Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 1:3 - ಪರಿಶುದ್ದ ಬೈಬಲ್‌

3 ಆದರೆ ಯೆಹೋವನ ದೂತನೊಬ್ಬನು ತಿಷ್ಬೀಯನಾದ ಎಲೀಯನಿಗೆ, “ರಾಜನಾದ ಅಹಜ್ಯನು ಸಮಾರ್ಯದಿಂದ ಕೆಲವು ಸಂದೇಶಕರನ್ನು ಕಳುಹಿಸಿದ್ದಾನೆ. ನೀನು ಹೋಗಿ ಅವರನ್ನು ಭೇಟಿಯಾಗಿ ಅವರಿಗೆ, ‘ಇಸ್ರೇಲಿನಲ್ಲಿಯೂ ಒಬ್ಬ ದೇವರಿದ್ದಾನೆ! ಹೀಗಿರುವಾಗ ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಬಳಿಗೆ ಹೋಗಿ ಪ್ರಶ್ನೆಗಳನ್ನು ಕೇಳುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಯೆಹೋವನ ದೂತನು ತಿಷ್ಬೀಯನಾದ ಎಲೀಯನಿಗೆ, “ನೀನು ಹೋಗಿ ಸಮಾರ್ಯದ ಅರಸನ ಸೇವಕರನ್ನು ಎದುರುಗೊಂಡು ಅವರಿಗೆ, ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಹೋಗುವುದೇನು ಇಸ್ರಾಯೇಲರಲ್ಲಿ ದೇವರಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆದರೆ ಸರ್ವೇಶ್ವರ ಸ್ವಾಮಿಯ ದೂತನು ತಿಷ್ಬೀಯನಾದ ಎಲೀಯನಿಗೆ, “ನೀನು ಹೋಗಿ ಸಮಾರಿಯದ ಅರಸನ ಆ ಸೇವಕರನ್ನು ಭೇಟಿಯಾಗು. ಅವರಿಗೆ, ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವ ಅಗತ್ಯವಾದರೂ ಏನು? ಇಸ್ರಯೇಲರಲ್ಲಿ ದೇವರಿಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಯೆಹೋವನ ದೂತನು ತಿಷ್ಬೀಯನಾದ ಎಲೀಯನಿಗೆ - ನೀನು ಹೋಗಿ ಸಮಾರ್ಯದ ಅರಸನ ಸೇವಕರನ್ನು ಎದುರುಗೊಂಡು ಅವರಿಗೆ - ನೀವು ಎಕ್ರೋನಿನ ದೇವರಾದ ಬಾಳ್ವೆಬೂಬನನ್ನು ವಿಚಾರಿಸುವದಕ್ಕೆ ಹೋಗುವದೇನು? ಇಸ್ರಾಯೇಲ್ಯರಲ್ಲಿ ದೇವರಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೆ ಯೆಹೋವ ದೇವರ ದೂತನು ತಿಷ್ಬೀಯನಾದ ಎಲೀಯನಿಗೆ, “ನೀನೆದ್ದು ಸಮಾರ್ಯದ ಅರಸನ ಸೇವಕರಿಗೆ ಎದುರಾಗಿ ಹೋಗಿ ಅವರಿಗೆ, ‘ಇಸ್ರಾಯೇಲಿನಲ್ಲಿ ದೇವರು ಇಲ್ಲವೆ? ನೀವು ಎಕ್ರೋನಿನ ದೇವರಾದ ಬಾಳ್ ಜೆಬೂಬನನ್ನು ವಿಚಾರಿಸಲು ಹೋಗುತ್ತಿರುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 1:3
21 ತಿಳಿವುಗಳ ಹೋಲಿಕೆ  

ಎಲೀಯನು ಗಿಲ್ಯಾದಿನ ತಿಷ್ಬೀ ಪಟ್ಟಣದ ಒಬ್ಬ ಪ್ರವಾದಿ. ಎಲೀಯನು ರಾಜನಾದ ಅಹಾಬನಿಗೆ, “ನಾನು ಇಸ್ರೇಲರ ದೇವರಾದ ಯೆಹೋವನ ಸೇವಕನಾಗಿದ್ದೇನೆ. ಮುಂದಿನ ಕೆಲವು ವರ್ಷಗಳವರೆಗೆ ಹಿಮವಾಗಲಿ ಮಳೆಯಾಗಲಿ ಬೀಳುವುದಿಲ್ಲವೆಂದು ನಾನು ಆತನ ಹೆಸರಿನ ಮೇಲೆ ಪ್ರಮಾಣ ಮಾಡುತ್ತೇನೆ. ನಾನು ಬೀಳುವಂತೆ ಮಳೆಗೆ ಆಜ್ಞಾಪಿಸಿದರೆ ಮಾತ್ರ ಅದು ಬೀಳುತ್ತದೆ” ಎಂದು ಹೇಳಿದನು.


“ಕೆಲವು ಜನರು ಪ್ರಯೋಜನವಿಲ್ಲದ ವಿಗ್ರಹಗಳನ್ನು ಪೂಜಿಸುತ್ತಾರೆ. ಆದರೆ ಆ ವಿಗ್ರಹಗಳು ಅವರಿಗೆ ಸಹಾಯ ಮಾಡುವುದಿಲ್ಲ.


ಯೆಹೂದದ ಜನರು ದೇವರನ್ನು ಬಲ್ಲವರೇ ಸರಿ! ಇಸ್ರೇಲಿನ ಜನರು ಆತನ ನಾಮವನ್ನು ಗೌರವಿಸುವರು.


ಪ್ರಭುವಿನ ದೂತನೊಬ್ಬನು ಫಿಲಿಪ್ಪನಿಗೆ, “ನೀನು ಸಿದ್ಧನಾಗಿ ದಕ್ಷಿಣದ ಕಡೆಗೆ ಅಂದರೆ ಜೆರುಸಲೇಮಿನಿಂದ ಗಾಜಾಕ್ಕೆ ಹೋಗುವ ಮರಳುಗಾಡಿನ ಮಾರ್ಗಕ್ಕೆ ಹೋಗು” ಎಂದು ಹೇಳಿದನು.


ಜೆರುಸಲೇಮಿನ ಧರ್ಮೋಪದೇಶಕರು, “ಇವನೊಳಗೆ ದೆವ್ವಗಳ ಒಡೆಯನಾದ ಬೆಲ್ಜೆಬೂಲನು ವಾಸಿಸುತ್ತಿದ್ದಾನೆ. ದೆವ್ವಗಳಿಂದ ಪೀಡಿತರಾಗಿರುವವರನ್ನು ಇವನು ಬಿಡಿಸುವುದು ದೆವ್ವಗಳ ಒಡೆಯನ ಸಹಾಯದಿಂದಲೇ” ಎಂದು ಹೇಳಿದರು.


ನಾಮಾನನು ತನ್ನ ಗುಂಪಿನೊಂದಿಗೆ ದೇವಮನುಷ್ಯನ ಹತ್ತಿರಕ್ಕೆ ಹಿಂದಿರುಗಿ ಬಂದನು. ಅವನು ಎಲೀಷನ ಮುಂದೆ ನಿಂತು, “ನೋಡಿ, ಇಸ್ರೇಲಿನಲ್ಲಿಯೇ ಹೊರತು ಭೂಮಂಡಲದ ಬೇರೆಲ್ಲಿಯೂ ದೇವರು ಇಲ್ಲವೇ ಇಲ್ಲ ಎಂಬುದು ಈಗ ತಾನೇ ನನಗೆ ತಿಳಿಯಿತು! ಈಗ ದಯಮಾಡಿ ನನ್ನ ಕಾಣಿಕೆಯನ್ನು ಸ್ವೀಕರಿಸಿ!” ಎಂದು ಹೇಳಿದನು.


ಸಂದೇಶಕರು ಅಹಜ್ಯನಿಗೆ, “ಅವನು ಉಣ್ಣೆಯ ಮೇಲಂಗಿಯನ್ನು ಧರಿಸಿದ್ದನು ಮತ್ತು ಸೊಂಟಕ್ಕೆ ಚರ್ಮದ ಪಟ್ಟಿಯನ್ನು ಕಟ್ಟಿಕೊಂಡಿದ್ದನು” ಎಂದರು. ಆಗ ಅಹಜ್ಯನು, “ಅವನು ತಿಷ್ಬೀಯನಾದ ಎಲೀಯನು” ಎಂದು ಹೇಳಿದನು.


ಸಂದೇಶಕರು ಅಹಜ್ಯನಿಗೆ, “ಒಬ್ಬನು ನಮ್ಮನ್ನು ಭೇಟಿಯಾಗಿ ನಿಮ್ಮನ್ನು ಕಳುಹಿಸಿದ ರಾಜನ ಬಳಿಗೆ ಹಿಂದಿರುಗಿ ಹೋಗಿ ಯೆಹೋವನು ಹೇಳುವುದನ್ನು ಅವನಿಗೆ ತಿಳಿಸಿ. ಯೆಹೋವನು ಹೇಳುವುದೇನೆಂದರೆ: ‘ಇಸ್ರೇಲಿನಲ್ಲಿ ಒಬ್ಬ ದೇವರಿದ್ದಾನೆ! ಹೀಗಿರುವಾಗ ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಸಂದೇಶಕರನ್ನು ಕಳುಹಿಸಿದುದೇಕೆ? ನೀನು ಈ ಕಾರ್ಯವನ್ನು ಮಾಡಿದ್ದರಿಂದ ನಿನ್ನ ಹಾಸಿಗೆಯಿಂದ ಮೇಲಕ್ಕೇಳುವುದಿಲ್ಲ. ನೀನು ಅಲ್ಲೇ ಸಾಯುವೆ!’” ಎಂಬುದಾಗಿ ಹೇಳಿದರು.


ಒಂದು ದಿನ, ಅಹಜ್ಯನು ಸಮಾರ್ಯದ ತನ್ನ ಮನೆಯ ಮಾಳಿಗೆಯ ಮೇಲಿದ್ದನು. ಅಹಜ್ಯನು ಮನೆಯ ಮೇಲಿನ ಮರದ ಕಂಬಗಳ ಮೂಲಕ ಕೆಳಕ್ಕೆ ಬಿದ್ದನು. ಅವನಿಗೆ ಬಹಳ ಗಾಯಗಳಾದವು. ಅಹಜ್ಯನು ಸಂದೇಶಕರನ್ನು ಕರೆದು ಅವರಿಗೆ, “ಎಕ್ರೋನಿನ ದೇವರಾದ ಬಾಳ್ಜೆಬೂಬನ ಅರ್ಚಕರ ಬಳಿಗೆ ಹೋಗಿ, ನನ್ನ ಗಾಯಗಳು ಗುಣವಾಗುತ್ತವೆಯೇ ಎಂಬುದನ್ನು ಅವರಿಂದ ತಿಳಿದುಕೊಳ್ಳಿ” ಎಂದು ಹೇಳಿದನು.


ಈ ಸಮಯದಲ್ಲಿ ಯೆಹೋವನು ಪ್ರವಾದಿಯೂ ತಿಷ್ಬೇ ಊರಿನವನೂ ಆದ ಎಲೀಯನ ಜೊತೆಯಲ್ಲಿ ಮಾತನಾಡಿದನು. ಯೆಹೋವನು ಹೀಗೆಂದನು:


ತರುವಾಯ ಯೆಹೋವನ ದೂತನು ಅವನ ಬಳಿಗೆ ಮತ್ತೆ ಬಂದು ಅವನನ್ನು ತಟ್ಟಿ ಅವನಿಗೆ, “ಎದ್ದೇಳು! ಊಟಮಾಡು! ನೀನು ಊಟ ಮಾಡದಿದ್ದರೆ, ಬಹುದೂರ ನೀನು ಪ್ರಯಾಣ ಮಾಡಬೇಕಾಗಿರುವುದರಿಂದ ನಿನ್ನಲ್ಲಿ ಸಾಕಷ್ಟು ಶಕ್ತಿಯಿರುವುದಿಲ್ಲ” ಎಂದು ಹೇಳಿದನು.


ನಂತರ ಎಲೀಯನು ಪೊದೆಯ ಕೆಳಗೆ ಮಲಗಿ ನಿದ್ದೆಹೋದನು. ದೂತನೊಬ್ಬನು ಎಲೀಯನ ಹತ್ತಿರಕ್ಕೆ ಬಂದು ಅವನನ್ನು ಸ್ಪರ್ಶಿಸಿ, “ಎದ್ದೇಳು! ಊಟಮಾಡು!” ಎಂದನು.


ಅದು ಮಧ್ಯಾಹ್ನದ ಯಜ್ಞಗಳನ್ನು ಅರ್ಪಿಸುವ ಸಮಯ. ಪ್ರವಾದಿಯಾದ ಎಲೀಯನು ಯಜ್ಞವೇದಿಕೆಯ ಹತ್ತಿರಕ್ಕೆ ಹೋಗಿ, “ಅಬ್ರಹಾಮನ, ಇಸಾಕನ ಮತ್ತು ಯಾಕೋಬನ ದೇವರಾದ ಯೆಹೋವನೇ, ನೀನು ಇಸ್ರೇಲಿನಲ್ಲಿರುವ ದೇವರೆಂಬುದನ್ನು ರುಜುವಾತುಪಡಿಸಲು ನಾನೀಗ ನಿನ್ನನ್ನು ಪ್ರಾರ್ಥಿಸುತ್ತಿದ್ದೇನೆ. ನಾನು ನಿನ್ನ ಸೇವಕನೆಂಬುದನ್ನೂ ನೀನು ನಿರೂಪಿಸು. ಈ ಕಾರ್ಯಗಳನ್ನೆಲ್ಲಾ ನಾನು ಮಾಡುವಂತೆ ನೀನು ಆಜ್ಞಾಪಿಸಿದೆ ಎನ್ನುವುದನ್ನೂ ಈ ಜನರಿಗೆ ತೋರಿಸು.


ಬರಗಾಲದ ಮೂರನೆ ವರ್ಷದಲ್ಲಿ ಯೆಹೋವನು ಎಲೀಯನಿಗೆ, “ಹೋಗಿ, ರಾಜನಾದ ಅಹಾಬನನ್ನು ಭೇಟಿಮಾಡು. ನಾನು ಬೇಗ ಮಳೆಯನ್ನು ಸುರಿಸುತ್ತೇನೆ” ಎಂದು ಹೇಳಿದನು.


ಇಂದು ನಾನು ನಿನ್ನನ್ನು ಸೋಲಿಸಲು ಯೆಹೋವನು ಸಹಾಯಮಾಡುತ್ತಾನೆ. ನಾನು ನಿನ್ನನ್ನು ಕೊಲ್ಲುತ್ತೇನೆ. ಇಂದು ನಾನು ನಿನ್ನ ತಲೆಯನ್ನು ಕತ್ತರಿಸಿ ನಿನ್ನ ದೇಹವನ್ನು ಪಕ್ಷಿಗಳಿಗೂ ಕ್ರೂರಮೃಗಗಳಿಗೂ ಆಹಾರವನ್ನಾಗಿ ಕೊಡುತ್ತೇನೆ. ಉಳಿದೆಲ್ಲ ಫಿಲಿಷ್ಟಿಯರಿಗೂ ಸಹ ನಾವು ಅದೇ ರೀತಿ ಮಾಡುತ್ತೇವೆ. ಆಗ ಇಸ್ರೇಲಿನಲ್ಲಿ ದೇವರಿದ್ದಾನೆಂಬುದು ಇಡೀ ಜಗತ್ತಿಗೆಲ್ಲ ಗೊತ್ತಾಗುವುದು!


ಇಸ್ರೇಲಿನ ರಾಜನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನೆಂಬುದು ದೇವಮನುಷ್ಯನಾದ ಎಲೀಷನಿಗೆ ತಿಳಿಯಿತು. ಎಲೀಷನು ರಾಜನಿಗೆ ಈ ಸಂದೇಶವನ್ನು ಕಳುಹಿಸಿದನು: “ನೀನು ನಿನ್ನ ಬಟ್ಟೆಗಳನ್ನು ಹರಿದುಕೊಂಡಿದ್ದು ಏಕೆ? ನಾಮಾನನು ನನ್ನ ಬಳಿಗೆ ಬರಲಿ. ಇಸ್ರೇಲಿನಲ್ಲಿ ಒಬ್ಬ ಪ್ರವಾದಿ ಇದ್ದಾನೆಂಬುದು ಅವನಿಗೆ ತಿಳಿಯುತ್ತದೆ!”


ಸೊಲೊಮೋನನು ನನ್ನನ್ನು ಅನುಸರಿಸುವುದನ್ನು ನಿಲ್ಲಿಸಿದ ಕಾರಣ ನಾನು ಅವನ ರಾಜ್ಯವನ್ನು ಅವನಿಂದ ತೆಗೆದುಕೊಳ್ಳುವೆನು. ಅವನು ಚೀದೋನ್ಯರ ದೇವತೆಯಾದ ಅಷ್ಟೋರೆತಳನ್ನೂ ಮೋವಾಬ್ಯರ ದೇವರಾದ ಕೆಮೋಷನನ್ನೂ ಅಮ್ಮೋನಿಯರ ದೇವರಾದ ಮಿಲ್ಕೋಮನನ್ನೂ ಪೂಜಿಸಿದನು. ಸೊಲೊಮೋನನು ತಾನು ಮಾಡುತ್ತಿದ್ದ ಸರಿಯಾದ ಮತ್ತು ಉತ್ತಮವಾದ ಕಾರ್ಯಗಳನ್ನು ನಿಲ್ಲಿಸಿದನು. ಅವನು ನನ್ನ ಕಟ್ಟಳೆಗಳನ್ನು ಮತ್ತು ಆಜ್ಞೆಗಳನ್ನು ಅನುಸರಿಸಲಿಲ್ಲ. ತನ್ನ ತಂದೆಯಾದ ದಾವೀದನು ಜೀವಿಸಿದಂತೆ ಅವನು ಜೀವಿಸುತ್ತಿಲ್ಲ.


ಕೆಲವರು, “ಏನು ಮಾಡಬೇಕೆಂದು ಕಣಿಹೇಳುವವರನ್ನೂ ಬೇತಾಳಿಕರನ್ನೂ ವಿಚಾರಿಸು” ಎಂದು ಹೇಳುತ್ತಾರೆ. (ಕಣಿಹೇಳುವವರು ತಾವು ಮಂತ್ರಶಕ್ತಿಯುಳ್ಳವರೆಂದು ಜನರಿಗೆ ತೋರಿಸಲು ಪಕ್ಷಿಗಳು ಮಾಡುವ ಶಬ್ದವನ್ನು ಬಾಯಿಂದ ಮಾಡಿ ತಮಗೆ ರಹಸ್ಯಗಳು ಗೊತ್ತಿವೆ ಎಂದು ತೋರಿಸಿಕೊಳ್ಳುತ್ತಾರೆ.) ನಾನು ಹೇಳುವುದೇನೆಂದರೆ, “ಜನರು ಸಹಾಯಕ್ಕಾಗಿ ದೇವರನ್ನೇ ಕೇಳಿಕೊಳ್ಳಬೇಕು. ಆ ಕಣಿಹೇಳುವವರೂ ಬೇತಾಳಿಕರೂ ತಾವು ಏನು ಮಾಡಬೇಕೆಂದು ಸತ್ತವರನ್ನು ವಿಚಾರಿಸುವರು. ಜೀವಿಸುವವರು ಸತ್ತವರನ್ನು ಯಾಕೆ ವಿಚಾರಿಸಬೇಕು?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು