2 ಅರಸುಗಳು 1:6 - ಪರಿಶುದ್ದ ಬೈಬಲ್6 ಸಂದೇಶಕರು ಅಹಜ್ಯನಿಗೆ, “ಒಬ್ಬನು ನಮ್ಮನ್ನು ಭೇಟಿಯಾಗಿ ನಿಮ್ಮನ್ನು ಕಳುಹಿಸಿದ ರಾಜನ ಬಳಿಗೆ ಹಿಂದಿರುಗಿ ಹೋಗಿ ಯೆಹೋವನು ಹೇಳುವುದನ್ನು ಅವನಿಗೆ ತಿಳಿಸಿ. ಯೆಹೋವನು ಹೇಳುವುದೇನೆಂದರೆ: ‘ಇಸ್ರೇಲಿನಲ್ಲಿ ಒಬ್ಬ ದೇವರಿದ್ದಾನೆ! ಹೀಗಿರುವಾಗ ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಸಂದೇಶಕರನ್ನು ಕಳುಹಿಸಿದುದೇಕೆ? ನೀನು ಈ ಕಾರ್ಯವನ್ನು ಮಾಡಿದ್ದರಿಂದ ನಿನ್ನ ಹಾಸಿಗೆಯಿಂದ ಮೇಲಕ್ಕೇಳುವುದಿಲ್ಲ. ನೀನು ಅಲ್ಲೇ ಸಾಯುವೆ!’” ಎಂಬುದಾಗಿ ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅದಕ್ಕೆ ಅವರು, “ಒಬ್ಬ ಮನುಷ್ಯನು ನಮ್ಮನ್ನು ಎದುರುಗೊಂಡು ನಮಗೆ, ‘ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹೋಗಿ’ ಯೆಹೋವನ ಹೆಸರಿನಲ್ಲಿ ಅವನಿಗೆ, ‘ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಕಳುಹಿಸುವುದೇನು? ಇಸ್ರಾಯೇಲರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದ ಇಳಿಯದೆ ಸಾಯಲೇ ಬೇಕು’ ಎಂಬುದಾಗಿ ಹೇಳಿರಿ ಎಂದು ಆಜ್ಞಾಪಿಸಿದನು” ಎಂದು ಉತ್ತರ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅದಕ್ಕೆ ಅವರು, “ಒಬ್ಬ ವ್ಯಕ್ತಿ ನಮ್ಮನ್ನು ಎದುರುಗೊಂಡು, “ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹಿಂದಿರುಗಿರಿ. ಸರ್ವೇಶ್ವರನ ಹೆಸರಿನಲ್ಲಿ ಅವನಿಗೆ ಹೀಗೆಂದು ಹೇಳಿರಿ: ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವ ಅಗತ್ಯವಾದರೂ ಏನು? ಇಸ್ರಯೇಲರಲ್ಲಿ ದೇವರಿಲ್ಲವೆ? ಹೀಗೆ ಮಾಡಿದ್ದರಿಂದ ನೀವು ಹಿಡಿದ ಹಾಸಿಗೆಯಿಂದ ಏಳದೆ ಸಾಯಲೇಬೇಕು ಎಂಬುದಾಗಿ ಹೇಳಿರಿ’ ಎಂದು ಆಜ್ಞಾಪಿಸಿದನು,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅದಕ್ಕೆ ಅವರು - ಒಬ್ಬ ಮನುಷ್ಯನು ನಮ್ಮನ್ನು ಎದುರುಗೊಂಡು ನಮಗೆ - ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹೋಗಿ ಯೆಹೋವನ ಹೆಸರಿನಲ್ಲಿ ಅವನಿಗೆ - ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸಿಸುವದಕ್ಕೆ ಕಳುಹಿಸುವದೇನು? ಇಸ್ರಾಯೇಲ್ಯರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದಿಳಿಯದೆ ಸಾಯಲೇಬೇಕು ಎಂಬದಾಗಿ ಹೇಳಿರಿ ಎಂದು ಆಜ್ಞಾಪಿಸಿದನು ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅವರು ಅರಸನಿಗೆ, “ಒಬ್ಬ ಮನುಷ್ಯನು ನಮಗೆ ಎದುರಾಗಿ ಬಂದು, ‘ನೀವು ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹಿಂದಿರುಗಿ ಹೋಗಿ, ಯೆಹೋವ ದೇವರು ಹೇಳುವುದು ಏನೆಂದರೆ: ಇಸ್ರಾಯೇಲಿನಲ್ಲಿ ದೇವರು ಇಲ್ಲವೆ? ನೀನು ಎಕ್ರೋನಿನ ದೇವರಾದ ಬಾಳ್ ಜೆಬೂಬನನ್ನು ವಿಚಾರಿಸಲು ಜನರನ್ನು ಕಳುಹಿಸಿರುತ್ತೀ? ಇದರ ನಿಮಿತ್ತ, ನೀನು ಏರಿದ ಮಂಚದಿಂದ ಇಳಿಯದೆ, ನಿಶ್ಚಯವಾಗಿ ಸಾಯುವೆ,’ ಎಂಬುದಾಗಿ ಅವನಿಗೆ ಹೇಳಿರಿ, ಎಂದು ತಿಳಿಸಿದನು,” ಎಂದರು. ಅಧ್ಯಾಯವನ್ನು ನೋಡಿ |