Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:22 - ಪರಿಶುದ್ದ ಬೈಬಲ್‌

22 ಯೇಹು ನಿಲುವಂಗಿಗಳ ಮೇಲ್ವಿಚಾರಕನಿಗೆ, “ಬಾಳನ ಭಕ್ತರಿಗೆಲ್ಲ ನಿಲುವಂಗಿಗಳನ್ನು ತಂದುಕೊಡು” ಎಂದು ಹೇಳಿದನು. ಅವನು ಬಾಳನ ಭಕ್ತರಿಗೆ ನಿಲುವಂಗಿಗಳನ್ನು ತಂದುಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೇಹುವು ವಸ್ತ್ರಗಾರದ ಅಧಿಪತಿಗೆ, “ಬಾಳ್ ದೇವತೆಯನ್ನು ಸೇವಿಸುವ ಭಕ್ತರೆಲ್ಲರಿಗೂ ಬಟ್ಟೆಗಳನ್ನು ಕೊಡು” ಎಂದು ಆಜ್ಞಾಪಿಸಿಲು ಅವನು ತಂದುಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಯೇಹುವು ವಸ್ತ್ರಾಗಾರದ ಅಧಿಪತಿಗೆ, “ಬಾಳ್ ದೇವತೆಯ ಭಕ್ತರೆಲ್ಲರಿಗೂ ಪೂಜಾವಸ್ತ್ರಗಳನ್ನು ಕೊಡು,” ಎಂದು ಆಜ್ಞಾಪಿಸಲು ಅವನು ತಂದುಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೇಹುವು ವಸ್ತ್ರಾಗಾರದ ಅಧಿಪತಿಗೆ - ಬಾಳನ ಭಕ್ತರೆಲ್ಲರಿಗೂ ಬಟ್ಟೆಗಳನ್ನು ಕೊಡು ಎಂದು ಆಜ್ಞಾಪಿಸಲು ಅವನು ತಂದುಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ಅವನು ವಸ್ತ್ರಗಳ ಮನೆಯ ಮೇಲಧಿಕಾರಿಗೆ, “ಬಾಳನನ್ನು ಸೇವಿಸುವ ಸಮಸ್ತರಿಗೋಸ್ಕರ ವಸ್ತ್ರಗಳನ್ನು ತೆಗೆದುಕೊಂಡು ಬಾ,” ಎಂದು ಹೇಳಿದ್ದರಿಂದ, ಅವನು ಅವರಿಗೋಸ್ಕರ ವಸ್ತ್ರಗಳನ್ನು ತೆಗೆದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:22
4 ತಿಳಿವುಗಳ ಹೋಲಿಕೆ  

“ನಿನ್ನ ಅಣ್ಣನಾದ ಆರೋನನಿಗೆ ವಿಶೇಷ ಬಟ್ಟೆಗಳನ್ನು ಮಾಡಿಸು. ಈ ಬಟ್ಟೆಗಳು ಅವನಿಗೆ ಘನತೆಯನ್ನೂ ಗೌರವವನ್ನೂ ನೀಡುತ್ತವೆ.


ಬಳಿಕ ಅವನು ಇಸ್ರೇಲಿನ ಪ್ರದೇಶದಲ್ಲೆಲ್ಲಾ ಒಂದು ಸಂದೇಶವನ್ನು ಕಳುಹಿಸಿದನು. ಬಾಳನ ಆರಾಧಕರೆಲ್ಲರೂ ಬಂದರು. ಮನೆಯಲ್ಲಿ ಯಾರೂ ಉಳಿಯಲಿಲ್ಲ. ಬಾಳನ ಆರಾಧಕರೆಲ್ಲ ಬಾಳನ ಆಲಯಕ್ಕೆ ಬಂದರು. ಜನರಿಂದ ಆಲಯವು ತುಂಬಿಹೋಯಿತು.


ಆಗ ಯೇಹು ಮತ್ತು ರೇಕಾಬನ ಮಗನಾದ ಯೆಹೋನಾದಾಬನು ಬಾಳನ ಆಲಯದೊಳಕ್ಕೆ ಹೋದರು. ಯೇಹು ಬಾಳನ ಭಕ್ತರಿಗೆ, “ಯೆಹೋವನ ಸೇವಕರು ಯಾರೂ ನಿಮ್ಮೊಡನೆ ಇಲ್ಲವೆಂಬುದನ್ನು ಸುತ್ತಲೂ ನೋಡಿ ಖಚಿತಪಡಿಸಿಕೊಳ್ಳಿ. ಬಾಳನ ಭಕ್ತರಾದ ಜನರು ಮಾತ್ರ ಇಲ್ಲಿದ್ದಾರೆಂಬುದನ್ನು ಖಚಿತಪಡಿಸಿಕೊಳ್ಳಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು