Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:31 - ಪರಿಶುದ್ದ ಬೈಬಲ್‌

31 ಆದರೆ ಯೇಹು ಇಸ್ರೇಲಿನ ದೇವರಾದ ಯೆಹೋವನ ನಿಯಮಗಳನ್ನು ಪೂರ್ಣಮನಸ್ಸಿನಿಂದಲೂ ಎಚ್ಚರಿಕೆಯಿಂದಲೂ ಪಾಲಿಸಲಿಲ್ಲ. ಇಸ್ರೇಲಿನ ಪಾಪಗಳಿಗೆ ಪ್ರೇರಕನಾದ ಯಾರೊಬ್ಬಾಮನ ಪಾಪಗಳನ್ನು ಯೇಹುವು ಮಾಡುವುದನ್ನು ನಿಲ್ಲಿಸಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆದರೆ ಯೇಹುವು ಇಸ್ರಾಯೇಲರ ದೇವರಾದ ಯೆಹೋವನ ಧರ್ಮನಿಯಮಗಳನ್ನು ಪೂರ್ಣಮನಸ್ಸಿನಿಂದ ಕೈಕೊಳ್ಳುವುದಕ್ಕೆ ಮನಸ್ಸುಮಾಡಲು ಪ್ರಯತ್ನಿಸಲಿಲ್ಲ. ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ಯಾರೊಬ್ಬಾಮನ ಮಾರ್ಗವನ್ನು ಬಿಡಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆದರೆ ಅವನು ಇಸ್ರಯೇಲ್ ದೇವರಾದ ಸರ್ವೇಶ್ವರನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಳ್ಳುವುದಕ್ಕೆ ಪ್ರಯತ್ನಿಸಲಿಲ್ಲ; ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ಯಾರೊಬ್ಬಾಮನ ಮಾರ್ಗವನ್ನು ಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆದರೆ ಅವನು ಇಸ್ರಾಯೇಲ್‍ದೇವರಾದ ಯೆಹೋವನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಳ್ಳುವದಕ್ಕೆ ಪ್ರಯತ್ನಿಸಲಿಲ್ಲ; ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ಯಾರೊಬ್ಬಾಮನ ಮಾರ್ಗವನ್ನು ಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಯೇಹುವು ತನ್ನ ಪೂರ್ಣಹೃದಯದಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರ ನಿಯಮದಲ್ಲಿ ನಡೆಯಲು ಪ್ರಯತ್ನಿಸಲಿಲ್ಲ. ಇಸ್ರಾಯೇಲರನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:31
19 ತಿಳಿವುಗಳ ಹೋಲಿಕೆ  

ಆದರೂ ಇಸ್ರೇಲಿನ ಪಾಪಗಳಿಗೆ ಪ್ರೇರಕನಾದ, ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಿಂದ ಯೇಹುವು ಸಂಪೂರ್ಣವಾಗಿ ವಿಮುಖನಾಗಲಿಲ್ಲ. ಬೇತೇಲ್ ಮತ್ತು ದಾನ್‌ಗಳಲ್ಲಿದ್ದ ಬಂಗಾರದ ಕರುಗಳನ್ನು ಯೇಹುವು ನಾಶಗೊಳಿಸಲಿಲ್ಲ.


ನಿನ್ನ ಆಲೋಚನೆಗಳ ವಿಷಯದಲ್ಲಿ ಎಚ್ಚರಿಕೆಯಿಂದಿರು. ನಿನ್ನ ನಡತೆಯು ನಿನ್ನ ಆಲೋಚನೆಗಳ ಮೇಲೆ ಆಧಾರಗೊಂಡಿದೆ.


ಆದ್ದರಿಂದ ನಮಗೆ ಬೋಧಿಸಲ್ಪಟ್ಟ ಸಂಗತಿಗಳನ್ನು ಬಹಳ ಎಚ್ಚರಿಕೆಯಿಂದ ಅನುಸರಿಸಬೇಕು. ಸತ್ಯಮಾರ್ಗವನ್ನು ಬಿಟ್ಟು ತಪ್ಪಿಹೋಗದಂತೆ ಎಚ್ಚರಿಕೆಯಿಂದಿರಬೇಕು.


ದೇವರೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಅವರು ಪಾಲಿಸಲಿಲ್ಲ. ಅವರು ಆತನ ಉಪದೇಶಗಳಿಗೆ ವಿಧೇಯರಾಗಲಿಲ್ಲ.


ನಾವು ನಮ್ಮ ದೇವರಾದ ಯೆಹೋವನ ಆಜ್ಞಾಪಾಲನೆ ಮಾಡಿಲ್ಲ. ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮುಖಾಂತರ ನಮಗೆ ಕಟ್ಟಳೆಗಳನ್ನು ತಿಳಿಸಿದನು. ಆದರೆ ನಾವು ಆ ಕಟ್ಟಳೆಗಳನ್ನು ಪಾಲಿಸಲಿಲ್ಲ.


ನಾನು ನನ್ನ ಆತ್ಮವನ್ನು ನಿಮ್ಮಲ್ಲಿರಿಸುವೆನು. ನೀವು ನನ್ನ ನಿಯಮಗಳಿಗೆ ವಿಧೇಯರಾಗುವಷ್ಟು ನಿಮ್ಮ ಮನಸ್ಸನ್ನು ಬದಲಾಯಿಸುವೆನು. ಆಗ ನೀವು ನನ್ನ ಆಜ್ಞೆಗಳನ್ನು ಜಾಗ್ರತೆಯಿಂದ ಪಾಲಿಸುವಿರಿ.


ಯೌವನಸ್ಥನು ಪವಿತ್ರನಾಗಿ ಜೀವಿಸುವುದು ಯಾವುದರಿಂದ? ನಿನ್ನ ಆಜ್ಞೆಗಳಿಗೆ ವಿಧೇಯನಾಗುವುದರಿಂದಲೇ.


“ನಾನು ಜಾಗರೂಕನಾಗಿ ಮಾತಾಡುವೆ. ನನ್ನ ನಾಲಿಗೆ ನನ್ನನ್ನು ಪಾಪಕ್ಕೆ ಸಿಕ್ಕಿಸದಂತೆ ನೋಡಿಕೊಳ್ಳುವೆ. ದುಷ್ಟರ ಮಧ್ಯದಲ್ಲಿ ಬಾಯಿಮುಚ್ಚಿಕೊಂಡಿರುವೆ” ಅಂದುಕೊಂಡೆನು.


ಇಸ್ರೇಲರ ದೇವರಾದ ಯೆಹೋವನೇ, ನೀನು ನನ್ನ ತಂದೆಯಾದ ದಾವೀದನಿಗೆ, ‘ನಿನ್ನ ಸಂತಾನದವರು ನಿನ್ನಂತೆ ನನ್ನ ಆಜ್ಞೆಗಳಿಗೆ ವಿಧೇಯರಾಗಿದ್ದರೆ, ನಿನ್ನ ಸಂತಾನದವರೇ ಇಸ್ರೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು.’ ಎಂದು ವಾಗ್ದಾನ ಮಾಡಿದೆಯಲ್ಲಾ?


ಆದರೆ ನೆಬಾಟನ ಮಗನಾದ ಯಾರೊಬ್ಬಾಮನು ಮಾಡಿದ ಪಾಪಗಳನ್ನೇ ಅವನು ಮುಂದುವರಿಸಿದನು. ಇಸ್ರೇಲರು ಪಾಪಗಳನ್ನು ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು. ಯೋರಾಮನು ಯಾರೊಬ್ಬಾಮನ ಪಾಪಗಳನ್ನು ನಿಲ್ಲಿಸಲಿಲ್ಲ.


ಯಾರೊಬ್ಬಾಮನು ಪಾಪವನ್ನು ಮಾಡಿದನು. ನಂತರ ಇಸ್ರೇಲಿನ ಜನರೂ ಪಾಪ ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದನು. ಆದ್ದರಿಂದ ಇಸ್ರೇಲಿನ ಜನರು ಸೋಲಿಸಲ್ಪಡುವಂತೆ ಯೆಹೋವನು ಅವಕಾಶ ಮಾಡುತ್ತಾನೆ” ಎಂದು ಹೇಳಿದನು.


ನೀನು ಯೆಹೋವನಿಗೆ ವಿಧೇಯನಾದರೆ, ಆಗ ಯೆಹೋವನು ನನಗೆ ಮಾಡಿದ ವಾಗ್ದಾನವನ್ನು ಈಡೇರಿಸುವನು. ಯೆಹೋವನು ನನಗೆ ಈ ರೀತಿ ವಾಗ್ದಾನ ಮಾಡಿರುವನು: ‘ನಿನ್ನ ಮಕ್ಕಳು ನಂಬಿಗಸ್ತರಾಗಿ ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನನ್ನ ಆಜ್ಞೆಗಳಿಗೆ ವಿಧೇಯರಾಗಿ ಜೀವಿಸುವುದಾಗಿದ್ದರೆ, ನಿನ್ನ ವಂಶದವರಲ್ಲಿ ಒಬ್ಬನು ಯಾವಾಗಲೂ ಇಸ್ರೇಲಿನ ಜನರನ್ನು ಆಳುವವನಾಗಿರುತ್ತಾನೆ.’”


ನಿಮ್ಮ ದೇವರಾದ ಯೆಹೋವನು ಹೇಳಿದ ಆಜ್ಞೆಗಳಿಗನುಸಾರವಾಗಿ ನಡೆದರೆ ನೀವು ಜೀವಿಸುವಿರಿ. ಆಗ ನೀವು ಶುಭವನ್ನೇ ಹೊಂದುವಿರಿ. ನಿಮಗೆ ದೊರಕಿದ ಸ್ವಾಸ್ತ್ಯಭೂಮಿಯಲ್ಲಿ ನೀವು ಬಹುಕಾಲ ಬಾಳುವಿರಿ.


ನೀವು ಆ ದೇಶದಲ್ಲಿ ವಾಸಿಸುವಾಗ ನಿಮ್ಮ ದೇವರಾದ ಯೆಹೋವನೊಡನೆ ನೀವು ಮಾಡಿರುವ ಒಡಂಬಡಿಕೆಯನ್ನು ಮರೆಯಬೇಡಿರಿ. ನೀವು ಆತನ ಕಟ್ಟಳೆಗಳಿಗೆ ವಿಧೇಯರಾಗಿರಿ. ಯಾವ ವಿಗ್ರಹಗಳನ್ನಾಗಲಿ ಮಾಡಿಕೊಳ್ಳಬೇಡಿರಿ.


“ಆ ದಿನ ಸೀನಾಯಿ ಬೆಟ್ಟದಲ್ಲಿ ಸ್ವರವನ್ನು ಮಾತ್ರ ಕೇಳಿದಿರಿ. ನೀವು ಯೆಹೋವನ ರೂಪವನ್ನು ನೋಡಲಿಲ್ಲ. ದೇವರಿಗೆ ಯಾವ ಆಕಾರವೂ ಇಲ್ಲ.


ನಿಮ್ಮಲ್ಲಿ ಯಾರೂ ದೇವರ ಕೃಪೆಯನ್ನು ಕಳೆದುಕೊಳ್ಳದಂತೆ ಎಚ್ಚರದಿಂದಿರಿ. ನಿಮ್ಮಲ್ಲಿ ಯಾವನೂ ಚಿಗುರಿ ಬೆಳೆಯುವ ವಿಷದ ಬೇರಿನಂತಾಗದಂತೆ ಎಚ್ಚರಿಕೆಯಿಂದಿರಿ. ಅಂಥವನಿಂದ ನಿಮ್ಮ ಇಡೀ ಗುಂಪೇ ಹಾಳಾಗುವುದು.


ಆದ್ದರಿಂದ ಇಸ್ರೇಲರು ಯಾರೊಬ್ಬಾಮನು ಮಾಡಿದ ಪಾಪಗಳನ್ನೆಲ್ಲ ಅನುಸರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು