2 ಅರಸುಗಳು 10:30 - ಪರಿಶುದ್ದ ಬೈಬಲ್30 ಯೆಹೋವನು ಯೇಹುವಿಗೆ, “ನೀನು ಒಳ್ಳೆಯದನ್ನು ಮಾಡಿದೆ. ನಾನು ಒಳ್ಳೆಯದೆಂದು ಹೇಳಿದ್ದನ್ನೇ ನೀನು ಮಾಡಿದೆ. ನನ್ನ ಅಪೇಕ್ಷೆಯಂತೆ ನೀನು ಅಹಾಬನ ಕುಟುಂಬವನ್ನು ನಾಶಗೊಳಿಸಿದೆ. ಆದ್ದರಿಂದ ನಿನ್ನ ಸಂತತಿಯವರು ಇಸ್ರೇಲನ್ನು ನಾಲ್ಕು ತಲೆಮಾರುಗಳವರೆಗೆ ಆಳುತ್ತಾರೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಯೆಹೋವನು ಯೇಹುವಿಗೆ, “ನೀನು ನನ್ನ ದೃಷ್ಟಿಗೆ ಹಿತಕರವಾದದ್ದನ್ನು ನಡಿಸಿ ನನ್ನ ಮೆಚ್ಚಿಕೆಯನ್ನು ಪಡೆದಿರುವೆ. ಅಹಾಬನ ಮನೆಯವರನ್ನು ಕುರಿತು ನನ್ನ ಚಿತ್ತವನ್ನು ನೆರವೇರಿಸಿದ್ದೀ. ಆದುದರಿಂದ ನಿನ್ನ ಸಂತಾನದವರು ನಾಲ್ಕನೆಯ ತಲೆಮಾರಿನವರೆಗೂ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಸರ್ವೇಶ್ವರ ಯೇಹುವಿಗೆ, “ನೀನು ನನ್ನ ದೃಷ್ಟಿಗೆ ಸರಿಯಾದದ್ದನ್ನು ನಡೆಸಿ ನನ್ನ ಮೆಚ್ಚಿಕೆಯನ್ನು ಪಡೆದೆ; ಅಹಾಬನ ಮನೆಯವರನ್ನು ಕುರಿತು ನನ್ನ ಚಿತ್ತವನ್ನು ನೆರವೇರಿಸಿದೆ. ಆದುದರಿಂದ ನಿನ್ನ ಸಂತಾನದವರು ನಾಲ್ಕೆನೆಯ ತಲೆಯವರೆಗೂ ಇಸ್ರಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಯೆಹೋವನು ಯೇಹುವಿಗೆ - ನೀನು ನನ್ನ ದೃಷ್ಟಿಗೆ ಸರಿಯಾದದ್ದನ್ನು ನಡಿಸಿ ನನ್ನ ಮೆಚ್ಚಿಕೆಯನ್ನು ಪಡೆದಿ; ಅಹಾಬನ ಮನೆಯವರನ್ನು ಕುರಿತು ನನ್ನ ಚಿತ್ತವನ್ನು ನೆರವೇರಿಸಿದಿ; ಆದದರಿಂದ ನಿನ್ನ ಸಂತಾನದವರು ನಾಲ್ಕನೆಯ ತಲೆಯವರೆಗೂ ಇಸ್ರಾಯೇಲ್ ಸಿಂಹಾಸನದ ಮೇಲೆ ಕೂತುಕೊಳ್ಳುವರು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಯೆಹೋವ ದೇವರು ಯೇಹುವಿಗೆ, “ನೀನು ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ನಡೆಸಿ ನನ್ನ ಮೆಚ್ಚಿಗೆಯನ್ನು ಪಡೆದೆ; ಅಹಾಬನ ಮನೆಯವರನ್ನು ಕುರಿತು ನನ್ನ ಹೃದಯದಲ್ಲಿದ್ದ ಎಲ್ಲದರ ಪ್ರಕಾರ ಮಾಡಿದ್ದರಿಂದ, ನಿನ್ನ ಸಂತತಿಯವರು ನಾಲ್ಕನೆಯ ತಲೆಮಾರಿನವರೆಗೂ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು,” ಎಂದರು. ಅಧ್ಯಾಯವನ್ನು ನೋಡಿ |