2 ಅರಸುಗಳು 10:14 - ಪರಿಶುದ್ದ ಬೈಬಲ್14 ಆಗ ಯೇಹುವು ತನ್ನ ಜನರಿಗೆ, “ಅವರನ್ನು ಜೀವಸಹಿತ ಹಿಡಿದು ತನ್ನಿ!” ಎಂದು ಹೇಳಿದನು. ಯೇಹುವಿನ ಜನರು ಅಹಜ್ಯನ ಬಂಧುಗಳನ್ನು ಜೀವಸಹಿತ ಹಿಡಿದು ತಂದರು. ಅಲ್ಲಿ ನಲವತ್ತೆರಡು ಮಂದಿ ಜನರಿದ್ದರು. ಯೇಹು ಬೆತ್‌ಎಕೇಡ್‌ನ ಬಾವಿಯ ಹತ್ತಿರ ಅವರನ್ನು ಕೊಂದುಹಾಕಿದನು. ಯೇಹುವು ಯಾರನ್ನೂ ಜೀವಸಹಿತ ಉಳಿಸಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಗ ಯೇಹುವು ತನ್ನ ಸೇವಕರಿಗೆ, “ಅವರನ್ನು ಜೀವಸಹಿತ ಹಿಡಿಯಿರಿ” ಎಂದು ಆಜ್ಞಾಪಿಸಿದನು. ಅವರು ಅವರನ್ನು ಹಿಡಿದು ಕೊಂದು, ಉಣ್ಣೆ ಕತ್ತರಿಸುವ ಮನೆಯ ಬಾವಿಯಲ್ಲಿ ಹಾಕಿಬಿಟ್ಟರು. ಅವರು ನಲ್ವತ್ತೆರಡು ಮಂದಿ ಇದ್ದರು. ಅವರಲ್ಲಿ ಒಬ್ಬನನ್ನೂ ತಪ್ಪಿಸಿಕೊಳ್ಳಲು ಬಿಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆಗ ಯೇಹುವು ತನ್ನ ಸೇವಕರಿಗೆ, “ಅವರನ್ನು ಸಜೀವಿಗಳಾಗಿ ಹಿಡಿಯಿರಿ,” ಎಂದು ಆಜ್ಞಾಪಿಸಿದನು. ಅವರು ಅವರನ್ನು ಹಿಡಿದು ವಧಿಸಿ ಆ ಛತ್ರದ ಬಾವಿಯಲ್ಲಿ ಹಾಕಿದರು. ಅವರು ನಾಲ್ವತ್ತೆರಡು ಮಂದಿಯಿದ್ದರು; ಅವರಲ್ಲಿ ಒಬ್ಬನನ್ನೂ ಬಿಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆಗ ಯೇಹುವು ತನ್ನ ಸೇವಕರಿಗೆ - ಅವರನ್ನು ಸಜೀವಿಗಳಾಗಿ ಹಿಡಿಯಿರಿ ಎಂದು ಆಜ್ಞಾಪಿಸಿದನು. ಅವರು ಅವರನ್ನು ಹಿಡಿದು ವಧಿಸಿ ಆ ಛತ್ರದ ಬಾವಿಯಲ್ಲಿ ಹಾಕಿದರು. ಅವರು ನಾಲ್ವತ್ತೆರಡು ಮಂದಿಯಿದ್ದರು; ಅವರಲ್ಲಿ ಒಬ್ಬನನ್ನೂ ಬಿಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಅವನು, “ಅವರನ್ನು ಜೀವದಿಂದ ಹಿಡಿಯಿರಿ,” ಎಂದು ಹೇಳಿದ್ದರಿಂದ ಕುರುಬರು ಇವರನ್ನು ಜೀವದಿಂದ ಹಿಡಿದು, ಉಣ್ಣೆ ಕತ್ತರಿಸುವ ಮನೆಯ ಬಾವಿಯ ಬಳಿಯಲ್ಲಿ ಕೊಂದುಹಾಕಿದರು. ಅವರು ನಲವತ್ತೆರಡು ಮಂದಿ ಇದ್ದರು. ಅವರಲ್ಲಿ ಒಬ್ಬನನ್ನಾದರೂ ಉಳಿಸಲಿಲ್ಲ. ಅಧ್ಯಾಯವನ್ನು ನೋಡಿ |
ಯೇಹುವು ಅಲ್ಲಿಂದ ಹೋದ ಮೇಲೆ, ರೇಕಾಬನ ಮಗನಾದ ಯೆಹೋನಾದಾಬನನ್ನು ಸಂಧಿಸಿದನು. ಯೆಹೋನಾದಾಬನು ಯೇಹುವನ್ನು ಸಂಧಿಸಲು ಬರುತ್ತಿದ್ದನು. ಯೇಹು ಯೆಹೋನಾದಾಬನನ್ನು ಅಭಿನಂದಿಸಿ ಅವನಿಗೆ, “ನಾನು ನಿನಗೆ ನಂಬಿಗಸ್ತನಾಗಿರುವಂತೆ ನೀನು ನನಗೆ ನಂಬಿಗಸ್ಥನಾದ ಸ್ನೇಹಿತನಾಗಿರುವಿಯಾ?” ಎಂದು ಕೇಳಿದನು. ಯೆಹೋನಾದಾಬನು, “ಹೌದು, ನಾನು ನಿನಗೆ ನಂಬಿಗಸ್ಥನಾದ ಸ್ನೇಹಿತನು” ಎಂದು ಉತ್ತರಿಸಿದನು. ಯೇಹು, “ನೀನು ನಂಬಿಗಸ್ಥನಾದರೆ, ನಿನ್ನ ಕೈಯನ್ನು ಕೊಡು” ಎಂದನು. ನಂತರ ಯೇಹು ಹೊರಬಂದು, ಯೆಹೋನಾದಾಬನನ್ನು ರಥದೊಳಕ್ಕೆ ಎಳೆದುಕೊಂಡನು.