2 ಅರಸುಗಳು 10:15 - ಪರಿಶುದ್ದ ಬೈಬಲ್15 ಯೇಹುವು ಅಲ್ಲಿಂದ ಹೋದ ಮೇಲೆ, ರೇಕಾಬನ ಮಗನಾದ ಯೆಹೋನಾದಾಬನನ್ನು ಸಂಧಿಸಿದನು. ಯೆಹೋನಾದಾಬನು ಯೇಹುವನ್ನು ಸಂಧಿಸಲು ಬರುತ್ತಿದ್ದನು. ಯೇಹು ಯೆಹೋನಾದಾಬನನ್ನು ಅಭಿನಂದಿಸಿ ಅವನಿಗೆ, “ನಾನು ನಿನಗೆ ನಂಬಿಗಸ್ತನಾಗಿರುವಂತೆ ನೀನು ನನಗೆ ನಂಬಿಗಸ್ಥನಾದ ಸ್ನೇಹಿತನಾಗಿರುವಿಯಾ?” ಎಂದು ಕೇಳಿದನು. ಯೆಹೋನಾದಾಬನು, “ಹೌದು, ನಾನು ನಿನಗೆ ನಂಬಿಗಸ್ಥನಾದ ಸ್ನೇಹಿತನು” ಎಂದು ಉತ್ತರಿಸಿದನು. ಯೇಹು, “ನೀನು ನಂಬಿಗಸ್ಥನಾದರೆ, ನಿನ್ನ ಕೈಯನ್ನು ಕೊಡು” ಎಂದನು. ನಂತರ ಯೇಹು ಹೊರಬಂದು, ಯೆಹೋನಾದಾಬನನ್ನು ರಥದೊಳಕ್ಕೆ ಎಳೆದುಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯೇಹುವು ಅಲ್ಲಿಂದ ಮುಂದೆ ಹೋಗುತ್ತಿರುವಾಗ, ತನ್ನನ್ನು ಎದುರುಗೊಳ್ಳುವುದಕ್ಕಾಗಿ ಬಂದ ರೇಕಾಬನ ಮಗನಾದ ಯೆಹೋನಾದಾಬನನ್ನು ಕಂಡು ವಂದಿಸಿ, “ನಿನ್ನ ವಿಷಯದಲ್ಲಿ, ನನ್ನ ಹೃದಯವು ಯಥಾರ್ಥವಾಗಿರುವಂತೆ ನಿನ್ನ ಹೃದಯವು ಯಥಾರ್ಥವಾಗಿರುವುದೋ?” ಎಂದು ಕೇಳಿದನು. ಅವನು, “ಹೌದು” ಎಂದು ಉತ್ತರ ಕೊಟ್ಟನು. ಆಗ ಯೇಹುವು, “ಹಾಗಾದರೆ ನಿನ್ನ ಕೈಯನ್ನು ಕೊಡು” ಎನ್ನಲು ಅವನು ತನ್ನ ಕೈಯನ್ನು ಕೊಟ್ಟನು. ಯೇಹುವು ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಯೇಹುವು ಅಲ್ಲಿಂದ ಮುಂದೆ ಹೋಗುತ್ತಿರುವಾಗ ತನ್ನನ್ನು ಎದುರುಗೊಳ್ಳುವುದಕ್ಕಾಗಿ ಬಂದ ರೇಕಾಬನ ಮಗನಾದ ಯೆಹೋನಾದಾಬನನ್ನು ಕಂಡು ವಂದಿಸಿದನು. “ನಿನ್ನ ವಿಷಯದಲ್ಲಿ ನನ್ನ ಮನಸ್ಸು ಯಥಾರ್ಥವಾಗಿರುವಂತೆ ನಿನ್ನ ಮನಸ್ಸು ಯಥಾರ್ಥವಾಗಿ ಇರುತ್ತದೋ?’ ಎಂದು ಕೇಳಿದನು. ಅವನು, “ಹೌದು,” ಎಂದು ಉತ್ತರಕೊಟ್ಟನು. ಆಗ ಯೇಹುವು, “ಹಾಗಾದರೆ ನಿನ್ನ ಕೈಕೊಡು,” ಎನ್ನಲು ಅವನು ಕೈಕೊಟ್ಟನು. ಯೇಹುವು ಅವನನ್ನು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅವನು ಅಲ್ಲಿಂದ ಮುಂದೆ ಹೋಗುತ್ತಿರುವಾಗ ತನ್ನನ್ನು ಎದುರುಗೊಳ್ಳುವದಕ್ಕಾಗಿ ಬಂದ ರೇಕಾಬನ ಮಗನಾದ ಯೆಹೋನಾದಾಬನನ್ನು ಕಂಡು ವಂದಿಸಿ - ನಿನ್ನ ವಿಷಯದಲ್ಲಿ ನನ್ನ ಮನಸ್ಸು ಯಥಾರ್ಥವಾಗಿರುವಂತೆ ನಿನ್ನ ಮನಸ್ಸೂ ಯಥಾರ್ಥವಾಗಿರುತ್ತದೋ ಎಂದು ಕೇಳಿದನು. ಅವನು - ಹೌದು ಎಂದು ಉತ್ತರಕೊಟ್ಟನು. ಆಗ ಯೇಹುವು - ಹಾಗಾದರೆ ನಿನ್ನ ಕೈಕೊಡು ಅನ್ನಲು ಅವನು ಕೈಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಯೇಹುವು ಅಲ್ಲಿಂದ ಹೋಗಿ, ತನ್ನನ್ನು ಎದುರುಗೊಳ್ಳಲು ಬಂದ ರೇಕಾಬನ ಮಗ ಯೆಹೋನಾದಾಬನನ್ನು ಕಂಡು ಅವನನ್ನು ವಂದಿಸಿ ಅವನಿಗೆ, “ನನ್ನ ಹೃದಯವು ನಿನ್ನ ಹೃದಯದ ಸಂಗಡ ಇರುವ ಹಾಗೆ ನಿನ್ನ ಹೃದಯವು ಯಥಾರ್ಥವಾಗಿ ಇದೆಯೋ?” ಎಂದನು. ಯೆಹೋನಾದಾಬನು, “ಇದೆ,” ಎಂದನು. “ಹಾಗಾದರೆ ನಿನ್ನ ಕೈ ಕೊಡು,” ಎಂದನು. ಇವನು ತನ್ನ ಕೈ ಕೊಟ್ಟನು. ತನ್ನ ಬಳಿಗೆ ರಥದ ಮೇಲೆ ಹತ್ತಿಸಿಕೊಂಡು ಅವನಿಗೆ, ಅಧ್ಯಾಯವನ್ನು ನೋಡಿ |
ರಾಜನಾದ ಅಹಾಬನು ತಾನು ಬೆನ್ಹದದನನ್ನು ಕೊಲ್ಲುವುದಿಲ್ಲವೆಂಬುದನ್ನು ಯಾವುದಾದರೂ ಸೂಚನೆಯ ಮೂಲಕ ತಿಳಿಸಬಹುದೆಂದು ಬೆನ್ಹದದನ ಜನರು ಅಪೇಕ್ಷೆಪಟ್ಟಿದ್ದರು. ಅಹಾಬನು ಬೆನ್ಹದದನನ್ನು ತನ್ನ ಸೋದರನೆಂದು ಕರೆದಾಗ, ಸಲಹೆಗಾರರು ತ್ವರಿತವಾಗಿ, “ಹೌದು! ಬೆನ್ಹದದನು ನಿನ್ನ ಸೋದರನೇ” ಎಂದರು. ಅಹಾಬನು, “ಅವನನ್ನು ನನ್ನ ಬಳಿಗೆ ಕರೆತನ್ನಿ” ಎಂದನು. ಬೆನ್ಹದದನು ರಾಜನಾದ ಅಹಾಬನ ಬಳಿಗೆ ಬಂದನು. ರಾಜನಾದ ಅಹಾಬನು ಅವನನ್ನು ತನ್ನೊಡನೆ ರಥದಲ್ಲಿ ಕುಳ್ಳಿರಿಸಿಕೊಂಡನು.