3 ಒಂದು ದಿನ ಸೌಲನ ತಂದೆಯಾದ ಕೀಷನ ಕತ್ತೆಗಳು ತಪ್ಪಿಸಿಕೊಂಡು ಹೋದುದರಿಂದ ಅವನು ತನ್ನ ಮಗನಾದ ಸೌಲನಿಗೆ, “ನೀನೆದ್ದು ಆಳುಗಳಲ್ಲಿ ಒಬ್ಬನನ್ನು ಕರೆದುಕೊಂಡು ಕತ್ತೆಗಳನ್ನು ಹುಡುಕುವುದಕ್ಕೆ ಹೋಗು” ಎಂದು ಹೇಳಿದನು.
3 ಒಂದು ದಿನ ಸೌಲನ ತಂದೆಯಾದ ಕೀಷನ ಕತ್ತೆಗಳು ಕಾಣದೆಹೋದವು. ಅವನು ತನ್ನ ಮಗ ಸೌಲನಿಗೆ, “ನೀನೆದ್ದು ಆಳುಗಳಲ್ಲೊಬ್ಬನನ್ನು ಕರೆದುಕೊಂಡು ಕತ್ತೆಗಳನ್ನು ಹುಡುಕಲು ಹೋಗು,” ಎಂದು ಹೇಳಿದನು.
3 ಒಂದು ದಿವಸ ಸೌಲನ ತಂದೆಯಾದ ಕೀಷನ ಕತ್ತೆಗಳು ತಪ್ಪಿಸಿಕೊಂಡು ಹೋದದರಿಂದ ಅವನು ತನ್ನ ಮಗನಾದ ಸೌಲನಿಗೆ - ನೀನೆದ್ದು ಆಳುಗಳಲ್ಲೊಬ್ಬನನ್ನು ಕರೆದುಕೊಂಡು ಕತ್ತೆಗಳನ್ನು ಹುಡುಕುವದಕ್ಕೆ ಹೋಗು ಎಂದು ಹೇಳಿದನು.
3 ಸೌಲನ ತಂದೆಯಾದ ಕೀಷನ ಕತ್ತೆಗಳು ಕಾಣದೆ ಹೋದದ್ದರಿಂದ ಅವನು ತನ್ನ ಮಗ ಸೌಲನಿಗೆ, “ನೀನೆದ್ದು ಕೆಲಸದವರಲ್ಲಿ ಒಬ್ಬನನ್ನು ನಿನ್ನ ಸಂಗಡ ಕರೆದುಕೊಂಡು, ಕತ್ತೆಗಳನ್ನು ಹುಡುಕಲು ಹೋಗಬೇಕು,” ಎಂದನು.
ಈ ದಿನ ನನ್ನನ್ನು ಬಿಟ್ಟು ನೀನು ಮುಂದೆ ಸಾಗಿದಾಗ, ಬೆನ್ಯಾಮೀನನ ಮೇರೆಯಲ್ಲಿರುವ ಚೆಲ್ಚಹಿನಲ್ಲಿನ ರಾಹೇಲಳ ಸಮಾಧಿಯ ಬಳಿ ಇಬ್ಬರು ಮನುಷ್ಯರನ್ನು ಸಂಧಿಸುವೆ. ಅವರಿಬ್ಬರೂ ನಿನಗೆ, ‘ನೀನು ಹುಡುಕುತ್ತಿದ್ದ ಕತ್ತೆಗಳು ಒಬ್ಬನಿಗೆ ಸಿಕ್ಕಿವೆ. ನಿನ್ನ ತಂದೆಯು ಕತ್ತೆಗಳ ಬಗ್ಗೆ ಚಿಂತಿಸುವುದನ್ನು ಬಿಟ್ಟು ನಿನ್ನ ಬಗ್ಗೆ ಚಿಂತಿಸುತ್ತಿದ್ದಾನೆ. ನನ್ನ ಮಗನು ಎಲ್ಲಿಗೆ ಹೋದನೋ ಎಂದು ಹಂಬಲಿಸುತ್ತಿದ್ದಾನೆ’ ಎಂದು ಹೇಳುವರು” ಎಂದನು.
ಯಾಯೀರನಿಗೆ ಮೂವತ್ತು ಗಂಡುಮಕ್ಕಳಿದ್ದರು. ಅವರು ಮೂವತ್ತು ಕತ್ತೆಗಳ ಮೇಲೆ ಸವಾರಿ ಮಾಡುತ್ತಿದ್ದರು. ಆ ಮೂವತ್ತು ಮಂದಿ ಗಂಡುಮಕ್ಕಳು ಗಿಲ್ಯಾದ್ ಪ್ರದೇಶದಲ್ಲಿ ಮೂವತ್ತು ಪಟ್ಟಣಗಳನ್ನು ತಮ್ಮ ಅಧೀನದಲ್ಲಿಟ್ಟುಕೊಂಡಿದ್ದರು. ಅವುಗಳಿಗೆ ಇಂದಿನವರೆಗೂ ಯಾಯೀರನ ಪಟ್ಟಣಗಳೆಂದು ಹೆಸರಿದೆ.
ಸೌಲನು ಕತ್ತೆಗಳನ್ನು ಹುಡುಕಲು ಆರಂಭಿಸಿದನು. ಸೌಲನು ಮತ್ತು ಅವನ ಸೇವಕನು ಎಫ್ರಾಯೀಮ್ ಬೆಟ್ಟಪ್ರದೇಶದಲ್ಲಿ ಹುಡುಕಿದರೂ ಅವರಿಗೆ ಕತ್ತೆಗಳು ಸಿಗಲಿಲ್ಲ. ಆದ್ದರಿಂದ ಅವರು ಶಾಲೀಮ್ ಪ್ರದೇಶದಲ್ಲೆಲ್ಲಾ ಹುಡುಕಿದರು; ಅಲ್ಲಿಯೂ ಅವರ ಕತ್ತೆಗಳು ಸಿಕ್ಕಲಿಲ್ಲ. ಆದ್ದರಿಂದ ಅವರು ಬೆನ್ಯಾಮೀನನ ಪ್ರದೇಶದಲ್ಲೆಲ್ಲಾ ಹುಡುಕಿದರು; ಅಲ್ಲಿಯೂ ಅವರ ಕತ್ತೆಗಳು ಸಿಗಲಿಲ್ಲ.
ಮೂರು ದಿನಗಳ ಹಿಂದೆ ಕಳೆದು ಹೋದ ನಿನ್ನ ಕತ್ತೆಗಳಿಗಾಗಿ ಚಿಂತಿಸಬೇಡ. ಅವುಗಳೆಲ್ಲ ಸಿಕ್ಕಿವೆ. ಈಗ ಇಸ್ರೇಲರಿಗೆಲ್ಲ ನೀನು ಬೇಕಾಗಿರುವೆ. ಅವರಿಗೆ ನೀನು ಮತ್ತು ನಿನ್ನ ತಂದೆಯ ಕುಟುಂಬದ ಜನರೆಲ್ಲ ಬೇಕಾಗಿದ್ದಾರೆ” ಎಂದು ಹೇಳಿದನು.
ಸೌಲನ ಚಿಕ್ಕಪ್ಪನು ಸೌಲನನ್ನು ಮತ್ತು ಅವನ ಸೇವಕನನ್ನು, “ನೀವು ಎಲ್ಲಿಗೆ ಹೋಗಿದ್ದಿರಿ?” ಎಂದು ಕೇಳಿದನು. ಸೌಲನು ಅವನಿಗೆ, “ನಾವು ಕತ್ತೆಗಳನ್ನು ಹುಡುಕುತ್ತಿದ್ದೆವು. ನಾವು ಅವುಗಳನ್ನು ಕಂಡುಕೊಳ್ಳಲಾರದೆ ಹೋದಾಗ ಸಮುವೇಲನನ್ನು ನೋಡಲು ಹೋದೆವು” ಎಂದು ಹೇಳಿದನು.