1 ಸಮುಯೇಲ 9:7 - ಪರಿಶುದ್ದ ಬೈಬಲ್7 ಸೌಲನು ತನ್ನ ಸೇವಕನಿಗೆ, “ನಾವು ಪಟ್ಟಣದೊಳಗೆ ಹೋಗೋಣ, ಆದರೆ ಆ ಮನುಷ್ಯನಿಗೆ ಕೊಡಲು ನಮ್ಮಲ್ಲಿ ಏನೂ ಇಲ್ಲ. ನಮ್ಮ ಚೀಲದಲ್ಲಿದ್ದ ಆಹಾರವೆಲ್ಲ ಮುಗಿದಿದೆ. ಆ ದೇವರ ಮನುಷ್ಯನಿಗೆ ನೀಡಲು ನಮ್ಮಲ್ಲಿ ಕಾಣಿಕೆಯೂ ಇಲ್ಲ. ಹೀಗಾಗಿ ನಾವು ಅವನಿಗೆ ಏನು ಕೊಡಬೇಕು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅದಕ್ಕೆ ಸೌಲನು, “ನಾವು ಅವನ ಬಳಿಗೆ ಹೋಗಬೇಕಾದರೆ ಏನಾದರೂ ತೆಗೆದುಕೊಂಡು ಹೋಗಬೇಕು; ನಾವು ತಂದಿದ್ದ ಆಹಾರಸಾಮಗ್ರಿಯು ಮುಗಿದುಹೋಯಿತು. ಆ ದೇವರ ಮನುಷ್ಯನಿಗೆ ಕೊಡತಕ್ಕ ಕಾಣಿಕೆ ನಮ್ಮಲ್ಲಿಲ್ಲವಲ್ಲಾ; ಏನು ಕೊಡಬೇಕು?” ಎನ್ನಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅದಕ್ಕೆ ಸೌಲನು, “ನಾವು ಅವನ ಬಳಿಗೆ ಹೋಗಬೇಕಾದರೆ ಏನಾದರೂ ತೆಗೆದುಕೊಂಡು ಹೋಗಬೇಕು; ನಾವು ತಂದಿದ್ದ ಆಹಾರಸಾಮಗ್ರಿ ಮುಗಿದುಹೋಯಿತು. ಆ ದೈವಪುರುಷನಿಗೆ ಕೊಡತಕ್ಕ ಕಾಣಿಕೆ ನಮ್ಮಲ್ಲಿ ಇಲ್ಲವಲ್ಲಾ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅದಕ್ಕೆ ಸೌಲನು - ನಾವು ಅವನ ಬಳಿಗೆ ಹೋಗಬೇಕಾದರೆ ಏನಾದರೂ ತೆಗೆದುಕೊಂಡು ಹೋಗಬೇಕು; ನಾವು ತಂದಿದ್ದ ಆಹಾರಸಾಮಗ್ರಿಯು ಮುಗಿದುಹೋಯಿತು. ಆ ದೇವರ ಮನುಷ್ಯನಿಗೆ ಕೊಡತಕ್ಕ ಕಾಣಿಕೆ ನಮ್ಮಲ್ಲಿಲ್ಲವಲ್ಲಾ; ಏನು ಕೊಡಬೇಕು ಎನ್ನಲು ಆಳು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆಗ ಸೌಲನು ತನ್ನ ಸೇವಕನಿಗೆ, “ನಾವು ಆ ಮನುಷ್ಯನ ಬಳಿಗೆ ಹೋದರೆ, ಏನು ತೆಗೆದುಕೊಂಡು ಹೋಗೋಣ? ನಮ್ಮ ಚೀಲಗಳಲ್ಲಿ ಇರುವ ರೊಟ್ಟಿ ಮುಗಿದು ಹೋಯಿತು. ದೇವರ ಮನುಷ್ಯನ ಬಳಿಗೆ ತೆಗೆದುಕೊಂಡು ಹೋಗಲು ತಕ್ಕ ಕಾಣಿಕೆ ಇಲ್ಲ. ನಮ್ಮ ಬಳಿಯಲ್ಲಿ ಏನಿದೆ?” ಎಂದನು. ಅಧ್ಯಾಯವನ್ನು ನೋಡಿ |
ಹಜಾಯೇಲನು ತನ್ನೊಡನೆ ಕಾಣಿಕೆಯನ್ನು ತೆಗೆದುಕೊಂಡು ಎಲೀಷನನ್ನು ಭೇಟಿಮಾಡಲು ಹೋದನು. ಅವನು ದಮಸ್ಕದಿಂದ ಎಲ್ಲಾ ವಿಧವಾದ ಉತ್ತಮ ವಸ್ತುಗಳನ್ನು ನಲವತ್ತು ಒಂಟೆಗಳ ಮೇಲೆ ಹೇರಿಸಿಕೊಂಡು ಹೋದನು. ಹಜಾಯೇಲನು ಎಲೀಷನ ಬಳಿಗೆ ಹೋಗಿ, “ನಿನ್ನ ಹಿಂಬಾಲಕನೂ ಅರಾಮ್ಯರ ರಾಜನೂ ಆದ ಬೆನ್ಹದದನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದನು. ತನ್ನ ಕಾಯಿಲೆಯು ವಾಸಿಯಾಗುತ್ತದೆಯೇ ಇಲ್ಲವೇ ಎಂಬುದನ್ನು ಅವನು ನಿನ್ನಿಂದ ತಿಳಿದುಕೊಳ್ಳಬೇಕೆಂದಿದ್ದಾನೆ” ಎಂದು ಹೇಳಿದನು.