುತ್ತೇನೆ. ನೀನು ಕೊಂಬಿನಲ್ಲಿ ಎಣ್ಣೆಯನ್ನು ತುಂಬಿಕೊಂಡು ಬಾ. ನಾನು ನಿನ್ನನ್ನು ಇಷಯನೆಂಬ ಮನುಷ್ಯನ ಬಳಿಗೆ ಕಳುಹಿಸುತ್ತೇನೆ. ಇಷಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದ್ದನು. ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಹೊಸ ರಾಜನನ್ನಾಗಿ ಆರಿಸಿದ್ದೇನೆ” ಎಂದು ಹೇಳಿದನು.
ಅದನ್ನು ಈಗಲೇ ಮಾಡಿರಿ! ಯೆಹೋವನು ದಾವೀದನ ಬಗ್ಗೆ ಮಾತಾಡುತ್ತಾ, ‘ನನ್ನ ಜನರಾದ ಇಸ್ರೇಲರನ್ನು ಫಿಲಿಷ್ಟಿಯರಿಂದಲೂ ಬೇರೆಲ್ಲಾ ಶತ್ರುಗಳಿಂದಲೂ ನನ್ನ ಸೇವಕನಾದ ದಾವೀದನ ಮೂಲಕ ಸಂರಕ್ಷಿಸುತ್ತೇನೆ’” ಎಂದು ಹೇಳಿದ್ದಾನೆ.
“ಹಿಂದಿರುಗಿ ಹೋಗಿ, ನನ್ನ ಜನರ ನಾಯಕನಾದ ಹಿಜ್ಕೀಯನಿಗೆ ಇದನ್ನು ಹೇಳು: ‘ನಿನ್ನ ಪೂರ್ವಿಕನಾದ ದಾವೀದನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದೆನು; ನಿನ್ನ ಕಣ್ಣೀರನ್ನು ನೋಡಿದೆನು. ಆದ್ದರಿಂದ ನಾನು ನಿನ್ನನ್ನು ಗುಣಪಡಿಸುತ್ತೇನೆ. ಮೂರನೆಯ ದಿನ, ನೀನು ದೇವಾಲಯಕ್ಕೆ ಹೋಗುವೆ.
“ಆಮೇಲೆ ಯೆಹೋವನು ಹೇಳಿದಂತೆಯೇ ಆಯಿತು. ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕಾರಾಗೃಹದ ಅಂಗಳದಲ್ಲಿದ್ದ ನನ್ನ ಬಳಿಗೆ ಬಂದು ಹೀಗೆ ಹೇಳಿದನು: ‘ಯೆರೆಮೀಯನೇ, ಬೆನ್ಯಾಮೀನ್ ಸೀಮೆಯ ಅನಾತೋತಿನಲ್ಲಿರುವ ನನ್ನ ಹೊಲವನ್ನು ಕೊಂಡುಕೊ. ಆ ಹೊಲವನ್ನು ನಿನಗಾಗಿ ಕೊಂಡುಕೊ. ಅದರ ಒಡೆಯನಾಗುವದಕ್ಕೆ ನಿನಗೆ ಹಕ್ಕಿದೆ.’” ಇದು ಯೆಹೋವನ ಸಂದೇಶವೆಂದು ನನಗೆ ತಿಳಿಯಿತು.
ಸೌಲನು ಸೈನಿಕರನ್ನೆಲ್ಲ ಒಟ್ಟುಗೂಡಿಸಿಕೊಂಡು ಯುದ್ಧಕ್ಕೆ ಹೋದನು. ಫಿಲಿಷ್ಟಿಯ ಸೈನಿಕರಲ್ಲಿ ನಿಜವಾಗಿಯೂ ಗಲಿಬಿಲಿಯುಂಟಾಗಿತ್ತು. ಅವರು ತಮ್ಮತಮ್ಮಲ್ಲಿಯೇ ಕತ್ತಿಗಳಿಂದ ಹೋರಾಡುತ್ತಿದ್ದರು.
ಹೀಗೆ ಯೆಹೋವನು ಅಂದು ಇಸ್ರೇಲರನ್ನು ರಕ್ಷಿಸಿದನು. ಯುದ್ಧವು ಬೇತಾವೆನಿನ ಆಚೆಯ ತನಕ ನಡೆಯಿತು. ಸೌಲನ ಬಳಿ ಒಟ್ಟು ಹತ್ತು ಸಾವಿರ ಮಂದಿ ಸೈನಿಕರಿದ್ದರು. ಎಫ್ರಾಯೀಮ್ ಬೆಟ್ಟಪ್ರದೇಶದ ಎಲ್ಲಾ ನಗರಗಳಿಗೂ ಯುದ್ಧವು ಹಬ್ಬಿತು.