Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 9:25 - ಪರಿಶುದ್ದ ಬೈಬಲ್‌

25 ಅವರು ಊಟಮಾಡಿದ ನಂತರ, ಆರಾಧನಾ ಸ್ಥಳದಿಂದ ಇಳಿದುಬಂದು, ಪಟ್ಟಣಕ್ಕೆ ಹಿಂದಿರುಗಿದರು. ಸಮುವೇಲನು ಮಲಗಲು ಸೌಲನಿಗಾಗಿ ಮಾಳಿಗೆಯ ಮೇಲೆ ಹಾಸಿಗೆಯನ್ನು ಸಿದ್ಧಪಡಿಸಿದನು. ಸೌಲನು ಅಲ್ಲಿ ಮಲಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವರು ಗುಡ್ಡದಿಂದಿಳಿದು ಪಟ್ಟಣಕ್ಕೆ ಬಂದನಂತರ ಸಮುವೇಲನು ಸೌಲನನ್ನು ತನ್ನ ಮನೆಯ ಮಾಳಿಗೆಯ ಮೇಲೆ ಕರೆದುಕೊಂಡು ಹೋಗಿ ಅವನೊಡನೆ ಮಾತನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅವರು ಗುಡ್ಡದಿಂದಿಳಿದು ಪಟ್ಟಣಕ್ಕೆ ಬಂದನಂತರ ಸಮುವೇಲನು ಸೌಲನನ್ನು ತನ್ನ ಮನೆಮಾಳಿಗೆಯ ಮೇಲೆ ಕರೆದುಕೊಂಡು ಹೋಗಿ ಅವನೊಡನೆ ಮಾತನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವರು ಗುಡ್ಡದಿಂದಿಳಿದು ಪಟ್ಟಣಕ್ಕೆ ಬಂದನಂತರ ಸಮುವೇಲನು ಸೌಲನನ್ನು ತನ್ನ ಮನೇ ಮಾಳಿಗೆಯ ಮೇಲೆ ಕರೆದುಕೊಂಡು ಹೋಗಿ ಅವನೊಡನೆ ಮಾತಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅವರು ಗುಡ್ಡದಿಂದ ಪಟ್ಟಣಕ್ಕೆ ಇಳಿದು ಬಂದಾಗ ಸಮುಯೇಲನು ಮಾಳಿಗೆಯ ಮೇಲೆ ಸೌಲನ ಸಂಗಡ ಮಾತನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 9:25
9 ತಿಳಿವುಗಳ ಹೋಲಿಕೆ  

ಮರುದಿನ ಈ ಜನರು ಜೊಪ್ಪಕ್ಕೆ ಸಮೀಪಿಸಿದಾಗ ಮಧ್ಯಾಹ್ನದ ಸಮಯವಾಗಿತ್ತು. ಆ ಸಮಯದಲ್ಲಿ ಪೇತ್ರನು ಪ್ರಾರ್ಥಿಸುವುದಕ್ಕಾಗಿ ಮಾಳಿಗೆಯ ಮೇಲೆ ಹೋದನು.


“ನೀವು ಮನೆ ಕಟ್ಟುವಾಗ ಅದರ ಮೇಲ್ಛಾವಣಿಯ ಸುತ್ತಲೂ ಅರ್ಧ ಗೋಡೆಯನ್ನು ಕಟ್ಟಬೇಕು. ಹೀಗೆ ಮಾಡದೆಹೋದರೆ ಯಾರಾದರೂ ಮೇಲ್ಛಾವಣಿಯಿಂದ ಕೆಳಗೆ ಬಿದ್ದು ಸತ್ತಲ್ಲಿ ಅವನ ಸಾವಿಗೆ ನೀವು ಕಾರಣರಾಗುವಿರಿ.


ಜನರು ಹೋಗಿ ರೆಂಬೆಗಳನ್ನು ತಂದು ತಮಗಾಗಿ ತಾತ್ಕಾಲಿಕ ಬಿಡಾರಗಳನ್ನು ಮಾಡಿಕೊಂಡರು. ಅವರು ಈ ಬಿಡಾರಗಳನ್ನು ತಮ್ಮ ಮನೆಯ ಮೇಲ್ಛಾವಣಿಗೆಯಲ್ಲೂ ಮನೆಯ ಅಂಗಳಗಳಲ್ಲಿಯೂ, ದೇವಾಲಯದ ಅಂಗಳದಲ್ಲಿಯೂ “ಬುಗ್ಗೆ” ಮತ್ತು “ಎಫ್ರಾಯೀಮ್” ಎಂಬ ದ್ವಾರಗಳ ಸಮೀಪದಲ್ಲಿದ್ದ ಬಯಲುಗಳಲ್ಲಿಯೂ ಹಾಕಿಕೊಂಡರು.


ಅವನು ಸಾಯಂಕಾಲ ತನ್ನ ಹಾಸಿಗೆಯಿಂದ ಮೇಲೆದ್ದು ಅರಮನೆಯ ಮಾಳಿಗೆಯ ಮೇಲಕ್ಕೆ ಹೋಗಿ ತಿರುಗಾಡುತ್ತಿದ್ದನು. ದಾವೀದನು ಮಾಳಿಗೆಯ ಮೇಲಿರುವಾಗ, ಒಬ್ಬ ಹೆಂಗಸು ಸ್ನಾನ ಮಾಡುತ್ತಿರುವುದನ್ನು ನೋಡಿದನು. ಅವಳು ಅತ್ಯಂತ ಸುಂದರಳಾಗಿದ್ದಳು.


ನಾನು ಕತ್ತಲೆಯಲ್ಲಿ (ರಹಸ್ಯವಾಗಿ) ಈ ಸಂಗತಿಗಳನ್ನು ನಿಮಗೆ ಹೇಳುತ್ತಿದ್ದೇನೆ. ಆದರೆ ನೀವು ಈ ಸಂಗತಿಗಳನ್ನು ಬೆಳಕಿನಲ್ಲಿ ಹೇಳಬೇಕೆಂಬುದು ನನ್ನ ಇಷ್ಟ. ನಾನು ಈ ವಿಷಯಗಳನ್ನು ನಿಮಗೆ ಮೆಲ್ಲಗೆ ಹೇಳುತ್ತಿದ್ದೇನೆ. ಆದರೆ ನೀವು ಈ ವಿಷಯಗಳನ್ನು ಜನರಿಗೆಲ್ಲ ಗಟ್ಟಿಯಾಗಿ ಹೇಳಿರಿ.


‘ಜೆರುಸಲೇಮಿನ ಮನೆಗಳು ಈ ತೋಫೆತಿನಷ್ಟೆ “ಹೊಲಸಾಗುವವು.” ಯೆಹೂದದ ರಾಜರ ಅರಮನೆಗಳು ಈ ತೋಫೆತಿನಂತೆ ಹಾಳಾಗುವವು. ಏಕೆಂದರೆ ಜನರು ತಮ್ಮ ಮನೆಯ ಮಾಳಿಗೆಯ ಮೇಲೆ ಸುಳ್ಳುದೇವರುಗಳನ್ನು ಪೂಜಿಸಿದರು. ಅವರು ನಕ್ಷತ್ರಗಳನ್ನು ಪೂಜಿಸಿ ಅವುಗಳ ಗೌರವಾರ್ಥವಾಗಿ ಧೂಪಹಾಕಿದರು. ಅವರು ಸುಳ್ಳುದೇವರುಗಳಿಗೆ ಪಾನನೈವೇದ್ಯಗಳನ್ನು ಅರ್ಪಿಸಿದರು.’”


ಮಾಳಿಗೆಯ ಮೇಲಿರುವವನು ಇಳಿದು ತನ್ನ ವಸ್ತುಗಳನ್ನು ಮನೆಯಿಂದ ತೆಗೆದುಕೊಳ್ಳದೆ ಓಡಿಹೋಗಲಿ.


ಆದರೆ ಅಲ್ಲಿ ಬಹಳ ಜನ ಇದ್ದುದರಿಂದ ಯೇಸುವಿನ ಬಳಿಗೆ ಹೋಗಲು ಅವರಿಗೆ ಸಾಧ್ಯವಾಗಲಿಲ್ಲ. ಆದ್ದರಿಂದ ಅವರು ಮನೆಯ ಮೇಲೆ ಹತ್ತಿ ಹೆಂಚುಗಳನ್ನು ತೆಗೆದು ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಹಿತ ಯೇಸುವಿನ ಮುಂದೆ ಇಳಿಸಿದರು.


ಮಾರನೆಯ ದಿನ ಬೆಳಗಿನ ಜಾವ, ಸಮುವೇಲನು ಮಾಳಿಗೆಯ ಮೇಲೆ ಮಲಗಿದ್ದ ಸೌಲನನ್ನು ಎಬ್ಬಿಸಿ, “ಎದ್ದೇಳು, ನಿನ್ನನ್ನು ಕಳುಹಿಸಿಕೊಡುತ್ತೇನೆ” ಎಂದು ಹೇಳಿದನು. ಸೌಲನು ಮೇಲೆದ್ದನು ಮತ್ತು ಸಮುವೇಲನೊಂದಿಗೆ ಮನೆಯಿಂದ ಹೊರಗೆ ಹೊರಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು