Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 1:18 - ಪರಿಶುದ್ದ ಬೈಬಲ್‌

18 ಅಹಜ್ಯನು ಮಾಡಿದ ಇತರ ಕಾರ್ಯಗಳ ಬಗ್ಗೆ “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅಹಜ್ಯನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅಹಜ್ಯನ ಉಳಿದ ಚರಿತ್ರೆ ಹಾಗು ಕಾರ್ಯಕಲಾಪಗಳು ಇಸ್ರಯೇಲ್ ಅರಸುಗಳ ಇತಿಹಾಸ ಗ್ರಂಥದಲ್ಲಿ ಲಿಖಿತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅಹಜ್ಯನ ಉಳಿದ ಚರಿತ್ರೆಯೂ ಅವನ ಕೃತ್ಯಗಳೂ ಇಸ್ರಾಯೇಲ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅಹಜ್ಯನು ಮಾಡಿದ ಇತರ ಕ್ರಿಯೆಗಳು ಇಸ್ರಾಯೇಲಿನ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 1:18
15 ತಿಳಿವುಗಳ ಹೋಲಿಕೆ  

ರಾಜನಾದ ಅಹಾಬನು ತನ್ನ ಆಳ್ವಿಕೆಯ ಕಾಲದಲ್ಲಿ ಮಾಡಿದ ಸಂಗತಿಗಳನ್ನೆಲ್ಲಾ “ಇಸ್ರೇಲಿನ ರಾಜರುಗಳ ಇತಿಹಾಸ” ಪುಸ್ತಕದಲ್ಲಿ ಬರೆದಿದ್ದಾರೆ. ರಾಜನು ತನ್ನ ಅರಮನೆಯನ್ನು ಮತ್ತಷ್ಟು ಸುಂದರವಾಗಿ ಕಾಣುವಂತೆ ಮಾಡಲು ಬಳಸಿದ ದಂತದ ಕುರಿತಾಗಿಯೂ ಆ ಪುಸ್ತಕವು ತಿಳಿಸುತ್ತದೆ. ರಾಜನು ನಿರ್ಮಿಸಿದ ನಗರಗಳ ಬಗ್ಗೆಯೂ ಆ ಪುಸ್ತಕವು ತಿಳಿಸುತ್ತದೆ.


ರಾಜನಾದ ಯಾರೊಬ್ಬಾಮನು ಇತರ ಅನೇಕ ಕಾರ್ಯಗಳನ್ನು ಮಾಡಿದನು. ಅವನು ಯುದ್ಧಗಳಲ್ಲಿ ಹೋರಾಡಿದನು ಮತ್ತು ಜನರನ್ನು ಆಳಿದನು. “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಅವನು ಮಾಡಿದ ಕಾರ್ಯಗಳೆಲ್ಲವನ್ನು ಬರೆಯಲಾಗಿದೆ.


ಎಲೀಯನ ಮೂಲಕ ಯೆಹೋವನು ಹೇಳಿದಂತೆಯೇ ಅಹಜ್ಯನು ಸತ್ತುಹೋದನು. ಅಹಜ್ಯನಿಗೆ ಮಕ್ಕಳಿರಲಿಲ್ಲ. ಆದ್ದರಿಂದ ಅಹಜ್ಯನ ನಂತರ ಯೆಹೋರಾಮನು ಹೊಸ ರಾಜನಾದನು. ಯೆಹೋಷಾಫಾಟನ ಮಗನಾದ ಯೆಹೋರಾಮನು ಯೆಹೂದದ ರಾಜನಾಗಿದ್ದ ಎರಡನೆಯ ವರ್ಷದಲ್ಲಿ ಯೊಹೋರಾಮನು ಆಳುವುದಕ್ಕೆ ಆರಂಭಿಸಿದನು.


ಯೆಹೋವನು ಎಲೀಯನನ್ನು ಸುಂಟರಗಾಳಿಯ ಮೂಲಕ ಪರಲೋಕಕ್ಕೆ ಕರೆದುಕೊಳ್ಳುವ ಕಾಲ ಹತ್ತಿರ ಬಂದಿತು. ಎಲೀಯನು ಎಲೀಷನೊಡನೆ ಗಿಲ್ಗಾಲಿನಿಂದ ಹೋದನು.


“ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯೇಹು ಮಾಡಿದ ಇತರ ಉತ್ತಮಕಾರ್ಯಗಳನ್ನೆಲ್ಲ ಬರೆಯಲಾಗಿದೆ.


“ಇಸ್ರೇಲಿನ ರಾಜರುಗಳು ಇತಿಹಾಸ” ಎಂಬ ಪುಸ್ತಕದಲ್ಲಿ ಯೆಹೋವಾಹಾಜನು ಮಾಡಿದ ಇತರ ಮಹಾಕಾರ್ಯಗಳನ್ನು ಕುರಿತು ಬರೆಯಲಾಗಿದೆ.


ಯೋವಾಷನು ಮಾಡಿದ ಮಹಾಕಾರ್ಯಗಳನ್ನು ಮತ್ತು ಯೆಹೂದದ ರಾಜನಾದ ಅಮಚ್ಯನ ವಿರುದ್ಧವಾಗಿ ಅವನು ಮಾಡಿದ ಯುದ್ಧಗಳನ್ನು, “ಇಸ್ರೇಲರ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಬರೆಯಲಾಗಿದೆ.


“ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯೋವಾಷನು ಮಾಡಿದ ಇತರ ಮಹಾಕಾರ್ಯಗಳನ್ನೂ ಯೆಹೂದದ ರಾಜನಾದ ಅಮಚ್ಯನ ವಿರುದ್ಧ ಅವನು ಹೇಗೆ ಹೋರಾಡಿದನೆಂಬುದನ್ನೂ ಬರೆಯಲಾಗಿದೆ.


“ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯಾರೊಬ್ಬಾಮನು ಮಾಡಿದ ಇತರ ಮಹಾಕಾರ್ಯಗಳ ಬಗ್ಗೆ ಬರೆಯಲಾಗಿದೆ. ಯಾರೊಬ್ಬಾಮನು ಇಸ್ರೇಲಿಗಾಗಿ ದಮಸ್ಕವನ್ನು ಮತ್ತು ಹಮಾತನ್ನು ವಶಪಡಿಸಿಕೊಂಡದ್ದನ್ನು ಇದು ಒಳಗೊಂಡಿದೆ. (ಈ ನಗರಗಳು ಯೆಹೂದಕ್ಕೆ ಸೇರಿದ್ದವು.)


“ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಜೆಕರ್ಯನು ಮಾಡಿದ ಇತರ ಕಾರ್ಯಗಳನ್ನೆಲ್ಲ ಬರೆಯಲಾಗಿದೆ.


“ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಮೆನಹೇಮನು ಮಾಡಿದ ಉಳಿದ ಮಹಾಕಾರ್ಯಗಳನ್ನು ಬರೆಯಲಾಗಿದೆ.


ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಪೆಕಹ್ಯನು ಮಾಡಿದನು. ಇಸ್ರೇಲರನ್ನು ಪಾಪಕೃತ್ಯಗಳಿಗೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಕೃತ್ಯಗಳನ್ನೇ ಪೆಕಹ್ಯನು ಮುಂದುವರಿಸಿದನು.


“ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಪೆಕಹ್ಯನು ಮಾಡಿದ ಇತರ ಮಹಾಕಾರ್ಯಗಳನ್ನು ಕುರಿತು ಬರೆಯಲಾಗಿದೆ.


ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನೇ ಪೆಕಹನು ಮಾಡಿದನು. ಇಸ್ರೇಲರನ್ನು ಪಾಪಮಾಡುವಂತೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಕೃತ್ಯಗಳನ್ನು ಪೆಕಹನು ಮುಂದುವರಿಸಿದನು.


“ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಪೆಕಹನು ಮಾಡಿದ ಇತರ ಮಹಾಕಾರ್ಯಗಳನ್ನು ಬರೆಯಲಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು