5 ಕೊನೆಗೆ, ಸೌಲನು ಮತ್ತು ಅವನ ಸೇವಕನು ಚೂಫ್ ಎಂಬ ಹೆಸರಿನ ಪಟ್ಟಣಕ್ಕೆ ಬಂದರು. ಸೌಲನು ಸೇವಕನಿಗೆ, “ನಾವು ಮರಳಿ ಹೋಗೋಣ. ನಮ್ಮ ತಂದೆಯು ಕತ್ತೆಗಳ ಬಗ್ಗೆ ಯೋಚಿಸುವುದನ್ನು ಬಿಟ್ಟು ನಮ್ಮ ಬಗ್ಗೆ ಚಿಂತಿಸಲಾರಂಭಿಸುತ್ತಾನೆ” ಎಂದು ಹೇಳಿದನು.
5 ಅವರು ಚೂಫ್ ಎಂಬ ದೇಶಕ್ಕೆ ಬಂದಾಗ, ಸೌಲನು ತನ್ನ ಸಂಗಡ ಇದ್ದ ಸೇವಕನಿಗೆ, “ನನ್ನ ತಂದೆಯು ಕತ್ತೆಗಳ ಮೇಲೆ ಇರುವ ಚಿಂತೆಯನ್ನು ಬಿಟ್ಟು, ನಮಗೋಸ್ಕರ ಚಿಂತೆ ಪಡದ ಹಾಗೆ ನಾವು ಹಿಂದಕ್ಕೆ ಹೋಗೋಣ ಬಾ,” ಎಂದನು.
ಈ ದಿನ ನನ್ನನ್ನು ಬಿಟ್ಟು ನೀನು ಮುಂದೆ ಸಾಗಿದಾಗ, ಬೆನ್ಯಾಮೀನನ ಮೇರೆಯಲ್ಲಿರುವ ಚೆಲ್ಚಹಿನಲ್ಲಿನ ರಾಹೇಲಳ ಸಮಾಧಿಯ ಬಳಿ ಇಬ್ಬರು ಮನುಷ್ಯರನ್ನು ಸಂಧಿಸುವೆ. ಅವರಿಬ್ಬರೂ ನಿನಗೆ, ‘ನೀನು ಹುಡುಕುತ್ತಿದ್ದ ಕತ್ತೆಗಳು ಒಬ್ಬನಿಗೆ ಸಿಕ್ಕಿವೆ. ನಿನ್ನ ತಂದೆಯು ಕತ್ತೆಗಳ ಬಗ್ಗೆ ಚಿಂತಿಸುವುದನ್ನು ಬಿಟ್ಟು ನಿನ್ನ ಬಗ್ಗೆ ಚಿಂತಿಸುತ್ತಿದ್ದಾನೆ. ನನ್ನ ಮಗನು ಎಲ್ಲಿಗೆ ಹೋದನೋ ಎಂದು ಹಂಬಲಿಸುತ್ತಿದ್ದಾನೆ’ ಎಂದು ಹೇಳುವರು” ಎಂದನು.
ಎಲ್ಕಾನ ಎಂಬ ಒಬ್ಬ ಮನುಷ್ಯನಿದ್ದನು. ಅವನು ಎಫ್ರಾಯೀಮ್ ಬೆಟ್ಟದ ಸೀಮೆಯ ರಾಮಾತಯಿಮ್ ಎಂಬ ಊರಿನವನು. ಅವನು ಚೋಫೀಮ್ ಕುಟುಂಬದವನೂ ಯೆರೋಹಾಮನ ಮಗನೂ ಆಗಿದ್ದನು. ಯೆರೋಹಾಮನು ಎಲೀಹುವಿನ ಮಗ. ಎಲೀಹುವನು ತೋಹುವನ ಮಗ. ತೋಹುವನು ಚೂಫನ ಮಗ. ಇವರೆಲ್ಲ ಎಫ್ರಾಯೀಮ್ ಕುಲದವರು.
ಯೇಸು ತನ್ನ ಶಿಷ್ಯರಿಗೆ ಹೀಗೆ ಹೇಳಿದನು: “ಈ ಕಾರಣದಿಂದ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ಪ್ರಾಣಧಾರಣೆಗೆ ಬೇಕಾದ ಊಟಕ್ಕಾಗಿ ಮತ್ತು ತೊಟ್ಟುಕೊಳ್ಳಲು ಬೇಕಾದ ಬಟ್ಟೆಗಾಗಿ ಚಿಂತಿಸಬೇಡಿರಿ.
“ಆದ್ದರಿಂದ ನಿಮ್ಮ ಪ್ರಾಣಧಾರಣೆಗೆ ಬೇಕಾದ ಆಹಾರಕ್ಕಾಗಲಿ ದೇಹಕ್ಕೆ ಬೇಕಾದ ಬಟ್ಟೆಗಾಗಲಿ ನೀವು ಚಿಂತಿಸಬಾರದು. ಪ್ರಾಣವು ಆಹಾರಕ್ಕಿಂತಲೂ ದೇಹವು ಬಟ್ಟೆಗಿಂತಲೂ ಬಹಳ ಮುಖ್ಯವಾದದ್ದೆಂದು ನಾನು ನಿಮಗೆ ಹೇಳುತ್ತೇನೆ.