2 ಅರಸುಗಳು 1:9 - ಪರಿಶುದ್ದ ಬೈಬಲ್9 ಅಹಜ್ಯನು ಎಲೀಯನ ಬಳಿಗೆ ಒಬ್ಬ ಸೇನಾಧಿಪತಿಯನ್ನು ಮತ್ತು ಐವತ್ತು ಮಂದಿ ಜನರನ್ನು ಕಳುಹಿಸಿದನು. ಸೇನಾಧಿಪತಿಯು ಎಲೀಯನ ಬಳಿಗೆ ಹೋದನು. ಆ ಸಮಯದಲ್ಲಿ ಎಲೀಯನು ಬೆಟ್ಟದ ತುದಿಯಲ್ಲಿ ಕುಳಿತಿದ್ದನು. ಆ ಸೇನಾಧಿಪತಿಯು ಎಲೀಯನಿಗೆ, “ದೇವಮನುಷ್ಯನೇ, ರಾಜನು ಹೇಳುತ್ತಾನೆ, ‘ಕೆಳಗಿಳಿದು ಬಾ’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆಗ ಅರಸನು ಎಲೀಯನನ್ನು ಕರೆತರುವುದಕ್ಕಾಗಿ ಪಂಚದಶಾಧಿಪತಿಯನ್ನು, ಅವನ ಐವತ್ತು ಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಹೋಗಿ ಎಲೀಯನು ಬೆಟ್ಟದ ತುದಿಯಲ್ಲಿ ಕುಳಿತಿರುವುದನ್ನು ಕಂಡು ಅವನಿಗೆ, “ದೇವರ ಮನುಷ್ಯನೇ ಇಳಿದು ಬಾ ಅರಸನು ನಿನ್ನನ್ನು ಕರೆಯುತ್ತಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಬಳಿಕ ಅರಸನು ಎಲೀಯನನ್ನು ಕರೆದುತರುವುದಕ್ಕಾಗಿ ಒಬ್ಬ ಪಂಚಾಶದಧಿಪತಿಯನ್ನು ಅವನ ಐವತ್ತುಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಬಂದು ಎಲೀಯನು ಬೆಟ್ಟದ ತುದಿಯಲ್ಲಿ ಕುಳಿತಿರುವುದನ್ನು ಕಂಡನು. “ದೈವಪುರುಷರೇ, ಇಳಿದು ಬನ್ನಿ, ಅರಸರು ತಮ್ಮನ್ನು ಕರೆಯುತ್ತಿದ್ದಾರೆ,” ಎಂದು ಆಮಂತ್ರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆಗ ಅರಸನು ಎಲೀಯನನ್ನು ಕರತರುವದಕ್ಕಾಗಿ ಪಂಚದಶಾಧಿಪತಿಯನ್ನು ಅವನ ಐವತ್ತು ಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಹೋಗಿ ಎಲೀಯನು ಬೆಟ್ಟದ ತುದಿಯಲ್ಲಿ ಕೂತಿರುವದನ್ನು ಕಂಡು ಅವನಿಗೆ - ದೇವರ ಮನುಷ್ಯನೇ ಇಳಿದು ಬಾ; ಅರಸನು ನಿನ್ನನ್ನು ಕರೆಯುತ್ತಾನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ಅರಸನು ಒಬ್ಬ ಪ್ರಧಾನನನ್ನು, ಅವನ ಐವತ್ತು ಮಂದಿ ಸಿಪಾಯಿಗಳೊಡನೆ ಎಲೀಯನ ಬಳಿಗೆ ಕಳುಹಿಸಿದನು. ಪ್ರಧಾನನು ಅವನ ಬಳಿಗೆ ಹೋದಾಗ, ಇಗೋ, ಎಲೀಯನು ಬೆಟ್ಟದ ತುದಿಯಲ್ಲಿ ಕುಳಿತಿದ್ದನು. ಆಗ ಅವನು ಎಲೀಯನಿಗೆ, “ದೇವರ ಮನುಷ್ಯನೇ, ‘ಇಳಿದು ಬಾ,’ ಎಂದು ಅರಸನು ಹೇಳುತ್ತಾನೆ,” ಎಂದನು. ಅಧ್ಯಾಯವನ್ನು ನೋಡಿ |
ರಾಜನಾದ ಅಹಾಬನು, “ಬೇರೊಬ್ಬ ಪ್ರವಾದಿಯು ಇಲ್ಲಿದ್ದಾನೆ. ಅವನು ಇಮ್ಲನ ಮಗನಾದ ಮೀಕಾಯೆಹು ಎಂಬ ಹೆಸರಿನವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ. ಯೆಹೋವನ ಪ್ರತಿನಿಧಿಯಾಗಿ ಅವನು ಮಾತನಾಡುವಾಗ ಅವನೆಂದೂ ನನಗೆ ಒಳ್ಳೆಯವುಗಳನ್ನು ಪ್ರವಾದಿಸುವುದಿಲ್ಲ. ಅವನು ಯಾವಾಗಲೂ ನನಗೆ ಕೆಟ್ಟವುಗಳನ್ನೇ ಪ್ರವಾದಿಸುತ್ತಾನೆ” ಎಂದು ಉತ್ತರಿಸಿದನು. ಯೆಹೋಷಾಫಾಟನು, “ರಾಜನಾದ ಅಹಾಬನೇ, ನೀನು ಆ ಸಂಗತಿಗಳನ್ನು ಹೇಳಲೇಬಾರದು!” ಎಂದು ಹೇಳಿದನು.
ಒಂದು ಕಾಲದಲ್ಲಿ ಈಜೆಬೆಲಳು ಯೆಹೋವನ ಪ್ರವಾದಿಗಳನ್ನೆಲ್ಲ ಕೊಲ್ಲುತ್ತಿದ್ದಳು. ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ಕರೆದೊಯ್ದು, ಅವರನ್ನು ಗುಹೆಗಳಲ್ಲಿ ಅಡಗಿಸಿಟ್ಟನು. ಓಬದ್ಯನು ಐವತ್ತು ಮಂದಿ ಪ್ರವಾದಿಗಳನ್ನು ಒಂದು ಗುಹೆಯಲ್ಲಿಯೂ ಉಳಿದ ಐವತ್ತು ಮಂದಿ ಪ್ರವಾದಿಗಳನ್ನು ಮತ್ತೊಂದು ಗುಹೆಯಲ್ಲಿಯೂ ಇಟ್ಟನು. ಓಬದ್ಯನು ಅವರಿಗೆ ಆಹಾರವನ್ನೂ ನೀರನ್ನೂ ಒದಗಿಸುತ್ತಿದ್ದನು.)