Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:4 - ಪರಿಶುದ್ದ ಬೈಬಲ್‌

4 ಆದರೆ ಇಜ್ರೇಲಿನ ಅಧಿಕಾರಿಗಳು ಮತ್ತು ನಾಯಕರು ಬಹಳ ಭಯಗೊಂಡಿದ್ದರು. ಅವರು, “ಇಬ್ಬರು ರಾಜರು (ಯೋರಾವ್ ಮತ್ತು ಅಹಜ್ಯ) ಯೇಹುವನ್ನು ತಡೆಯಲಾಗಲಿಲ್ಲ. ನಾವು ಅವನನ್ನು ತಡೆಯಲಾಗುವುದಿಲ್ಲ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು ಬಹಳವಾಗಿ ಭಯಪಟ್ಟು, “ಇಬ್ಬರೂ ರಾಜರು ಅವನ ಮುಂದೆ ನಿಲ್ಲಲಾರದೆ ಹೋದಮೇಲೆ, ನಾವು ನಿಲ್ಲುವುದು ಹೇಗೆ?” ಅಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವರು ಬಹಳವಾಗಿ ಭಯಪಟ್ಟರು. ಇಬ್ಬರು ರಾಜರೂ ಅವನ ಮುಂದೆ ನಿಲ್ಲಲಾರದೆಹೋದರು. ನಾವು ನಿಲ್ಲುವುದು ಹೇಗೆ?” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವರು ಬಹಳವಾಗಿ ಭಯಪಟ್ಟು - ಇಬ್ಬರು ರಾಜರೂ ಅವನ ಮುಂದೆ ನಿಲ್ಲಲಾರದೆ ಹೋದರು; ನಾವು ನಿಲ್ಲುವದು ಹೇಗೆ ಅಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ಅವರು ತುಂಬಾ ಭಯಪಟ್ಟು, “ಇಬ್ಬರೂ ಅರಸರು ಅವನ ಮುಂದೆ ನಿಲ್ಲಲು ಸಾಧ್ಯವಾಗದಿದ್ದಾಗ, ನಾವು ನಿಲ್ಲುವುದು ಹೇಗೆ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:4
8 ತಿಳಿವುಗಳ ಹೋಲಿಕೆ  

ಯೆಹೂದದ ರಾಜನಾದ ಅಹಜ್ಯನು ಇದನ್ನು ಕಂಡು ತೋಟದ ಮನೆಯ ಮೂಲಕ ಓಡಿಹೋದನು. ಯೇಹು ಅವನನ್ನು ಹಿಂಬಾಲಿಸಿಕೊಂಡು ಹೋಗಿ, “ಅಹಜ್ಯನನ್ನೂ ಅವನ ರಥದಲ್ಲಿಯೇ ಹೊಡೆಯಿರಿ!” ಎಂದು ಹೇಳಿದನು. ಯೇಹುವಿನ ಜನರು ಅಹಜ್ಯನನ್ನು ಇಬ್ಲೆಯಾಮಿನ ಬಳಿಯಿರುವ ಗೂರ್‌ನಲ್ಲಿ ಹೊಡೆದುಹಾಕಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋದರೂ ಅಲ್ಲಿ ಸತ್ತುಹೋದನು.


ಆದರೆ ಯೇಹು ತನ್ನ ಬಿಲ್ಲನ್ನು ಸೆಳೆದು, ಶಕ್ತಿಯನ್ನೆಲ್ಲ ಒಗ್ಗೂಡಿಸಿ ಯೋರಾಮನ ಬೆನ್ನಿಗೆ ಬಾಣದಿಂದ ಹೊಡೆದನು. ಬಾಣವು ಯೋರಾಮನ ಹೃದಯವನ್ನು ಛೇದಿಸಿತು. ಯೋರಾಮನು ತನ್ನ ರಥದಲ್ಲಿಯೇ ಸತ್ತುಬಿದ್ದನು.


“ಒಬ್ಬ ಅರಸನು ಇನ್ನೊಬ್ಬ ಅರಸನ ವಿರುದ್ಧ ಯುದ್ಧಕ್ಕೆ ಹೋಗುವಾಗ, ಮೊದಲು ಅವನು ಕುಳಿತುಕೊಂಡು ಯೋಜನೆ ಮಾಡುವನು. ಅರಸನ ಬಳಿಯಲ್ಲಿ ಕೇವಲ ಹತ್ತುಸಾವಿರ ಮಂದಿ ಸೈನಿಕರಿದ್ದರೆ, ಇಪ್ಪತ್ತುಸಾವಿರ ಮಂದಿ ಸೈನಿಕರಿರುವ ಇನ್ನೊಬ್ಬ ಅರಸನನ್ನು ಸೋಲಿಸಲು ತನಗೆ ಸಾಧ್ಯವೇ ಎಂದು ಆಲೋಚಿಸುವನು.


ಯೆಹೋವನ ಮಹಾ ರೌದ್ರಕ್ಕೆದುರಾಗಿ ಯಾರೂ ನಿಲ್ಲಲಾರರು. ಯಾರೂ ಆ ಮಹಾ ಕೋಪವನ್ನು ಸಹಿಸಲು ಸಾಧ್ಯವಿಲ್ಲ. ಆತನ ಕೋಪವು ಬೆಂಕಿಯಂತೆ ದಹಿಸುವದು. ಆತನು ಬರುವಾಗ ಬಂಡೆಯು ಪುಡಿಯಾಗುವುದು.


“ಜೋರ್ಡನ್ ನದಿಯ ಸಮೀಪದ ದಟ್ಟವಾದ ಕಾಡಿನಿಂದ ಫಕ್ಕನೆ ಒಂದು ಸಿಂಹ ಬರುವದು. ಅದು ಹೊಲಗಳಲ್ಲಿದ್ದ ಜನರ ದನಕುರಿಗಳ ಹಟ್ಟಿಗಳಿಗೆ ನುಗ್ಗುವುದು. ನಾನು ಆ ಸಿಂಹದಂತೆ ಇದ್ದೇನೆ. ನಾನು ಎದೋಮ್ ನಗರಕ್ಕೆ ಹೋಗಿ ಆ ಜನರನ್ನು ಹೆದರಿಸುವೆನು; ಅವರು ಓಡಿಹೋಗುವಂತೆ ಮಾಡುವೆನು. ಅವರ ತರುಣರಲ್ಲಿ ಯಾರೂ ನನ್ನನ್ನು ತಡೆಯಲಾರರು. ನನ್ನತೆ ಯಾರೂ ಇಲ್ಲ. ಯಾರೂ ನನ್ನನ್ನು ಪ್ರತಿಭಟಿಸುವದಿಲ್ಲ. ಅವರ ನಾಯಕರಲ್ಲಿ ಯಾರೂ ನನ್ನ ವಿರುದ್ಧ ನಿಲ್ಲುವದಿಲ್ಲ.”


ನಾನು ಕೋಪಗೊಂಡಿಲ್ಲ. ಆದರೆ ಯುದ್ಧ ನಡೆಯುತ್ತಿರುವಾಗ ಯಾರಾದರೂ ಮುಳ್ಳುಬೇಲಿಯನ್ನು ಹಾಕಿದರೆ, ನಾನು ಮುನ್ನುಗ್ಗಿ ಅದನ್ನು ಸುಟ್ಟುಹಾಕುವೆನು.


“ಯೋಬನೇ, ನೀನು ಅದರ ಮೇಲೆ ನಿನ್ನ ಕೈಯಿಟ್ಟು ನೋಡು. ಆ ಪ್ರಯಾಸದ ಹೋರಾಟವನ್ನು ನೆನಸಿಕೊಂಡರೆ ಅದನ್ನು ನೀನು ಮುಟ್ಟುವುದೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು