Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:12 - ಪರಿಶುದ್ದ ಬೈಬಲ್‌

12 ಯೇಹು ಇಜ್ರೇಲನ್ನು ಬಿಟ್ಟು ಸಮಾರ್ಯಕ್ಕೆ ಹೋದನು. ಯೇಹುವು ದಾರಿಯಲ್ಲಿ ಕುರುಬರ ಪಾಳ್ಯವೆಂದು ಕರೆಯುವ ಸ್ಥಳದಲ್ಲಿ ತಂಗಿದನು. ಅವನು ಬೆತ್‌ಎಕೇಡ್‌ನ ರಸ್ತೆಯಲ್ಲಿ, ಕುರುಬರು ಕುರಿಗಳಿಂದ ತುಪ್ಪಟವನ್ನು ಕತ್ತರಿಸುವ ಒಂದು ಮನೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಂತರ ಯೇಹುವು ಸಮಾರ್ಯಕ್ಕೆ ಹೊರಟು ಹೋದನು. ಅವನು ದಾರಿಯಲ್ಲಿ ಕುರುಬರು ಉಣ್ಣೆಕತ್ತರಿಸುವ ಮನೆಯ ಬಳಿಗೆ ಬಂದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆಮೇಲೆ ಯೇಹುವು ಸಮಾರಿಯಕ್ಕೆ ಹೊರಟುಹೋದನು. ದಾರಿಯಲ್ಲಿ ಕುರುಬರ ಛತ್ರಕ್ಕೆ ಬಂದಾಗ ಯೆಹೂದ್ಯರ ಅರಸನಾದ ಅಹಜ್ಯನ ಸಹೋದರರನ್ನು ಕಂಡು, “ನೀವು ಯಾರು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಮೇಲೆ ಯೇಹುವು ಸಮಾರ್ಯಕ್ಕೆ ಹೊರಟು ಹೋದನು. ಅವನು ದಾರಿಯಲ್ಲಿ ಕುರುಬರ ಛತ್ರಕ್ಕೆ ಬಂದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಯೇಹುವು ಹೊರಟು ಸಮಾರ್ಯಕ್ಕೆ ಬಂದನು. ಅವನು ಕುರುಬರ ಬೇತ್ ಎಕೆದ್ ಬಳಿ ಬಂದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:12
4 ತಿಳಿವುಗಳ ಹೋಲಿಕೆ  

ಇಜ್ರೇಲಿನಲ್ಲಿ ವಾಸಿಸುತ್ತಿದ್ದ ಅಹಾಬನ ಕುಟುಂಬದ ಉಳಿದವರನ್ನೆಲ್ಲ ಯೇಹು ಕೊಂದುಹಾಕಿದನು. ಅಹಾಬನ ಆಪ್ತಮಿತ್ರರು, ಯಾಜಕರು ಮತ್ತು ಪ್ರಮುಖರನ್ನೆಲ್ಲ ಯೇಹುವು ಕೊಂದುಹಾಕಿದನು. ಅಹಾಬನ ಜನರಲ್ಲಿ ಯಾರನ್ನೂ ಉಳಿಸಲಿಲ್ಲ.


ಯೇಹು ಯೆಹೂದದ ರಾಜನಾದ ಅಹಜ್ಯನ ಬಂಧುಗಳನ್ನು ಭೇಟಿಮಾಡಿ ಅವರಿಗೆ, “ನೀವು ಯಾರು?” ಎಂದು ಕೇಳಿದನು. ಅವರು, “ನಾವು ಯೆಹೂದದ ರಾಜನಾದ ಅಹಜ್ಯನ ಬಂಧುಗಳು. ನಾವು ರಾಜನ ಮಕ್ಕಳನ್ನು ಮತ್ತು ರಾಜಮಾತೆಯ ಮಕ್ಕಳನ್ನು ನೋಡಲು ಬಂದಿದ್ದೇವೆ” ಎಂದರು.


ಆಗ ಯೇಹುವು ತನ್ನ ಜನರಿಗೆ, “ಅವರನ್ನು ಜೀವಸಹಿತ ಹಿಡಿದು ತನ್ನಿ!” ಎಂದು ಹೇಳಿದನು. ಯೇಹುವಿನ ಜನರು ಅಹಜ್ಯನ ಬಂಧುಗಳನ್ನು ಜೀವಸಹಿತ ಹಿಡಿದು ತಂದರು. ಅಲ್ಲಿ ನಲವತ್ತೆರಡು ಮಂದಿ ಜನರಿದ್ದರು. ಯೇಹು ಬೆತ್‌ಎಕೇಡ್‌ನ ಬಾವಿಯ ಹತ್ತಿರ ಅವರನ್ನು ಕೊಂದುಹಾಕಿದನು. ಯೇಹುವು ಯಾರನ್ನೂ ಜೀವಸಹಿತ ಉಳಿಸಲಿಲ್ಲ.


ಯೇಹುವು ಅಹಾಬನ ವಂಶದವರನ್ನು ಹತಿಸುತ್ತಿದ್ದಾಗ ಯೆಹೂದದ ರಾಜನಾದ ಅಹಜ್ಯನ ಕುಟುಂಬದವರನ್ನೂ ಯೆಹೂದದ ಮುಖಂಡರನ್ನೂ ಅಲ್ಲಿ ಕಂಡನು. ಯೇಹು ಆ ಮುಖಂಡರನ್ನೂ ಅಹಜ್ಯನ ಕುಟುಂಬದವರನ್ನೂ ಕೊಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು