1 ಸಮುಯೇಲ 9:27 - ಪರಿಶುದ್ದ ಬೈಬಲ್27 ಸೌಲನೂ ಅವನ ಸೇವಕನೂ ಸಮುವೇಲನೂ ಪಟ್ಟಣದ ಅಂಚಿನಲ್ಲಿ ಒಟ್ಟಾಗಿ ನಡೆಯುತ್ತಿದ್ದಾಗ, ಸಮುವೇಲನು ಸೌಲನಿಗೆ, “ನಿನ್ನ ಸೇವಕನಿಗೆ ನಮ್ಮಿಂದ ಮುಂದೆ ಹೋಗಲು ತಿಳಿಸು. ನಾನು ದೇವರ ಸಂದೇಶವನ್ನು ನಿನಗೆ ತಿಳಿಸಬೇಕಾಗಿದೆ” ಎಂದು ಹೇಳಿದನು. ಆದಕಾರಣ ಸೇವಕನು ಅವರಿಂದ ಮುಂದೆ ನಡೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಸಮುವೇಲನು ಸೌಲನಿಗೆ, “ನಿನ್ನ ಸೇವಕನನ್ನು ಮುಂದೆ ಕಳುಹಿಸಿ ನೀನು ಇಲ್ಲಿ ಸ್ವಲ್ಪ ನಿಲ್ಲು; ನಿನಗೆ ತಿಳಿಸಬೇಕಾದ ದೈವೋಕ್ತಿ ಒಂದುಂಟು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 “ನಿನ್ನ ಸೇವಕನನ್ನು ಮುಂದೆ ಕಳುಹಿಸಿ, ನೀನು ಇಲ್ಲೇ ಸ್ವಲ್ಪ ನಿಲ್ಲು; ನಿನಗೆ ತಿಳಿಸಬೇಕಾದ ದೈವೋಕ್ತಿ ಒಂದುಂಟು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಸಮುವೇಲನು ಸೌಲನಿಗೆ - ನಿನ್ನ ಸೇವಕನನ್ನು ಮುಂದೆ ಕಳುಹಿಸಿ ನೀನು ಇಲ್ಲಿ ಸ್ವಲ್ಪ ನಿಲ್ಲು; ನಿನಗೆ ತಿಳಿಸಬೇಕಾದ ದೈವೋಕ್ತಿಯೊಂದುಂಟು ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಪಟ್ಟಣದ ಹೊರಗೆ ಬಂದಾಗ, ಸಮುಯೇಲನು ಸೌಲನಿಗೆ, “ನಾನು ದೇವರ ಸಂದೇಶವನ್ನು ನಿನಗೆ ತಿಳಿಸುವ ಹಾಗೆ ಸ್ವಲ್ಪ ಹೊತ್ತು ನಿಲ್ಲು. ನಿನ್ನ ಸೇವಕನನ್ನು ನಮ್ಮ ಮುಂದೆ ಹೋಗಲು ಹೇಳು,” ಎಂದನು. ಅಧ್ಯಾಯವನ್ನು ನೋಡಿ |
ಸಮುವೇಲನು ವಿಶೇಷವಾದ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ಸೌಲನ ತಲೆಯ ಮೇಲೆ ಆ ಎಣ್ಣೆಯನ್ನು ಸುರಿದನು. ಸಮುವೇಲನು ಸೌಲನಿಗೆ ಮುದ್ದಿಟ್ಟು, “ಯೆಹೋವನು ತನ್ನ ಜನರನ್ನು ಮುಂದೆ ನಡೆಸಲು ನಿನ್ನನ್ನು ಅವರಿಗೆ ನಾಯಕನನ್ನಾಗಿ ಅಭಿಷೇಕಿಸಿದ್ದಾನೆ. ನೀನು ಯೆಹೋವನ ಜನರನ್ನು ಆಳುವೆ; ಅವರನ್ನು ಸುತ್ತುವರೆದಿರುವ ಶತ್ರುಗಳಿಂದ ರಕ್ಷಿಸುವೆ. ಯೆಹೋವನು ತನ್ನ ಜನರನ್ನು ಆಳುವುದಕ್ಕಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ. ಇದು ನಿಜವೆಂಬುದಕ್ಕೆ ಸಾಕ್ಷಿಯೇನೆಂದರೆ: