2 ಅರಸುಗಳು 10:24 - ಪರಿಶುದ್ದ ಬೈಬಲ್24 ಬಾಳನ ಆರಾಧಕರು ಯಜ್ಞಗಳನ್ನು ಮತ್ತು ಸರ್ವಾಂಗಹೋಮಗಳನ್ನು ಅರ್ಪಿಸಲು ಬಾಳನ ಆಲಯದೊಳಕ್ಕೆ ಹೋದರು. ಆದರೆ ಹೊರಗಡೆ ಯೇಹುವಿನ ಎಂಭತ್ತು ಜನರು ಕಾಯುತ್ತಿದ್ದರು. ಯೇಹು ಅವರಿಗೆ, “ಯಾರೂ ತಪ್ಪಿಸಿಕೊಂಡು ಹೋಗಲು ಬಿಡಬೇಡಿ. ಯಾರಾದರೂ ಒಬ್ಬ ಮನುಷ್ಯನನ್ನು ತಪ್ಪಿಸಿಕೊಂಡು ಹೋಗಲು ಬಿಟ್ಟರೆ, ಅವನು ತನ್ನ ಜೀವವನ್ನು ಬೆಲೆಯಾಗಿ ಕೊಡಬೇಕಾಗುತ್ತದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆಮೇಲೆ ಅವರು ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸುವುದಕ್ಕೆ ಹೋದರು. ಇದಕ್ಕೆ ಮೊದಲೇ ಅವನು ದೇವಸ್ಥಾನದ ಹೊರಗೆ ಎಂಭತ್ತು ಮಂದಿಯನ್ನು ಕಾಯುವುದಕ್ಕಾಗಿ ಇರಿಸಿ ಯೇಹುವು ಅವರಿಗೆ, “ನಾನು ಯಾರನ್ನು ನಿಮ್ಮ ಕೈಗೆ ಸಿಕ್ಕುವ ಹಾಗೆ ಮಾಡುವೆನೋ ಅವರಲ್ಲಿ ಒಬ್ಬನನ್ನೂ ಬಿಡಬೇಡಿರಿ. ಬಿಟ್ಟರೆ ಅವನ ಪ್ರಾಣಕ್ಕೆ ಬದಲಾಗಿ ನಿಮ್ಮ ಪ್ರಾಣವು ಹೋಗುವುದು” ಎಂಬುದಾಗಿ ಆಜ್ಞಾಪಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಆಮೇಲೆ ಅವರು ದಹನಬಲಿ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಹೋದರು. ಇದಕ್ಕೆ ಮೊದಲೇ ಅವನು ದೇವಸ್ಥಾನದ ಹೊರಗೆ ಎಂಬತ್ತು ಮಂದಿಯನ್ನು ಕಾಯುವುದಕ್ಕಾಗಿ ಇರಿಸಿ ಅವರಿಗೆ, “ನಾನು ಯಾರನ್ನು ನಿಮ್ಮ ಕೈಗೆ ಸಿಕ್ಕುವ ಹಾಗೆ ಮಾಡುವೆನೋ ಅವರಲ್ಲಿ ಒಬ್ಬನನ್ನೂ ಬಿಡಬೇಡಿ; ಬಿಟ್ಟರೆ ಅವನ ಪ್ರಾಣಕ್ಕೆ ಬದಲಾಗಿ ನಿಮ್ಮ ಪ್ರಾಣವು ಹೋಗುವುದು,” ಎಂಬುದಾಗಿ ಆಜ್ಞಾಪಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆಮೇಲೆ ಅವರು ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸುವದಕ್ಕೆ ಹೋದರು. ಇದಕ್ಕೆ ಮೊದಲೇ ಅವನು ದೇವಸ್ಥಾನದ ಹೊರಗೆ ಎಂಭತ್ತು ಮಂದಿಯನ್ನು ಕಾಯುವದಕ್ಕಾಗಿ ಇರಿಸಿ ಅವರಿಗೆ - ನಾನು ಯಾರನ್ನು ನಿಮ್ಮ ಕೈಗೆ ಸಿಕ್ಕುವ ಹಾಗೆ ಮಾಡುವೆನೋ ಅವರಲ್ಲಿ ಒಬ್ಬನನ್ನೂ ಬಿಡಬೇಡಿರಿ; ಬಿಟ್ಟರೆ ಅವನ ಪ್ರಾಣಕ್ಕೆ ಬದಲಾಗಿ ನಿಮ್ಮ ಪ್ರಾಣವು ಹೋಗುವದು ಎಂಬದಾಗಿ ಆಜ್ಞಾಪಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಅವರು ಬಲಿಗಳನ್ನೂ, ದಹನಬಲಿಗಳನ್ನೂ ಅರ್ಪಿಸಲು ಒಳಗೆ ಪ್ರವೇಶಿಸಿದ ತರುವಾಯ, ಯೇಹುವು ಹೊರಗೆ ಎಂಬತ್ತು ಮಂದಿಯನ್ನು ಇರಿಸಿಕೊಂಡು ಅವರಿಗೆ, “ನಾನು ನಿಮ್ಮ ಕೈಗೆ ಒಪ್ಪಿಸಿದ ಮನುಷ್ಯರಲ್ಲಿ ಯಾವನಾದರೂ ತಪ್ಪಿಸಿಕೊಂಡುಹೋದರೆ, ಅವನ ಪ್ರಾಣಕ್ಕೆ ನಿಮ್ಮ ಪ್ರಾಣ ಈಡಾಗಿರುವುದು,” ಎಂದನು. ಅಧ್ಯಾಯವನ್ನು ನೋಡಿ |