Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 9:8 - ಪರಿಶುದ್ದ ಬೈಬಲ್‌

8 ಆ ಸೇವಕನು ಸೌಲನಿಗೆ, “ಇಲ್ಲಿ ನೋಡು, ನನ್ನ ಬಳಿ ಸ್ವಲ್ಪ ಹಣವಿದೆ. ಇದನ್ನು ಆ ದೇವರ ಮನುಷ್ಯನಿಗೆ ಕೊಡೋಣ. ನಾವು ಎಲ್ಲಿಗೆ ಹೋಗಬೇಕೆಂಬುದನ್ನು ಅವನು ತಿಳಿಸುತ್ತಾನೆ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಳು, “ಇಗೋ, ನನ್ನ ಕೈಯಲ್ಲಿ ಒಂದು ಪಾವಲಿಯಿದೆ; ಇದನ್ನು ಅವನಿಗೆ ಕೊಡೋಣ; ಅವನು ನಮಗೆ ಮಾರ್ಗ ತೋರಿಸುವನು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಏನು ಕೊಡುವುದು?” ಎನ್ನಲು ಆ ಆಳು, “ಇಗೋ, ನನ್ನ ಕೈಯಲ್ಲಿ ಒಂದು ಪಾವಲಿ ಬೆಳ್ಳಿನಾಣ್ಯವಿದೆ; ಇದನ್ನು ಅವನಿಗೆ ಕೊಡೋಣ; ಅವನು ನಮಗೆ ಮಾರ್ಗ ತೋರಿಸುವನು,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇಗೋ, ನನ್ನ ಕೈಯಲ್ಲಿ ಒಂದು ಪಾವಲಿಯಿದೆ; ಇದನ್ನು ಅವನಿಗೆ ಕೊಡೋಣ; ಅವನು ನಮಗೆ ಮಾರ್ಗ ತೋರಿಸುವನು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅದಕ್ಕೆ ಆ ಸೇವಕನು ಸೌಲನಿಗೆ ಉತ್ತರವಾಗಿ, “ಇಗೋ, ನನ್ನ ಕೈಯಲ್ಲಿ ಒಂದು ಪಾವಲಿ ಬೆಳ್ಳಿನಾಣ್ಯ ಇದೆ, ದೇವರ ಮನುಷ್ಯನು ನಮಗೆ ಮಾರ್ಗವನ್ನು ತಿಳಿಸುವ ಹಾಗೆ ನಾನು ಅದನ್ನು ಅವನಿಗೆ ಕೊಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 9:8
3 ತಿಳಿವುಗಳ ಹೋಲಿಕೆ  

ಆದರೆ ಆ ಸೇವಕನು, “ಈ ಪಟ್ಟಣದಲ್ಲಿ ಒಬ್ಬ ದೇವರ ಮನುಷ್ಯನಿದ್ದಾನೆ. ಜನರು ಅವನನ್ನು ಗೌರವಿಸುತ್ತಾರೆ. ಅವನು ಹೇಳುವ ವಿಷಯಗಳೆಲ್ಲ ನಿಜವಾಗುತ್ತವೆ. ಆದ್ದರಿಂದ ಈ ಪಟ್ಟಣಕ್ಕೆ ಹೋಗೋಣ ಬಹುಶಃ ನಾವು ಮುಂದೆ ಎಲ್ಲಿಗೆ ಹೋಗಬೇಕೆಂಬುದನ್ನು ಈ ದೇವರ ಮನುಷ್ಯನು ತಿಳಿಸಬಹುದು” ಎಂದು ಉತ್ತರಿಸಿದನು.


ಆಗ ರಾಜನು ದೇವಮನುಷ್ಯನಿಗೆ, “ದಯವಿಟ್ಟು ನನ್ನೊಡನೆ ಮನೆಗೆ ಬಾ. ನನ್ನೊಡನೆ ಊಟಮಾಡು. ನಾನು ನಿನಗೆ ಒಂದು ಕಾಣಿಕೆಯನ್ನು ಕೊಡುತ್ತೇನೆ” ಎಂದು ಹೇಳಿದನು.


ಪ್ರವಾದಿಗೆ ಹತ್ತು ರೊಟ್ಟಿಗಳನ್ನು, ಕೆಲವು ಸಿಹಿ ಪದಾರ್ಥಗಳನ್ನು ಮತ್ತು ಜೇನುತುಪ್ಪ ಜಾಡಿಯನ್ನು ಕೊಡು. ನಂತರ ನಮ್ಮ ಮಗನಿಗೆ ಏನಾಗುತ್ತದೆಂಬುದನ್ನು ಕೇಳು. ಪ್ರವಾದಿಯಾದ ಅಹೀಯನು ನಿನಗೆ ತಿಳಿಸುತ್ತಾನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು