2 ಅರಸುಗಳು 1:2 - ಪರಿಶುದ್ದ ಬೈಬಲ್2 ಒಂದು ದಿನ, ಅಹಜ್ಯನು ಸಮಾರ್ಯದ ತನ್ನ ಮನೆಯ ಮಾಳಿಗೆಯ ಮೇಲಿದ್ದನು. ಅಹಜ್ಯನು ಮನೆಯ ಮೇಲಿನ ಮರದ ಕಂಬಗಳ ಮೂಲಕ ಕೆಳಕ್ಕೆ ಬಿದ್ದನು. ಅವನಿಗೆ ಬಹಳ ಗಾಯಗಳಾದವು. ಅಹಜ್ಯನು ಸಂದೇಶಕರನ್ನು ಕರೆದು ಅವರಿಗೆ, “ಎಕ್ರೋನಿನ ದೇವರಾದ ಬಾಳ್ಜೆಬೂಬನ ಅರ್ಚಕರ ಬಳಿಗೆ ಹೋಗಿ, ನನ್ನ ಗಾಯಗಳು ಗುಣವಾಗುತ್ತವೆಯೇ ಎಂಬುದನ್ನು ಅವರಿಂದ ತಿಳಿದುಕೊಳ್ಳಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅಹಜ್ಯನು ಸಮಾರ್ಯದಲ್ಲಿ ತನ್ನ ಮೇಲುಪ್ಪರಿಗೆಯ ಕಿಟಿಕಿಯಿಂದ ಬಿದ್ದು ಅಸ್ವಸ್ಥನಾದಾಗ ತನ್ನ ಸೇವಕರನ್ನು ಕರೆದು ಅವರಿಗೆ, “ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಸನ್ನಿಧಿಗೆ ಹೋಗಿ ನಾನು ಈ ಅಸ್ವಸ್ಥತೆಯಿಂದ ವಾಸಿಯಾಗುವೆನೋ ಇಲ್ಲವೋ ಎಂಬುದನ್ನು ವಿಚಾರಿಸಿರಿ” ಎಂದು ಹೇಳಿಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅಹಜ್ಯನು ಸಮಾರಿಯದಲ್ಲಿದ್ದ ತನ್ನ ಮೇಲುಪ್ಪರಿಗೆಯ ಕಿಟಕಿಯೊಂದರಿಂದ ಬಿದ್ದು ಅಸ್ವಸ್ಥನಾಗಿದ್ದನು. ಅವನು ತನ್ನ ಸೇವಕರನ್ನು ಕರೆದು, “ನೀವು ಎಕ್ರೋನಿನ ದೇವರಾದ ‘ಬಾಳ್ಜೆಬೂಬ’ನ ಸನ್ನಿಧಿಗೆ ಹೋಗಿ ನಾನು ಈ ಅಸ್ವಸ್ಥತೆಯಿಂದ ಗುಣವಾಗುವೆನೋ ಇಲ್ಲವೋ, ಎಂದು ವಿಚಾರಿಸಿ ಬನ್ನಿ,” ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅಹಜ್ಯನು ಸಮಾರ್ಯದಲ್ಲಿ ತನ್ನ ಮೇಲುಪ್ಪರಿಗೆಯ ಜಾಳಾಂಧರ ಕಿಟಕಿಯಿಂದ ಬಿದ್ದು ಅಸ್ವಸ್ಥನಾದಾಗ ತನ್ನ ಸೇವಕರನ್ನು ಕರೆದು ಅವರಿಗೆ - ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಸನ್ನಿಧಿಗೆ ಹೋಗಿ ನಾನು ಈ ಅಸ್ವಸ್ಥತೆಯಿಂದ ವಾಸಿಯಾಗುವೆನೋ ಇಲ್ಲವೋ ಎಂಬದನ್ನು ವಿಚಾರಿಸಿರಿ ಎಂದು ಹೇಳಿಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅಹಜ್ಯನು ಸಮಾರ್ಯದಲ್ಲಿದ್ದ ತನ್ನ ಮೇಲುಪ್ಪರಿಗೆಯ ಕಿಟಕಿಯೊಂದರಿಂದ ಬಿದ್ದು ಅಸ್ವಸ್ಥನಾಗಿದ್ದನು. ಅವನು ತನ್ನ ಸೇವಕರನ್ನು ಕರೆದು, “ಎಕ್ರೋನಿನ ದೇವರಾದ ‘ಬಾಳ್ ಜೆಬೂಬನ’ ಸನ್ನಿಧಿಗೆ ಹೋಗಿ, ನಾನು ಈ ಅಸ್ವಸ್ಥತೆಯಿಂದ ಗುಣವಾಗುವೆನೋ ಇಲ್ಲವೋ? ಎಂದು ವಿಚಾರಿಸಿ ಬನ್ನಿ,” ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿ |
ಸಂದೇಶಕರು ಅಹಜ್ಯನಿಗೆ, “ಒಬ್ಬನು ನಮ್ಮನ್ನು ಭೇಟಿಯಾಗಿ ನಿಮ್ಮನ್ನು ಕಳುಹಿಸಿದ ರಾಜನ ಬಳಿಗೆ ಹಿಂದಿರುಗಿ ಹೋಗಿ ಯೆಹೋವನು ಹೇಳುವುದನ್ನು ಅವನಿಗೆ ತಿಳಿಸಿ. ಯೆಹೋವನು ಹೇಳುವುದೇನೆಂದರೆ: ‘ಇಸ್ರೇಲಿನಲ್ಲಿ ಒಬ್ಬ ದೇವರಿದ್ದಾನೆ! ಹೀಗಿರುವಾಗ ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಸಂದೇಶಕರನ್ನು ಕಳುಹಿಸಿದುದೇಕೆ? ನೀನು ಈ ಕಾರ್ಯವನ್ನು ಮಾಡಿದ್ದರಿಂದ ನಿನ್ನ ಹಾಸಿಗೆಯಿಂದ ಮೇಲಕ್ಕೇಳುವುದಿಲ್ಲ. ನೀನು ಅಲ್ಲೇ ಸಾಯುವೆ!’” ಎಂಬುದಾಗಿ ಹೇಳಿದರು.
ಸೊಲೊಮೋನನು ನನ್ನನ್ನು ಅನುಸರಿಸುವುದನ್ನು ನಿಲ್ಲಿಸಿದ ಕಾರಣ ನಾನು ಅವನ ರಾಜ್ಯವನ್ನು ಅವನಿಂದ ತೆಗೆದುಕೊಳ್ಳುವೆನು. ಅವನು ಚೀದೋನ್ಯರ ದೇವತೆಯಾದ ಅಷ್ಟೋರೆತಳನ್ನೂ ಮೋವಾಬ್ಯರ ದೇವರಾದ ಕೆಮೋಷನನ್ನೂ ಅಮ್ಮೋನಿಯರ ದೇವರಾದ ಮಿಲ್ಕೋಮನನ್ನೂ ಪೂಜಿಸಿದನು. ಸೊಲೊಮೋನನು ತಾನು ಮಾಡುತ್ತಿದ್ದ ಸರಿಯಾದ ಮತ್ತು ಉತ್ತಮವಾದ ಕಾರ್ಯಗಳನ್ನು ನಿಲ್ಲಿಸಿದನು. ಅವನು ನನ್ನ ಕಟ್ಟಳೆಗಳನ್ನು ಮತ್ತು ಆಜ್ಞೆಗಳನ್ನು ಅನುಸರಿಸಲಿಲ್ಲ. ತನ್ನ ತಂದೆಯಾದ ದಾವೀದನು ಜೀವಿಸಿದಂತೆ ಅವನು ಜೀವಿಸುತ್ತಿಲ್ಲ.
ಆದರೆ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಒಂದು ಬಾಣವನ್ನು ಗಾಳಿಯಲ್ಲಿ ಹೊಡೆದನು. ಆದರೆ ಅವನ ಬಾಣವು ಇಸ್ರೇಲಿನ ರಾಜನಾದ ಅಹಾಬನಿಗೆ ಬಡಿಯಿತು. ಆ ಬಾಣವು ರಾಜನ ದೇಹದ ಕವಚದ ಸಣ್ಣ ಸಂಧಿಯಲ್ಲಿ ತಾಕಿತು. ರಾಜನಾದ ಅಹಾಬನು ತನ್ನ ರಥದ ಸಾರಥಿಗೆ, “ಒಂದು ಬಾಣವು ನನಗೆ ತಾಕಿತು! ರಥವನ್ನು ಈ ಪ್ರದೇಶದಿಂದ ಹೊರಗೆ ಓಡಿಸು. ನಾವು ಯುದ್ಧದಿಂದ ಹೊರಟುಹೋಗಬೇಕಾಗಿದೆ” ಎಂದು ಹೇಳಿದನು.