2 ಅರಸುಗಳು 1:16 - ಪರಿಶುದ್ದ ಬೈಬಲ್16 ಎಲೀಯನು ಅಹಜ್ಯನಿಗೆ, “ಇಸ್ರೇಲಿನಲ್ಲಿ ದೇವರಿದ್ದಾನೆ. ಹೀಗಿರುವಾಗ ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ಪ್ರಶ್ನೆಗಳನ್ನು ಕೇಳಲು ಸಂದೇಶಕರನ್ನು ಏಕೆ ಕಳುಹಿಸಿದೆ? ನೀನು ಈ ಕಾರ್ಯವನ್ನು ಮಾಡಿದ್ದರಿಂದ ನಿನ್ನ ಹಾಸಿಗೆಯಿಂದ ನೀನು ಮೇಲಕ್ಕೇಳುವುದಿಲ್ಲ. ನೀನು ಅಲ್ಲೇ ಸಾಯುವೆ! ಎಂಬುದಾಗಿ ಯೆಹೋವನು ಅನ್ನುತ್ತಾನೆ.” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಂತರ ಎಲೀಯನು ಅರಸನಿಗೆ, “ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ದೂತರನ್ನು ಕಳುಹಿಸಿದ್ದೇನು? ಅಂಥ ವಿಚಾರ ಮಾಡುವುದಕ್ಕೆ ಇಸ್ರಾಯೇಲರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದ ಇಳಿಯದೆ ಸಾಯಲೇಬೇಕು ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅರಸನಿಗೆ, “ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ದೂತರನ್ನು ಕಳುಹಿಸಿದ್ದೇಕೆ? ಇಸ್ರಯೇಲರಲ್ಲಿ ದೇವರಿಲ್ಲವೆ? ಹೀಗೆ ಮಾಡಿದ್ದರಿಂದ ನೀವು ಹಿಡಿದ ಹಾಸಿಗೆಯಿಂದ ಏಳದೆ ಸಾಯಲೇಬೇಕು ಎಂಬುದಾಗಿ ಸರ್ವೇಶ್ವರ ಹೇಳಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವದಕ್ಕೆ ದೂತರನ್ನು ಕಳುಹಿಸಿದ್ದೇನು? ಅಂಥ ವಿಚಾರಮಾಡುವದಕ್ಕೆ ಇಸ್ರಾಯೇಲ್ಯರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದಿಳಿಯದೆ ಸಾಯಲೇಬೇಕು ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅರಸನಿಗೆ, “ಯೆಹೋವ ದೇವರ ವಾಕ್ಯವನ್ನು ವಿಚಾರಿಸಲು ಇಸ್ರಾಯೇಲಿನಲ್ಲಿ ದೇವರಿಲ್ಲವೆಂಬ ಹಾಗೆ ನೀನು ಎಕ್ರೋನಿನ ದೇವರಾದ ಬಾಳ್ ಜೆಬೂಬನ್ನು ವಿಚಾರಿಸಲು ದೂತರನ್ನು ಕಳುಹಿಸಿದ ಕಾರಣ, ‘ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವೆ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು. ಅಧ್ಯಾಯವನ್ನು ನೋಡಿ |
ಸಂದೇಶಕರು ಅಹಜ್ಯನಿಗೆ, “ಒಬ್ಬನು ನಮ್ಮನ್ನು ಭೇಟಿಯಾಗಿ ನಿಮ್ಮನ್ನು ಕಳುಹಿಸಿದ ರಾಜನ ಬಳಿಗೆ ಹಿಂದಿರುಗಿ ಹೋಗಿ ಯೆಹೋವನು ಹೇಳುವುದನ್ನು ಅವನಿಗೆ ತಿಳಿಸಿ. ಯೆಹೋವನು ಹೇಳುವುದೇನೆಂದರೆ: ‘ಇಸ್ರೇಲಿನಲ್ಲಿ ಒಬ್ಬ ದೇವರಿದ್ದಾನೆ! ಹೀಗಿರುವಾಗ ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಸಂದೇಶಕರನ್ನು ಕಳುಹಿಸಿದುದೇಕೆ? ನೀನು ಈ ಕಾರ್ಯವನ್ನು ಮಾಡಿದ್ದರಿಂದ ನಿನ್ನ ಹಾಸಿಗೆಯಿಂದ ಮೇಲಕ್ಕೇಳುವುದಿಲ್ಲ. ನೀನು ಅಲ್ಲೇ ಸಾಯುವೆ!’” ಎಂಬುದಾಗಿ ಹೇಳಿದರು.
ಆದರೆ ನಾನು ಅವರಿಗೆ ಉತ್ತರಕೊಡುವೆನು. ಅವರಿಗೆ ನೀನು ಹೀಗೆ ಹೇಳಬೇಕು: ‘ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ: ಇಸ್ರೇಲರಲ್ಲಿ ಯಾರಾದರೂ ಪ್ರವಾದಿಯ ಬಳಿಗೆ ಬಂದು ನನ್ನ ಸಲಹೆಯನ್ನು ಕೇಳಿದರೆ, ನಾನೇ ಆ ಮನುಷ್ಯನಿಗೆ ಉತ್ತರ ಕೊಡುವೆನು. ಅವನ ಬಳಿಯಲ್ಲಿ ಹೊಲಸು ವಿಗ್ರಹಗಳಿದ್ದರೂ, ಅವನನ್ನು ಪಾಪದಲ್ಲಿ ಬೀಳುವಂತೆ ಮಾಡಿದ ವಸ್ತುಗಳನ್ನು ಅವನು ಇಟ್ಟುಕೊಂಡಿದ್ದರೂ, ಅವನು ಆ ವಿಗ್ರಹಗಳನ್ನು ಇನ್ನೂ ಪೂಜೆ ಮಾಡುತ್ತಿದ್ದರೂ ನಾನು ಅವನೊಂದಿಗೆ ಮಾತನಾಡುವೆನು. ಅವನ ವಿಗ್ರಹಾರಾಧನೆಗೆ ತಕ್ಕ ಉತ್ತರವನ್ನೇ ಕೊಡುವೆನು.