ಹಜಾಯೇಲನು, “ಸ್ವಾಮೀ, ನೀವು ಅಳುವುದೇಕೇ?” ಎಂದು ಕೇಳಿದನು. ಎಲೀಷನು, “ನಾನು ಅಳುತ್ತಿರುವುದೇಕೆಂದರೆ ನೀನು ಇಸ್ರೇಲರಿಗೆ ಮಾಡುವ ಕೆಟ್ಟಕಾರ್ಯಗಳು ನನಗೆ ತಿಳಿದಿವೆ. ನೀನು ಅವರ ನಗರಗಳ ಕೋಟೆಗಳನ್ನು ಸುಟ್ಟುಹಾಕುವೆ. ನೀನು ಅವರ ತರುಣರನ್ನು ಖಡ್ಗಗಳಿಂದ ಇರಿದುಕೊಲ್ಲುವೆ. ನೀನು ಅವರ ಮಕ್ಕಳನ್ನು ಕೊಂದುಹಾಕುವೆ. ನೀನು ಅವರ ಗರ್ಭಿಣಿ ಸ್ತ್ರೀಯರನ್ನು ಸೀಳಿಹಾಕುವೆ” ಎಂದು ಹೇಳಿದನು.
ಹಜಾಯೇಲನು ಕೆಟ್ಟವರಾದ ಅನೇಕ ಜನರನ್ನು ಕೊಲ್ಲುತ್ತಾನೆ. ಹಜಾಯೇಲನ ಖಡ್ಗದಿಂದ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುತ್ತಾನೆ. ಯೇಹುವಿನಿಂದ ತಪ್ಪಿಸಿಕೊಂಡ ಆ ಕೆಟ್ಟ ಜನರನ್ನೆಲ್ಲ ಎಲೀಷನು ಕೊಲ್ಲುತ್ತಾನೆ.
ಹಜಾಯೇಲನು ಸಾಯುವುದಕ್ಕೆ ಮೊದಲು, ಯೋವಾಷನ ತಂದೆಯಾದ ಯೆಹೋವಾಹಾಜನಿಂದ ಯುದ್ಧದಲ್ಲಿ ಕೆಲವು ನಗರಗಳನ್ನು ಮತ್ತೆ ವಶಪಡಿಸಿಕೊಂಡನು. ಆದರೆ ಈಗ ಯೋವಾಷನು ಹಜಾಯೇಲನ ಮಗನಾದ ಬೆನ್ಹದದನಿಂದ ಈ ನಗರಗಳನ್ನು ವಶಪಡಿಸಿಕೊಂಡನು. ಯೋವಾಷನು ಬೆನ್ಹದದನನ್ನು ಮೂರು ಸಲ ಸೋಲಿಸಿ ಇಸ್ರೇಲಿನ ನಗರಗಳನ್ನು ವಶಪಡಿಸಿಕೊಂಡನು.
ಲೆಬೊಹಮಾತಿನಿಂದ ಅರಾಬ ಸಮುದ್ರದವರೆಗೆ ಹಬ್ಬಿದ ಇಸ್ರೇಲರ ದೇಶವನ್ನು ಯಾರೊಬ್ಬಾಮನು ಮತ್ತೆ ವಶಪಡಿಸಿಕೊಂಡನು. ಇಸ್ರೇಲರ ಯೆಹೋವನು ತನ್ನ ಸೇವಕನೂ ಅಮಿತ್ತೈನ ಮಗನೂ ಗತ್‌ಹೇಫೆರಿನ ಪ್ರವಾದಿಯೂ ಆದ ಯೋನಾ ಎಂಬವನ ಮೂಲಕ ಮೊದಲೇ ತಿಳಿಸಿದ್ದಂತೆ ಇದು ಸಂಭವಿಸಿತು.