Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 1:10 - ಪರಿಶುದ್ದ ಬೈಬಲ್‌

10 ಎಲೀಯನು ಐವತ್ತು ಮಂದಿಯ ಸೇನಾಧಿಪತಿಗೆ, “ನಾನು ಒಬ್ಬ ದೇವಮನುಷ್ಯನಾಗಿರುವದಾದರೆ ಪರಲೋಕದಿಂದ ಬೆಂಕಿಯು ಕೆಳಗಿಳಿದು ಬಂದು ನಿನ್ನನ್ನೂ ನಿನ್ನ ಐವತ್ತು ಸೈನಿಕರನ್ನೂ ನಾಶಗೊಳಿಸಲಿ!” ಎಂದು ಉತ್ತರಿಸಿದನು. ಆಗ ಬೆಂಕಿಯು ಪರಲೋಕದಿಂದ ಬಂದು ಆ ಸೇನಾಧಿಪತಿಯನ್ನು ಮತ್ತು ಅವನ ಐವತ್ತು ಮಂದಿ ಸೈನಿಕರನ್ನು ನಾಶಗೊಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದಕ್ಕೆ ಎಲೀಯನು ಪಂಚದಶಾಧಿಪತಿಗೆ, “ನಾನು ದೇವರ ಮನುಷ್ಯನಾಗಿರುವುದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ ನಿನ್ನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ” ಎಂದನು. ಕೂಡಲೆ ಆಕಾಶದಿಂದ ಬೆಂಕಿ ಬಿದ್ದು ಅವನನ್ನೂ, ಅವನ ಸಿಪಾಯಿಗಳನ್ನೂ ದಹಿಸಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅದಕ್ಕೆ ಎಲೀಯನು, “ನಾನು ದೈವಪುರುಷನಾಗಿ ಇರುವುದು ನಿಜವಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ ನಿನ್ನ ಐವತ್ತುಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ,” ಎಂದನು. ಕೂಡಲೆ ಆಕಾಶದಿಂದ ಬೆಂಕಿಬಿದ್ದು ಅವನನ್ನೂ ಅವನ ಐವತ್ತುಮಂದಿ ಸಿಪಾಯಿಗಳನ್ನೂ ದಹಿಸಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅದಕ್ಕೆ ಎಲೀಯನು - ನಾನು ದೇವರ ಮನುಷ್ಯನಾಗಿರುವದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ ನಿನ್ನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ ಅಂದನು. ಕೂಡಲೆ ಆಕಾಶದಿಂದ ಬೆಂಕಿಬಿದ್ದು ಅವನನ್ನೂ ಅವನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅದಕ್ಕೆ ಎಲೀಯನು ಪ್ರಧಾನನಿಗೆ ಉತ್ತರವಾಗಿ, “ನಾನು ದೇವರ ಮನುಷ್ಯನಾಗಿದ್ದರೆ, ಬೆಂಕಿಯು ಆಕಾಶದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ,” ಎಂದನು. ಆಗ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ದಹಿಸಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 1:10
22 ತಿಳಿವುಗಳ ಹೋಲಿಕೆ  

ಯೇಸುವಿನ ಶಿಷ್ಯರಾದ ಯಾಕೋಬ ಮತ್ತು ಯೋಹಾನ ಇದನ್ನು ಕಂಡು, “ಸ್ವಾಮೀ, ಆಕಾಶದಿಂದ ಬೆಂಕಿ ಬಿದ್ದು ಇವರನ್ನು ನಾಶಮಾಡಲಿ ಎಂದು ನಾವು ಆಜ್ಞಾಪಿಸಬೇಕೆನ್ನುವಿಯೋ!” ಎಂದು ಕೇಳಿದರು.


ಆಗ ಅರಸನು, “ನೋಡಿರಿ, ನಾಲ್ಕು ಜನರು ಬೆಂಕಿಯಲ್ಲಿ ತಿರುಗಾಡುತ್ತಿರುವುದು ನನಗೆ ಕಾಣುತ್ತಿದೆ. ಅವರು ಕಟ್ಟಲ್ಪಟ್ಟಿಲ್ಲ. ಅವರನ್ನು ಬೆಂಕಿಯು ಸುಟ್ಟಿಲ್ಲ. ನಾಲ್ಕನೆಯವನು ದೇವಕುಮಾರನಂತೆ ಕಾಣುತ್ತಾನೆ” ಎಂದು ಹೇಳಿದನು.


ಏಕೆಂದರೆ ನಮ್ಮ “ದೇವರು ನಾಶಮಾಡುವ ಬೆಂಕಿಯಂತಿದ್ದಾನೆ.”


ಆಜ್ಞೆಯನ್ನು ಕೊಟ್ಟಾಗ ಅರಸನು ತುಂಬ ಕೋಪದಲ್ಲಿದ್ದನು. ಆದ್ದರಿಂದ ತಕ್ಷಣ ಕುಲುಮೆಯಲ್ಲಿ ಅತಿ ಹೆಚ್ಚು ಬೆಂಕಿಯನ್ನು ಉರಿಸಲಾಯಿತು. ಆ ಜ್ವಾಲೆ ಎಷ್ಟು ಭಯಂಕರವಾಗಿತ್ತೆಂದರೆ ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಕುಲುಮೆಯಲ್ಲಿ ಎಸೆಯಲು ಹೋದ ಶಕ್ತಿಶಾಲಿಗಳಾದ ಸೈನಿಕರೇ ಅದರ ತಾಪಕ್ಕೆ ಸತ್ತುಹೋದರು.


ಈ ಸಾಕ್ಷಿಗಳಿಗೆ ಯಾರಾದರೂ ಕೇಡು ಮಾಡಲು ಪ್ರಯತ್ನಿಸಿದರೆ, ಸಾಕ್ಷಿಗಳ ಬಾಯಿಂದ ಬೆಂಕಿಯು ಹೊರಬಂದು ಅವರ ಶತ್ರುವನ್ನು ಅಂದರೆ ಅವರಿಗೆ ತೊಂದರೆ ಮಾಡಲು ಪ್ರಯತ್ನಿಸಿದ್ದವರನ್ನೆಲ್ಲ ಸಾಯಿಸುತ್ತದೆ.


ಬಳಿಕ ಅವರ ಮಧ್ಯದಲ್ಲಿ ಬೆಂಕಿಯುಂಟಾಯಿತು; ಅಗ್ನಿಜ್ವಾಲೆಯು ಆ ದುಷ್ಟರನ್ನು ದಹಿಸಿಬಿಟ್ಟಿತು.


ಆ ಸೇವಕನು ಮಾತಾಡುತ್ತಿರುವಾಗಲೇ ಮತ್ತೊಬ್ಬ ಸೇವಕನು ಬಂದು ಯೋಬನಿಗೆ, “ಆಕಾಶದಿಂದ ಸಿಡಿಲೊಡೆದು ನಿನ್ನ ಕುರಿಗಳನ್ನೂ ಸೇವಕರುಗಳನ್ನೂ ಸಂಪೂರ್ಣವಾಗಿ ಸುಟ್ಟುಹಾಕಿತು. ನಾನೊಬ್ಬನು ಮಾತ್ರ ತಪ್ಪಿಸಿಕೊಂಡೆನು! ಇದನ್ನು ತಿಳಿಸುವುದಕ್ಕಾಗಿಯೇ ನಾನು ಬಂದೆನು” ಎಂದು ಹೇಳಿದನು.


ಹೆರೋದನು ಎಲ್ಲೆಲ್ಲಿ ಹುಡುಕಿದರೂ ಪೇತ್ರನನ್ನು ಕಂಡುಹಿಡಿಯಲಾಗಲಿಲ್ಲ. ಆದ್ದರಿಂದ ಹೆರೋದನು ಕಾವಲುಗಾರರನ್ನು ವಿಚಾರಿಸಿ ಅವರಿಗೇ ಮರಣದಂಡನೆ ವಿಧಿಸಿದನು. ತರುವಾಯ ಹೆರೋದನು ಜುದೇಯದಿಂದ ಹೊರಟು ಸೆಜರೇಯ ಪಟ್ಟಣಕ್ಕೆ ಬಂದು ಅಲ್ಲೇ ಸ್ವಲ್ಪಕಾಲ ನೆಲೆಸಿದ್ದನು.


ಯೆಹೂದ್ಯ ಯಾಜಕರು ಮತ್ತು ನಾಯಕರು, “ಅವನು ಖಂಡಿತವಾಗಿ ಆ ದುಷ್ಟಜನರನ್ನು ಕೊಂದು ಸುಗ್ಗಿಕಾಲದಲ್ಲಿ ತನ್ನ ಪಾಲನ್ನು ತನಗೆ ಕೊಡುವ ರೈತರಿಗೆ ಅದನ್ನು ಗುತ್ತಿಗೆಗೆ ಕೊಡುತ್ತಾನೆ” ಎಂದು ಹೇಳಿದರು.


ಆಗ ರಾಜನು ದಾನಿಯೇಲನ ಮೇಲೆ ದೋಷಾರೋಪಣೆಯನ್ನು ಮಾಡಿದ ಜನರನ್ನು ಸಿಂಹಗಳ ಗುಹೆಗೆ ಕರೆತರಬೇಕೆಂದು ಆಜ್ಞಾಪಿಸಿದನು. ಆ ಜನರನ್ನೂ ಅವರ ಹೆಂಡತಿಮಕ್ಕಳನ್ನೂ ಸಹಿತವಾಗಿ ಸಿಂಹಗಳ ಗುಹೆಯಲ್ಲಿ ಎಸೆಯಲಾಯಿತು. ಅವರು ಗುಹೆಯ ನೆಲಕ್ಕೆ ಮುಟ್ಟುವ ಮೊದಲೇ ಸಿಂಹಗಳು ಅವರನ್ನು ಎಳೆದುಕೊಂಡವು. ಸಿಂಹಗಳು ಅವರ ದೇಹಗಳನ್ನು ತಿಂದು ಎಲುಬುಗಳನ್ನು ಅಗಿದುಹಾಕಿದವು.


“ನಾನು ಆರಿಸಿಕೊಂಡಿರುವ ಜನರಿಗೆ ಕೇಡುಮಾಡಬೇಡಿ. ನನ್ನ ಪ್ರವಾದಿಗಳಿಗೆ ಯಾವ ಕೆಟ್ಟದ್ದನ್ನೂ ಮಾಡಬೇಡಿ” ಎಂದು ಆತನು ಹೇಳಿದನು.


ಆದರೆ ಆತನ ಜನರು ಪ್ರವಾದಿಗಳನ್ನು ಹಾಸ್ಯಮಾಡಿದರು; ಅವರ ಮಾತುಗಳನ್ನು ಕೇಳಲು ನಿರಾಕರಿಸಿದರು; ದೇವರ ಸಂದೇಶವನ್ನು ದ್ವೇಷಿಸಿದರು. ಆಗ ದೇವರ ಕೋಪವು ಅವರ ಮೇಲೆ ಉರಿಯತೊಡಗಿತು. ಅದನ್ನು ನಿಲ್ಲಿಸಲು ಯಾರಿಗೂ ಸಾಧ್ಯವಾಗಲಿಲ್ಲ.


ಮೀಕಾಯೆಹು ಗಟ್ಟಿಯಾದ ಧ್ವನಿಯಲ್ಲಿ, “ನಾನು ಏನು ಹೇಳುತ್ತೇನೆಂಬುದನ್ನು ಜನರೆಲ್ಲರೂ ಕೇಳಿರಿ! ರಾಜನಾದ ಅಹಾಬನೇ, ನೀನು ಈ ಹೋರಾಟದಿಂದ ಜೀವಸಹಿತ ಮನೆಗೆ ಬಂದರೆ, ಯೆಹೋವನು ನನ್ನ ಮೂಲಕ ಮಾತನಾಡಿಲ್ಲ” ಎಂದು ಹೇಳಿದನು.


ಅಲ್ಲದೆ ಯೆಹೋವನಿಂದ ಬೆಂಕಿಯು ಹೊರಟುಬಂದು ಧೂಪವನ್ನು ಅರ್ಪಿಸುತ್ತಿದ್ದ ಇನ್ನೂರೈವತ್ತು ಮಂದಿಯನ್ನು ದಹಿಸಿಬಿಟ್ಟಿತು.


ಜನರು ತಮಗೆ ತೊಂದರೆ ಉಂಟಾಯಿತೆಂದು ಗಟ್ಟಿಯಾಗಿ ಗುಣುಗುಟ್ಟಿದರು. ಅದನ್ನು ಯೆಹೋವನು ಕೇಳಿ ಕೋಪಗೊಂಡನು. ಯೆಹೋವನಿಂದ ಬಂದ ಬೆಂಕಿ ಅವರ ವಿರುದ್ಧವಾಗಿ ಹೊತ್ತಿಕೊಂಡದ್ದರಿಂದ ಪಾಳೆಯದ ಹೊರಭಾಗದಲ್ಲಿದ್ದವರು ಸುಟ್ಟುಹೋದರು.


ಅಹಜ್ಯನು ಬೇರೊಬ್ಬ ಸೇನಾಧಿಪತಿಯನ್ನು ಮತ್ತು ಐವತ್ತು ಜನರನ್ನು ಎಲೀಯನ ಬಳಿಗೆ ಕಳುಹಿಸಿದನು. ಸೇನಾಧಿಪತಿಯು ಎಲೀಯನಿಗೆ, “ದೇವಮನುಷ್ಯನೇ, ರಾಜನು ಹೇಳುತ್ತಾನೆ, ‘ತ್ವರಿತವಾಗಿ ಕೆಳಗಿಳಿದು ಬಾ!’” ಎಂದು ಹೇಳಿದನು.


ಆದ್ದರಿಂದ ಯೆಹೋವನಿಂದ ಬೆಂಕಿ ಹೊರಟುಬಂದು ಅವರಿಬ್ಬರನ್ನು ನಾಶಮಾಡಿತು. ಅವರು ಯೆಹೋವನ ಸನ್ನಿಧಿಯಲ್ಲಿ ಸತ್ತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು