2 ಅರಸುಗಳು 10:26 - ಪರಿಶುದ್ದ ಬೈಬಲ್26 ಅವರು ಬಾಳನ ಆಲಯದಲ್ಲಿದ್ದ ಸ್ಮಾರಕಸ್ತಂಭಗಳನ್ನು ಹೊರತಂದು, ಆಲಯವನ್ನು ಸುಟ್ಟುಹಾಕಿದರು. ನಂತರ ಅವರು ಬಾಳನ ಸ್ಮಾರಕಸ್ತಂಭಗಳನ್ನು ಚೂರುಚೂರು ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅವರು ಅಲ್ಲಿನ ಬಾಳ್ ದೇವತೆಯ ವಿಗ್ರಹ ಸ್ತಂಭಗಳನ್ನು ತೆಗೆದುಕೊಂಡು ಬಂದು ಸುಟ್ಟುಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಬಾಳ್ ದೇವತೆಯ ದೇವಸ್ಥಾನಕ್ಕೆ ಸೇರಿದ ಕೇರಿಯನ್ನು ಪ್ರವೇಶಿಸಿ ಅಲ್ಲಿನ ವಿಗ್ರಹಸ್ತಂಭಗಳನ್ನು ತೆಗೆದುಕೊಂಡು ಬಂದು ಸುಟ್ಟುಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅಲ್ಲಿನ ವಿಗ್ರಹ ಸ್ತಂಭಗಳನ್ನು ತೆಗೆದುಕೊಂಡು ಬಂದು ಸುಟ್ಟುಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಬಾಳನ ದೇವಸ್ಥಾನದಿಂದ ವಿಗ್ರಹಗಳನ್ನು ತಂದು ಅವುಗಳನ್ನು ಸುಟ್ಟುಬಿಟ್ಟರು. ಅಧ್ಯಾಯವನ್ನು ನೋಡಿ |
ಹಿಜ್ಕೀಯನು ಉನ್ನತಸ್ಥಳಗಳನ್ನು ನಾಶಗೊಳಿಸಿದನು. ಅವನು ಸ್ಮಾರಕಕಲ್ಲುಗಳನ್ನು ಒಡೆದುಹಾಕಿದನು ಮತ್ತು ಅಶೇರ ಕಲ್ಲುಗಳನ್ನು ಕತ್ತರಿಸಿಹಾಕಿದನು. ಆ ಸಮಯದಲ್ಲಿ ಇಸ್ರೇಲರು ಮೋಶೆಯು ಮಾಡಿದ ತಾಮ್ರಸರ್ಪಕ್ಕೆ ಧೂಪವನ್ನು ಸುಡುತ್ತಿದ್ದರು. ಈ ತಾಮ್ರಸರ್ಪವನ್ನು “ನೆಹುಷ್ಟಾನ್” ಎಂದು ಕರೆಯುತ್ತಿದ್ದರು. ಜನರು ಈ ಸರ್ಪವನ್ನು ಆರಾಧಿಸುತ್ತಿದ್ದುದರಿಂದ ಹಿಜ್ಕೀಯನು ಈ ತಾಮ್ರಸರ್ಪವನ್ನು ಒಡೆದು ಚೂರುಚೂರು ಮಾಡಿದನು.
ನಂತರ ರಾಜನು ಪ್ರಧಾನಯಾಜಕನಾದ ಹಿಲ್ಕೀಯನಿಗೆ, ಇತರ ಯಾಜಕರಿಗೆ, ದ್ವಾರಪಾಲಕರಿಗೆ, ಬಾಳ್‌ದೇವರಿಗೂ ಅಶೇರ ದೇವತೆಗೂ ಮತ್ತು ಆಕಾಶದ ನಕ್ಷತ್ರಗಳಿಗೂ ಉಪಯೋಗಿಸುತ್ತಿದ್ದ ಎಲ್ಲಾ ಸಲಕರಣೆಗಳನ್ನು ದೇವಾಲಯದಿಂದ ಹೊರತರುವಂತೆ ಆಜ್ಞಾಪಿಸಿದನು. ಯೋಷೀಯನು ಜೆರುಸಲೇಮಿನ ಹೊರಗೆ ಕಿದ್ರೋನ್ ಹೊಲಗಳಲ್ಲಿ ಅವುಗಳನ್ನು ಸುಟ್ಟುಹಾಕಿದನು. ಅವರು ಬೂದಿಯನ್ನು ಬೇತೇಲಿಗೆ ತೆಗೆದುಕೊಂಡು ಹೋದರು.