Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 1:17 - ಪರಿಶುದ್ದ ಬೈಬಲ್‌

17 ಎಲೀಯನ ಮೂಲಕ ಯೆಹೋವನು ಹೇಳಿದಂತೆಯೇ ಅಹಜ್ಯನು ಸತ್ತುಹೋದನು. ಅಹಜ್ಯನಿಗೆ ಮಕ್ಕಳಿರಲಿಲ್ಲ. ಆದ್ದರಿಂದ ಅಹಜ್ಯನ ನಂತರ ಯೆಹೋರಾಮನು ಹೊಸ ರಾಜನಾದನು. ಯೆಹೋಷಾಫಾಟನ ಮಗನಾದ ಯೆಹೋರಾಮನು ಯೆಹೂದದ ರಾಜನಾಗಿದ್ದ ಎರಡನೆಯ ವರ್ಷದಲ್ಲಿ ಯೊಹೋರಾಮನು ಆಳುವುದಕ್ಕೆ ಆರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆಹೋವನು ಎಲೀಯನ ಮುಖಾಂತರವಾಗಿ ಮುಂತಿಳಿಸಿದಂತೆ ಅರಸನು ಸತ್ತನು. ಅವನಿಗೆ ಮಗನಿಲ್ಲದೆ ಇದ್ದುದರಿಂದ ಅವನಿಗೆ ಬದಲಾಗಿ ಅವನ ತಮ್ಮನಾದ ಯೋರಾಮನೆಂಬವನು ಯೆಹೂದ್ಯರ ಅರಸನಾದ ಯೆಹೋಷಾಫಾಟನ ಮಗ ಯೆಹೋರಾಮನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಇಸ್ರಾಯೇಲರ ಅರಸನಾದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸರ್ವೇಶ್ವರ ಎಲೀಯನ ಮುಖಾಂತರ ಮುಂತಿಳಿಸಿದಂತೆಯೇ ಅರಸನು ಸತ್ತುಹೋದನು. ಅವನಿಗೆ ಮಕ್ಕಳಿರಲಿಲ್ಲ. ಅವನ ಸ್ಥಾನದಲ್ಲಿ ಅವನ ತಮ್ಮ ಯೋರಾಮನು, ಯೆಹೂದ್ಯರ ಅರಸ ಯೆಹೋಷಾಫಾಟನ ಮಗ ಯೆಹೋರಾಮನ ಅಳ್ವಿಕೆಯ ಎರಡನೆಯ ವರ್ಷದಲ್ಲಿ, ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೆಹೋವನು ಎಲೀಯನ ಮುಖಾಂತರವಾಗಿ ಮುಂತಿಳಿಸಿದಂತೆ ಅರಸನು ಸತ್ತನು. ಅವನಿಗೆ ಮಗನಿಲ್ಲದ್ದರಿಂದ ಅವನಿಗೆ ಬದಲಾಗಿ [ಅವನ ತಮ್ಮನಾದ] ಯೋರಾಮನೆಂಬವನು ಯೆಹೂದ್ಯರ ಅರಸನಾದ ಯೆಹೋಷಾಫಾಟನ ಮಗ ಯೆಹೋರಾಮನ ಆಳಿಕೆಯ ಎರಡನೆಯ ವರುಷದಲ್ಲಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಹಾಗೆಯೇ ಅವನು ಎಲೀಯನು ಹೇಳಿದ ಯೆಹೋವ ದೇವರ ವಾಕ್ಯದ ಪ್ರಕಾರವೇ ಸತ್ತುಹೋದನು. ಅಹಜ್ಯನಿಗೆ ಮಗನಿಲ್ಲದ್ದರಿಂದ ಯೆಹೂದದ ಅರಸನಾದ ಯೆಹೋಷಾಫಾಟನ ಮಗ ಯೆಹೋರಾಮನ ಎರಡನೆಯ ವರ್ಷದಲ್ಲಿ ಯೋರಾಮನು ಅವನಿಗೆ ಬದಲಾಗಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 1:17
11 ತಿಳಿವುಗಳ ಹೋಲಿಕೆ  

ಅಹಾಬನ ಮಗನಾದ ಯೋರಾಮನು ಸಮಾರ್ಯದಲ್ಲಿ ಇಸ್ರೇಲಿನ ರಾಜನಾದನು. ಯೆಹೋಷಾಫಾಟನ ಹದಿನೆಂಟನೆಯ ವರ್ಷದ ಆಳ್ವಿಕೆಯಲ್ಲಿ ಯೋರಾಮನು ಯೆಹೂದದ ರಾಜನಾಗಿ ಆಳಲಾರಂಭಿಸಿದನು. ಯೋರಾಮನು ಹನ್ನೆರಡು ವರ್ಷ ಆಳಿದನು.


ಅಹಜ್ಯನು ಅಹಾಬನ ಮಗ. ಯೆಹೋಷಾಫಾಟನು ಯೆಹೂದದ ರಾಜನಾಗಿದ್ದ ಹದಿನೇಳನೆಯ ವರ್ಷದಲ್ಲಿ ಅವನು ಇಸ್ರೇಲಿನ ರಾಜನಾದನು. ಅಹಜ್ಯನು ಸಮಾರ್ಯದಲ್ಲಿ ಎರಡು ವರ್ಷ ರಾಜ್ಯವಾಳಿದನು.


ಅಹಜ್ಯನು ಮಾಡಿದ ಇತರ ಕಾರ್ಯಗಳ ಬಗ್ಗೆ “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಬರೆಯಲಾಗಿದೆ.


ಮೋವಾಬ್ ದೇಶದಲ್ಲಿ ಯೆಹೋವನ ಸೇವಕನಾದ ಮೋಶೆಯು ಸತ್ತುಹೋದನು. ಯೆಹೋವನು ಅವನಿಗೆ ಹಾಗೆ ಆಗುತ್ತದೆಂದು ಮುಂಚೆಯೇ ತಿಳಿಸಿದ್ದನು.


ಮಡಕೆಯಲ್ಲಿದ್ದ ಹಿಟ್ಟು ಮತ್ತು ಪಾತ್ರೆಯಲ್ಲಿದ್ದ ಎಣ್ಣೆ ಎಂದೆಂದಿಗೂ ಖಾಲಿಯಾಗಲಿಲ್ಲ. ಯೆಹೋವನು ಎಲೀಯನ ಮೂಲಕ ಹೇಳಿದ್ದಂತೆಯೇ ಇದು ಸಂಭವಿಸಿತು.


ಆ ಜನರು ಅಹಾಬನ ರಥವನ್ನು ಸಮಾರ್ಯದ ಕೊಳದ ನೀರಿನಲ್ಲಿ ತೊಳೆದರು. ರಥದಲ್ಲಿದ್ದ ರಾಜನಾದ ಅಹಾಬನ ರಕ್ತವನ್ನು ನಾಯಿಗಳು ನೆಕ್ಕಿದವು. ದೇವದಾಸಿಯರು ಆ ಕೊಳದ ನೀರನ್ನು ಸ್ನಾನಕ್ಕೆ ಉಪಯೋಗಿಸುತ್ತಿದ್ದರು. ಯೆಹೋವನು ಹೇಳಿದ್ದ ರೀತಿಯಲ್ಲಿಯೇ ಈ ಸಂಗತಿಗಳು ಸಂಭವಿಸಿದವು.


ಯೆಹೋಷಾಫಾಟನು ರಾಜನಾದಾಗ ಅವನಿಗೆ ಮೂವತ್ತೈದು ವರ್ಷ ವಯಸ್ಸಾಗಿತ್ತು. ಯೆಹೋಷಾಫಾಟನು ಜೆರುಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಯೆಹೋಷಾಫಾಟನ ತಾಯಿಯು ಆಜೂಬಳೆಂಬ ಹೆಸರಿನವಳು. ಆಜೂಬಳು ಶಿಲ್ಹಿಯ ಮಗಳು.


ಜನರು ಹಿಂದಿರುಗಿ ಬಂದು ಯೇಹುವಿಗೆ ಅದನ್ನು ಹೇಳಿದರು. ಯೇಹುವು, “ಯೆಹೋವನು ತನ್ನ ಸೇವಕನೂ ತಿಷ್ಬೀಯನೂ ಆದ ಎಲೀಯನಿಗೆ ಈ ರೀತಿ ಸಂದೇಶ ನೀಡಲು ಹೇಳಿದ್ದನು. ಎಲೀಯನು ಹೇಳಿದ್ದೇನೆಂದರೆ: ಇಜ್ರೇಲ್ ಪ್ರದೇಶದಲ್ಲಿ ಈಜೆಬೆಲಳ ದೇಹವನ್ನು ನಾಯಿಗಳು ತಿನ್ನುತ್ತವೆ.


ಯೇಹು ಸಮಾರ್ಯಕ್ಕೆ ಬಂದು, ಅಹಾಬನ ಕುಟುಂಬದಲ್ಲಿ ಜೀವಸಹಿತರಾಗಿ ಸಮಾರ್ಯದಲ್ಲಿ ಉಳಿದಿದ್ದವರನ್ನೆಲ್ಲಾ ಕೊಂದುಹಾಕಿದನು. ಯೆಹೋವನು ಎಲೀಯನಿಗೆ ಹೇಳಿದ್ದಂತೆಯೇ ಯೇಹು ಮಾಡಿದನು.


ಆಸನ ಮಗನಾದ ಯೆಹೋಷಾಫಾಟನು ಪಟ್ಟಕ್ಕೆ ಬಂದನು. ಅವನು ತನ್ನ ರಾಜ್ಯವನ್ನು ಬಲಪಡಿಸಿ ಇಸ್ರೇಲರಿಂದ ತನಗೆ ಅಪಾಯವಾಗದಂತೆ ಸುರಕ್ಷೆಯ ವ್ಯವಸ್ಥೆ ಮಾಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು