Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:13 - ಪರಿಶುದ್ದ ಬೈಬಲ್‌

13 ಯೇಹು ಯೆಹೂದದ ರಾಜನಾದ ಅಹಜ್ಯನ ಬಂಧುಗಳನ್ನು ಭೇಟಿಮಾಡಿ ಅವರಿಗೆ, “ನೀವು ಯಾರು?” ಎಂದು ಕೇಳಿದನು. ಅವರು, “ನಾವು ಯೆಹೂದದ ರಾಜನಾದ ಅಹಜ್ಯನ ಬಂಧುಗಳು. ನಾವು ರಾಜನ ಮಕ್ಕಳನ್ನು ಮತ್ತು ರಾಜಮಾತೆಯ ಮಕ್ಕಳನ್ನು ನೋಡಲು ಬಂದಿದ್ದೇವೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೇಹುವು ಯೆಹೂದ್ಯರ ಅರಸನಾದ ಅಹಜ್ಯನ ಸಹೋದರರನ್ನು ಕಂಡು ಅವರಿಗೆ, “ನೀವು ಯಾರು?” ಎಂದು ಕೇಳಿದನು. ಅದಕ್ಕೆ ಅವರು, “ನಾವು ಅಹಜ್ಯನ ಸಹೋದರರು. ರಾಜಪುತ್ರರನ್ನೂ, ರಾಜಮಾತೆಯ ಮಕ್ಕಳನ್ನೂ ವಂದಿಸುವುದಕ್ಕೋಸ್ಕರ ಇಲ್ಲಿಗೆ ಬಂದಿದ್ದೇವೆ” ಎಂದು ಉತ್ತರ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅದಕ್ಕೆ ಅವರು, “ನಾವು ಅಹಜ್ಯನ ಸಹೋದರರು; ರಾಜಪುತ್ರರನ್ನೂ ರಾಜಮಾತೆಯ ಮಕ್ಕಳನ್ನೂ ವಂದಿಸುವುದಕ್ಕಾಗಿ ಇಲ್ಲಿಗೆ ಬಂದಿದ್ದೇವೆ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೂದ್ಯರ ಅರಸನಾದ ಅಹಜ್ಯನ ಸಹೋದರರನ್ನು ಕಂಡು ಅವರನ್ನು - ನೀವು ಯಾರು ಎಂದು ಕೇಳಿದನು. ಅದಕ್ಕೆ ಅವರು - ನಾವು ಅಹಜ್ಯನ ಸಹೋದರರು; ರಾಜಪುತ್ರರನ್ನೂ ರಾಜಮಾತೆಯ ಮಕ್ಕಳನ್ನೂ ವಂದಿಸುವದಕ್ಕೋಸ್ಕರ ಇಲ್ಲಿಗೆ ಬಂದಿದ್ದೇವೆ ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೆಹೂದದ ಅರಸನಾದ ಅಹಜ್ಯನ ಸಹೋದರರನ್ನು ಕಂಡು ಅವರಿಗೆ, “ನೀವು ಯಾರು?” ಎಂದನು. ಅದಕ್ಕವರು, “ನಾವು ಅಹಜ್ಯನ ಸಹೋದರರು. ಅರಸನ ಮಕ್ಕಳನ್ನೂ, ರಾಣಿಯ ಮಕ್ಕಳನ್ನೂ ವಂದಿಸಲು ಹೋಗುತ್ತಿದ್ದೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:13
8 ತಿಳಿವುಗಳ ಹೋಲಿಕೆ  

ರಾಜ ಯೋರಾಮನು ಹಜಾಯೇಲನ ವಿರುದ್ಧವಾಗಿ ಹೋರಾಡಿದಾಗ ರಾಮಾದಲ್ಲಿ ಅರಾಮ್ಯದಿಂದ ತನಗಾದ ಗಾಯಗಳನ್ನು ಗುಣಪಡಿಸಿಕೊಳ್ಳಲು ಇಸ್ರೇಲಿನ ರಾಜನು ಇಜ್ರೇಲ್ ಎಂಬ ಪಟ್ಟಣಕ್ಕೆ ಹಿಂತಿರುಗಿದನು. ಯೆಹೂದದ ರಾಜನೂ ಯೆಹೋರಾಮನ ಮಗನೂ ಆದ ಅಹಜ್ಯನು, ಅಹಾಬನ ಮಗನಾದ ಯೋರಾಮನನ್ನು ನೋಡಲು ಇಜ್ರೇಲಿಗೆ ಹೋದನು. ಯಾಕೆಂದರೆ ಅವನಿಗೆ ಕಾಯಿಲೆಯಾಗಿತ್ತು.


ಯೆಹೋರಾಮನು ಸತ್ತುಹೋದನು. ಅವನನ್ನು ದಾವೀದನಗರದಲ್ಲಿ ಅವನ ಪೂರ್ವಿಕರ ಬಳಿ ಸಮಾಧಿ ಮಾಡಿದರು. ಯೆಹೋರಾಮನ ಮಗನಾದ ಅಹಜ್ಯನು ನೂತನ ರಾಜನಾದನು.


ಅವರು ಬಂದು ಯೆಹೂದದೇಶದ ಮೇಲೆ ಆಕ್ರಮಣ ಮಾಡಿದರು; ರಾಜನಿವಾಸದಲ್ಲಿದ್ದ ನಿಕ್ಷೇಪವನ್ನೆಲ್ಲಾ ಸೂರೆಮಾಡಿದರು. ಅಲ್ಲದೆ ಯೆಹೋರಾಮನ ಪತ್ನಿ, ಮಕ್ಕಳನ್ನೂ ಕೊಂಡೊಯ್ದರು. ಯೆಹೋರಾಮನ ಕೊನೆಯ ಮಗನು ಮಾತ್ರ ಉಳಿದನು. ಅವನ ಹೆಸರು ಯೆಹೋವಾಹಾಜ.


ಯೇಹು ಇಜ್ರೇಲನ್ನು ಬಿಟ್ಟು ಸಮಾರ್ಯಕ್ಕೆ ಹೋದನು. ಯೇಹುವು ದಾರಿಯಲ್ಲಿ ಕುರುಬರ ಪಾಳ್ಯವೆಂದು ಕರೆಯುವ ಸ್ಥಳದಲ್ಲಿ ತಂಗಿದನು. ಅವನು ಬೆತ್‌ಎಕೇಡ್‌ನ ರಸ್ತೆಯಲ್ಲಿ, ಕುರುಬರು ಕುರಿಗಳಿಂದ ತುಪ್ಪಟವನ್ನು ಕತ್ತರಿಸುವ ಒಂದು ಮನೆಗೆ ಹೋದನು.


ಆಗ ಯೇಹುವು ತನ್ನ ಜನರಿಗೆ, “ಅವರನ್ನು ಜೀವಸಹಿತ ಹಿಡಿದು ತನ್ನಿ!” ಎಂದು ಹೇಳಿದನು. ಯೇಹುವಿನ ಜನರು ಅಹಜ್ಯನ ಬಂಧುಗಳನ್ನು ಜೀವಸಹಿತ ಹಿಡಿದು ತಂದರು. ಅಲ್ಲಿ ನಲವತ್ತೆರಡು ಮಂದಿ ಜನರಿದ್ದರು. ಯೇಹು ಬೆತ್‌ಎಕೇಡ್‌ನ ಬಾವಿಯ ಹತ್ತಿರ ಅವರನ್ನು ಕೊಂದುಹಾಕಿದನು. ಯೇಹುವು ಯಾರನ್ನೂ ಜೀವಸಹಿತ ಉಳಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು