2 ಅರಸುಗಳು 10:27 - ಪರಿಶುದ್ದ ಬೈಬಲ್27 ಬಾಳನ ಆಲಯವನ್ನೂ ಅವರು ಹಾಳುಗೆಡವಿದರು. ಅವರು ಬಾಳನ ಆಲಯವನ್ನು ಶೌಚಗೃಹವನ್ನಾಗಿ ಮಾಡಿದರು. ಇಂದೂ ಸಹ ಅದನ್ನು ಶೌಚಗೃಹವಾಗಿ ಬಳಸುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಇದಲ್ಲದೆ, ಬಾಳ್ ದೇವತೆಯ ವಿಗ್ರಹ ಸ್ತಂಭಗಳನ್ನೂ, ದೇವಸ್ಥಾನಗಳನ್ನೂ ಕೆಡವಿ ಹಾಳುಮಾಡಿದರು. ಅಂದಿನಿಂದ ಇಂದಿನವರೆಗೂ ಆ ಸ್ಥಳವನ್ನು ಶೌಚಾಲಯಕ್ಕಾಗಿ ಉಪಯೋಗಿಸುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಇದಲ್ಲದೆ ಬಾಳ್ ದೇವತೆಯ ವಿಗ್ರಹಸ್ತಂಭಗಳನ್ನೂ ದೇವಸ್ಥಾನವನ್ನೂ ಕೆಡವಿ ಹಾಳುಮಾಡಿದರು. ಅಂದಿನಿಂದ ಇಂದಿನವರೆಗೂ ಆ ಸ್ಥಳವನ್ನು ಶೌಚಕ್ಕಾಗಿ ಉಪಯೋಗಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಇದಲ್ಲದೆ ಬಾಳನ ವಿಗ್ರಹಸ್ತಂಭವನ್ನೂ ದೇವಸ್ಥಾನವನ್ನೂ ಕೆಡವಿ ಹಾಳುಮಾಡಿದರು. ಅಂದಿನಿಂದ ಇಂದಿನವರೆಗೂ ಆ ಸ್ಥಳವನ್ನು ಶೌಚಕ್ಕಾಗಿ ಉಪಯೋಗಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಇದಲ್ಲದೆ ಅವರು ಬಾಳನ ವಿಗ್ರಹವನ್ನು ಒಡೆದುಹಾಕಿ, ಬಾಳನ ದೇವಸ್ಥಾನವನ್ನು ಕೆಡವಿಬಿಟ್ಟು, ಆ ಸ್ಥಳವನ್ನು ಇಂದಿನವರೆಗೂ ಶೌಚಕ್ಕಾಗಿ ಉಪಯೋಗಿಸುತ್ತಾರೆ. ಅಧ್ಯಾಯವನ್ನು ನೋಡಿ |
ಹಿಜ್ಕೀಯನು ಉನ್ನತಸ್ಥಳಗಳನ್ನು ನಾಶಗೊಳಿಸಿದನು. ಅವನು ಸ್ಮಾರಕಕಲ್ಲುಗಳನ್ನು ಒಡೆದುಹಾಕಿದನು ಮತ್ತು ಅಶೇರ ಕಲ್ಲುಗಳನ್ನು ಕತ್ತರಿಸಿಹಾಕಿದನು. ಆ ಸಮಯದಲ್ಲಿ ಇಸ್ರೇಲರು ಮೋಶೆಯು ಮಾಡಿದ ತಾಮ್ರಸರ್ಪಕ್ಕೆ ಧೂಪವನ್ನು ಸುಡುತ್ತಿದ್ದರು. ಈ ತಾಮ್ರಸರ್ಪವನ್ನು “ನೆಹುಷ್ಟಾನ್” ಎಂದು ಕರೆಯುತ್ತಿದ್ದರು. ಜನರು ಈ ಸರ್ಪವನ್ನು ಆರಾಧಿಸುತ್ತಿದ್ದುದರಿಂದ ಹಿಜ್ಕೀಯನು ಈ ತಾಮ್ರಸರ್ಪವನ್ನು ಒಡೆದು ಚೂರುಚೂರು ಮಾಡಿದನು.