1 ಸಮುಯೇಲ 9:6 - ಪರಿಶುದ್ದ ಬೈಬಲ್6 ಆದರೆ ಆ ಸೇವಕನು, “ಈ ಪಟ್ಟಣದಲ್ಲಿ ಒಬ್ಬ ದೇವರ ಮನುಷ್ಯನಿದ್ದಾನೆ. ಜನರು ಅವನನ್ನು ಗೌರವಿಸುತ್ತಾರೆ. ಅವನು ಹೇಳುವ ವಿಷಯಗಳೆಲ್ಲ ನಿಜವಾಗುತ್ತವೆ. ಆದ್ದರಿಂದ ಈ ಪಟ್ಟಣಕ್ಕೆ ಹೋಗೋಣ ಬಹುಶಃ ನಾವು ಮುಂದೆ ಎಲ್ಲಿಗೆ ಹೋಗಬೇಕೆಂಬುದನ್ನು ಈ ದೇವರ ಮನುಷ್ಯನು ತಿಳಿಸಬಹುದು” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದರೆ ಆ ಆಳು, “ಇಗೋ, ಈ ಪಟ್ಟಣದಲ್ಲಿ ಗೌರವಸ್ಥನಾದ ಒಬ್ಬ ದೇವರ ಮನುಷ್ಯನಿರುತ್ತಾನೆ. ಅವನು ನುಡಿಯುವುದೆಲ್ಲಾ ನೆರವೇರುತ್ತದೆ; ಅಲ್ಲಿಗೆ ಹೋಗೋಣ; ಒಂದು ವೇಳೆ ಅವನು ನಾವು ಹೋಗತಕ್ಕ ಮಾರ್ಗವನ್ನು ತಿಳಿಸುವನು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆಗ ಆ ಆಳು, “ಇಗೋ, ಈ ಪಟ್ಟಣದಲ್ಲಿ ಗೌರವಸ್ಥನಾದ ಒಬ್ಬ ದೈವಪುರುಷ ಇದ್ದಾನೆ. ಅವನು ನುಡಿಯುವುದೆಲ್ಲಾ ನೆರವೇರುತ್ತದೆ; ಅಲ್ಲಿಗೆ ಹೋಗೋಣ; ಒಂದು ವೇಳೆ ಅವನು ನಾವು ಹೋಗಬೇಕಾದ ಮಾರ್ಗವನ್ನು ತಿಳಿಸುವನು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇಗೋ, ಈ ಪಟ್ಟಣದಲ್ಲಿ ಗೌರವಸ್ಥನಾದ ಒಬ್ಬ ದೇವರ ಮನುಷ್ಯನಿರುತ್ತಾನೆ. ಅವನು ನುಡಿಯುವದೆಲ್ಲಾ ನೆರವೇರುತ್ತದೆ; ಅಲ್ಲಿಗೆ ಹೋಗೋಣ; ಒಂದು ವೇಳೆ ಅವನು ನಾವು ಹೋಗತಕ್ಕ ಮಾರ್ಗವನ್ನು ತಿಳಿಸುವನು ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅದಕ್ಕವನು, “ಇಗೋ, ಈ ಪಟ್ಟಣದಲ್ಲಿ ದೇವರ ಮನುಷ್ಯನು ಒಬ್ಬನಿದ್ದಾನೆ, ಅವನು ಘನವುಳ್ಳ ಮನುಷ್ಯನು. ಅವನು ಹೇಳುವುದೆಲ್ಲಾ ನಿಶ್ಚಯವಾಗಿ ಆಗುವುದು. ಈಗ ನಾವು ಅಲ್ಲಿಗೆ ಹೋಗೋಣ. ಒಂದು ವೇಳೆ ಅವನು ನಾವು ಹೋಗಬೇಕೆಂದಿರುವ ನಮ್ಮ ಮಾರ್ಗವನ್ನು ತಿಳಿಸುವನು,” ಎಂದನು. ಅಧ್ಯಾಯವನ್ನು ನೋಡಿ |
ಯೆಹೋವನು ತನ್ನ ಸೇವಕರನ್ನು ಜನರಿಗೆ ಸಂದೇಶ ತಿಳಿಸುವದಕ್ಕಾಗಿ ಉಪಯೋಗಿಸಿಕೊಳ್ಳುತ್ತಿದ್ದಾನೆ. ಆತನ ಸಂದೇಶಗಳು ಸತ್ಯವಾದವುಗಳಾಗಿವೆ. ಜನರು ಮಾಡಬೇಕಾದ ಕಾರ್ಯಗಳ ಬಗ್ಗೆ ಯೆಹೋವನು ಸಂದೇಶಕರನ್ನು ಕಳುಹಿಸುತ್ತಾನೆ. ಅವರ ಸಲಹೆಯು ಒಳ್ಳೆಯದೆಂದು ಯೆಹೋವನು ತೋರಿಸಿಕೊಡುತ್ತಾನೆ. ಯೆಹೋವನು ಜೆರುಸಲೇಮಿಗೆ, “ಜನರು ನಿನ್ನಲ್ಲಿ ಮತ್ತೆ ವಾಸಮಾಡುವರು” ಎಂತಲೂ ಯೆಹೂದದ ನಗರಗಳಿಗೆ, “ನೀವು ತಿರುಗಿ ಕಟ್ಟಲ್ಪಡುವಿರಿ” ಎಂತಲೂ ಕೆಡವಲ್ಪಟ್ಟ ನಗರಗಳಿಗೆ, “ನಾನು ತಿರುಗಿ ನಿಮ್ಮನ್ನು ನಗರಗಳನ್ನಾಗಿ ಮಾಡುತ್ತೇನೆ” ಎಂತಲೂ ಹೇಳುತ್ತಾನೆ.