Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 9:9 - ಪರಿಶುದ್ದ ಬೈಬಲ್‌

9 (ಹಿಂದಿನ ಕಾಲದಲ್ಲಿ ಇಸ್ರೇಲರು ಪ್ರವಾದಿಯನ್ನು “ದರ್ಶಿ” ಎಂದು ಕರೆಯುತ್ತಿದ್ದರು. ದೇವರಿಂದ ಏನಾದರೂ ಕೇಳಬೇಕಾಗಿದ್ದರೆ, “ದರ್ಶಿಯ ಬಳಿಗೆ ಹೋಗೋಣ” ಎನ್ನುತ್ತಿದ್ದರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 (ಪೂರ್ವ ಕಾಲದಲ್ಲಿ ಇಸ್ರಾಯೇಲ್ಯರಲ್ಲಿ ಯಾವನಾದರೂ ದೈವೋತ್ತರ ಕೇಳಬೇಕಾದರೆ “ದೇವ ದರ್ಶಿಯ ಬಳಿಗೆ ಹೋಗೋಣ ಬನ್ನಿರಿ” ಎನ್ನುವರು. ಈ ಕಾಲದಲ್ಲಿ ಪ್ರವಾದಿಗಳೆನಿಸಿಕೊಳ್ಳುವವರನ್ನು, ಆ ಕಾಲದಲ್ಲಿ ದೇವದರ್ಶಿಗಳೆಂದು ಕರೆಯುತ್ತಿದ್ದರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 (ಪೂರ್ವಕಾಲದಲ್ಲಿ ಇಸ್ರಯೇಲರಲ್ಲಿ ಯಾವನಾದರೂ ದೇವೋತ್ತರ ಕೇಳಬೇಕಾದರೆ ದಾರ್ಶನಿಕನ ಬಳಿಗೆ ಹೋಗೋಣ ಬನ್ನಿ ಎನ್ನುವನು; ಈ ಕಾಲದಲ್ಲಿ ಪ್ರವಾದಿಗಳೆನಿಸಿಕೊಳ್ಳುವವರನ್ನು ಆ ಕಾಲದಲ್ಲಿ ದಾರ್ಶನಿಕರೆಂದು ಕರೆಯುತ್ತಿದ್ದರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 (ಪೂರ್ವಕಾಲದಲ್ಲಿ ಇಸ್ರಾಯೇಲ್ಯರಲ್ಲಿ ಯಾವನಾದರೂ ದೈವೋತ್ತರಕೇಳಬೇಕಾದರೆ ದರ್ಶಿಯ ಬಳಿಗೆ ಹೋಗೋಣ ಬನ್ನಿರಿ ಎನ್ನುವನು; ಈ ಕಾಲದಲ್ಲಿ ಪ್ರವಾದಿಗಳೆನಿಸಿಕೊಳ್ಳುವವರನ್ನು ಆ ಕಾಲದಲ್ಲಿ ದರ್ಶಿಗಳೆಂದು ಕರೆಯುತ್ತಿದ್ದರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಪೂರ್ವದಲ್ಲಿ ಇಸ್ರಾಯೇಲಿನಲ್ಲಿ ಯಾವನಾದರೂ ದೇವರ ಹತ್ತಿರ ವಿಚಾರಿಸಬೇಕಾದರೆ, “ಪ್ರವಾದಿಯ ಬಳಿಗೆ ಹೋಗೋಣ ಬನ್ನಿರಿ,” ಎನ್ನುವನು. ಏಕೆಂದರೆ ಈ ಕಾಲದಲ್ಲಿ ಪ್ರವಾದಿ ಎಂದು ಕರೆಯಿಸಿಕೊಳ್ಳುವವರನ್ನು ಪೂರ್ವಕಾಲದಲ್ಲಿ ದರ್ಶಿ ಎಂದು ಕರೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 9:9
16 ತಿಳಿವುಗಳ ಹೋಲಿಕೆ  

ಅವರು ಪ್ರವಾದಿಗಳಿಗೆ, “ನಾವು ಮಾಡಬೇಕಿರುವ ಕಾರ್ಯಗಳ ಬಗ್ಗೆ ದೈವೋಕ್ತಿ ನುಡಿಯಬೇಡಿ, ನಮಗೆ ಸತ್ಯವನ್ನು ತಿಳಿಸಬೇಡಿ. ನಮಗೊಪ್ಪುವ ಮನರಂಜನೆಯ ಮಾತುಗಳನ್ನಾಡಿ. ನಮಗೋಸ್ಕರ ಒಳ್ಳೆಯ ಸಂಗತಿಗಳನ್ನೇ ನಿಮ್ಮ ದರ್ಶನಗಳಲ್ಲಿ ನೋಡಿರಿ.


ಅಮಚ್ಯನು ಆಮೋಸನಿಗೆ ಹೇಳಿದ್ದೇನೆಂದರೆ, “ಭವಿಷ್ಯವಾದಿಯೇ, ನೀನು ಯೆಹೂದಕ್ಕೆ ಹೋಗಿ ಅಲ್ಲಿ ನಿನ್ನ ಹೊಟ್ಟೆ ತುಂಬಿಸಿಕೊ. ನಿನ್ನ ಪ್ರಸಂಗವನ್ನು ಅಲ್ಲಿಯೇ ಮಾಡು.


ಪ್ರಾರಂಭದಿಂದ ಹಿಡಿದು ಕೊನೆಯತನಕ ದಾವೀದನು ಮಾಡಿದ ಎಲ್ಲಾ ಕಾರ್ಯಗಳನ್ನು ದರ್ಶಿಯಾದ ಸಮುವೇಲ, ಪ್ರವಾದಿಯಾದ ನಾತಾನ ಮತ್ತು ದರ್ಶಿಯಾದ ಗಾದ್ ಇವರ ಚರಿತ್ರೆಗಳಲ್ಲಿ ಬರೆಯಲ್ಪಟ್ಟಿವೆ.


ಶೆಲೋಮೋತ್ ಮತ್ತು ಅವನ ಸಂಬಂಧಿಕರೂ ಪ್ರವಾದಿಯಾದ ಸಮುವೇಲನೂ ಕೀಷನ ಮಗನಾದ ಸೌಲನೂ ನೇರನ ಮಗನಾದ ಅಬ್ನೇರನೂ ಚೆರೂಯಳ ಮಗನಾದ ಯೋವಾಬನೂ ದೇವರಿಗೆಂದು ಕೊಟ್ಟಿದ್ದ ಪವಿತ್ರವಸ್ತುಗಳ ಮೇಲ್ವಿಚಾರಕರಾಗಿದ್ದರು.


ಇಸ್ರೇಲ್ ಮತ್ತು ಯೆಹೂದಗಳನ್ನು ಎಚ್ಚರಿಸಲು ಯೆಹೋವನು ಪ್ರತಿಯೊಬ್ಬ ಪ್ರವಾದಿಯನ್ನು ಮತ್ತು ದೇವದರ್ಶಿಯನ್ನು ಬಳಸಿಕೊಂಡನು. ಯೆಹೋವನು, “ನಿಮ್ಮ ಕೆಟ್ಟಕಾರ್ಯಗಳಿಂದ ದೂರವಾಗಿ! ನನ್ನ ಆಜ್ಞೆಗಳಿಗೆ ಮತ್ತು ಧರ್ಮಶಾಸ್ತ್ರಗಳಿಗೆ ವಿಧೇಯತೆಯಿಂದಿರಿ. ನಿಮ್ಮ ಪೂರ್ವಿಕರಿಗೆ ನಾನು ನೀಡಿದ ಕಟ್ಟಳೆಗಳನ್ನೆಲ್ಲಾ ಅನುಸರಿಸಿ. ನಾನು ನನ್ನ ಸೇವಕರಾದ ಪ್ರವಾದಿಗಳ ಮೂಲಕ ಇವುಗಳನ್ನು ನೀಡಿದ್ದೇನೆ” ಎಂದು ಹೇಳಿದ್ದನು.


ದಾವೀದನು ಹೊತ್ತಾರೆಯಲ್ಲಿ ಎದ್ದಾಗ, ಅವನ ದರ್ಶಿಯಾದ ಗಾದನಿಗೆ ಯೆಹೋವನ ಮಾತುಗಳು ಬಂದವು.


ಯೆಹೋವನು ನಿಮಗೆ ತೂಕಡಿಕೆ ಬರಮಾಡುವನು. ಆತನು ನಿಮ್ಮ ಕಣ್ಣುಗಳನ್ನು ಮುಚ್ಚುವನು. (ಪ್ರವಾದಿಗಳು ನಿಮ್ಮ ಕಣ್ಣುಗಳಾಗಿದ್ದಾರೆ.) ಯೆಹೋವನು ನಿಮ್ಮ ತಲೆಗಳನ್ನು ಮುಚ್ಚುವನು. (ಪ್ರವಾದಿಗಳು ನಿಮ್ಮ ತಲೆಗಳಾಗಿದ್ದಾರೆ.)


ರೆಬೆಕ್ಕಳು ಗರ್ಭಿಣಿಯಾಗಿದ್ದಾಗ, ಅವಳ ಗರ್ಭದಲ್ಲಿದ್ದ ಕೂಸುಗಳು ಒಂದನ್ನೊಂದು ನೂಕಾಡಿದ್ದರಿಂದ ಅವಳು ಬಹಳ ತೊಂದರೆಪಡಬೇಕಾಯಿತು. ರೆಬೆಕ್ಕಳು ಯೆಹೋವನಿಗೆ ಪ್ರಾರ್ಥಿಸಿ, “ನನಗೇಕೆ ಹೀಗೆ ಆಗುತ್ತಿದೆ?” ಎಂದು ಕೇಳಿದಳು.


ಇದನ್ನು ಕೇಳಿದ ಆಸನು ಹನಾನಿಯ ಮೇಲೆ ಬಹುಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಆಸನು ಅದೇ ಸಮಯದಲ್ಲಿ ದೇವಜನರಾದ ಕೆಲವರೊಂದಿಗೆ ಕ್ರೂರವಾಗಿ ವರ್ತಿಸಿದನು.


ಆಗ ದೇವದರ್ಶಿಯಾದ ಹನಾನಿಯು ಯೆಹೂದದ ರಾಜನಾದ ಆಸನ ಬಳಿಗೆ ಬಂದು, “ಆಸನೇ, ನೀನು ದೇವರಾದ ಯೆಹೋವನ ಮೇಲೆ ಭರವಸವನ್ನಿಡುವ ಬದಲು ಅರಾಮ್ಯರ ಅರಸನ ಮೇಲೆ ಭರವಸವನ್ನಿಟ್ಟಿದ್ದರಿಂದ ಅರಾಮ್ಯರ ಸೈನ್ಯವು ನಿನ್ನ ಕೈಗೆ ಬೀಳದಂತೆ ತಪ್ಪಿಸಿಕೊಂಡಿತು.


ಒಟ್ಟು ಇನ್ನೂರ ಹನ್ನೆರಡು ಮಂದಿ ಪವಿತ್ರಗುಡಾರದ ಬಾಗಿಲನ್ನು ಕಾಯುವುದಕ್ಕೆ ಆರಿಸಲ್ಪಟ್ಟಿದ್ದರು. ಅವರ ಹೆಸರುಗಳು ವಂಶದ ಚರಿತ್ರೆಯಲ್ಲಿ ಬರೆಯಲ್ಪಟ್ಟಿರುತ್ತವೆ. ದಾವೀದನೂ ದೇವರ ಮನುಷ್ಯನಾದ ಸಮುವೇಲನೂ ಇವರನ್ನು ಆರಿಸಿಕೊಂಡರು. ಯಾಕೆಂದರೆ ಇವರೆಲ್ಲರೂ ನಂಬಿಗಸ್ತರಾಗಿದ್ದರು.


ಯೆಹೋಶುವನು ಮರಣಹೊಂದಿದ ನಂತರ ಇಸ್ರೇಲರು ಯೆಹೋವನಿಗೆ, “ನಮ್ಮಲ್ಲಿ ಯಾವ ಕುಲದವರು ಮೊದಲು ಹೋಗಿ ಕಾನಾನ್ಯರ ವಿರುದ್ಧ ಯುದ್ಧಮಾಡಬೇಕು?” ಎಂದು ಕೇಳಿದರು.


ಸೌಲನು ತನ್ನ ಸೇವಕನಿಗೆ, “ಒಳ್ಳೆಯ ಆಲೋಚನೆ; ನಡೆ ಹೋಗೋಣ” ಎಂದು ಹೇಳಿದನು. ಅವರು ಆ ಪಟ್ಟಣದಲ್ಲಿ ದೇವರ ಮನುಷ್ಯನಿದ್ದಲ್ಲಿಗೆ ಹೋದರು.


ಗಾದನು ದಾವೀದನ ಪ್ರವಾದಿಯಾಗಿದ್ದನು. ಯೆಹೋವನು ಗಾದನಿಗೆ, “ನೀನು ದಾವೀದನಿಗೆ ಹೀಗೆ ಹೇಳು: ‘ಇದು ಯೆಹೋವನ ನುಡಿ. ನಾನು ನಿನಗೆ ಕೊಡಲಿರುವ ಮೂರು ಶಿಕ್ಷೆಯಲ್ಲಿ ಒಂದನ್ನು ಆರಿಸಿಕೊಳ್ಳಬೇಕು. ನೀನು ಆರಿಸಿಕೊಂಡ ಪ್ರಕಾರವೇ ನಾನು ನಿನ್ನನ್ನು ಶಿಕ್ಷಿಸುವೆನು’” ಅಂದನು.


ಅವರು ಅವನಿಗೆ, “ವಾಸಕ್ಕಾಗಿ ಭೂಮಿಯನ್ನು ಹುಡುಕಲು ಕೈಕೊಂಡ ನಮ್ಮ ಪ್ರಯಾಣ ಸಫಲವಾಗುವುದೋ ಇಲ್ಲವೋ ಎಂಬುದನ್ನು ನಾವು ತಿಳಿದುಕೊಳ್ಳಬೇಕಾಗಿದೆ. ದಯವಿಟ್ಟು ದೇವರಲ್ಲಿ ಈ ವಿಷಯ ಕೇಳು” ಎಂದು ಕೇಳಿಕೊಂಡರು.


ಇಡೀ ದೇಹವೇ ಕಣ್ಣಾಗಿದ್ದರೆ, ಕೇಳಿಸಿಕೊಳ್ಳಲು ದೇಹಕ್ಕೆ ಸಾಧ್ಯವಿರುತ್ತಿರಲಿಲ್ಲ. ಇಡೀ ದೇಹವೇ ಕಿವಿಯಾಗಿದ್ದರೆ, ದೇಹವು ಯಾವುದರ ವಾಸನೆಯನ್ನೂ ತಿಳಿದುಕೊಳ್ಳಲಾಗುತ್ತಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು