Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:8 - ಪರಿಶುದ್ದ ಬೈಬಲ್‌

8 ಸಂದೇಶಕನೊಬ್ಬನು ಯೇಹುವಿನ ಬಳಿಗೆ ಬಂದು ಅವನಿಗೆ, “ಅವರು ರಾಜನ ಮಕ್ಕಳ ತಲೆಗಳನ್ನು ತಂದಿದ್ದಾರೆ!” ಎಂದು ಹೇಳಿದನು. ಆಗ ಯೇಹು, “ನಗರದ ಬಾಗಿಲಿನ ಬಳಿ ನಾಳೆ ಮುಂಜಾನೆಯ ತನಕ ಆ ತಲೆಗಳನ್ನು ಎರಡು ರಾಶಿಗಳನ್ನಾಗಿ ಹಾಕಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ರಾಜಪುತ್ರರ ತಲೆಗಳನ್ನು ತಂದಿದ್ದಾರೆಂಬ ವರ್ತಮಾನವು ಯೇಹುವಿಗೆ ತಲುಪಿದಾಗ ಅವನು, “ಬೆಳಗಾಗುವ ತನಕ ಅವುಗಳನ್ನು ಹೆಬ್ಬಾಗಿಲಿನ ಹತ್ತಿರ ಎರಡು ರಾಶಿಗಳಾಗಿ ಮಾಡಿ ಹಾಕಿರಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ರಾಜಪುತ್ರರ ತಲೆಗಳನ್ನು ತಂದಿದ್ದಾರೆಂಬ ಸಮಾಚಾರ ಯೇಹುವಿಗೆ ಮುಟ್ಟಿದಾಗ ಅವನು; “ಬೆಳಗಾಗುವ ತನಕ ಅವುಗಳನ್ನು ಹೆಬ್ಬಾಗಿಲಿನ ಹತ್ತಿರ ಎರಡು ರಾಶಿಗಳಾಗಿ ಹಾಕಬೇಕು,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ರಾಜಪುತ್ರರ ತಲೆಗಳನ್ನು ತಂದಿದ್ದಾರೆಂಬ ವರ್ತಮಾನವು ಯೇಹುವಿಗೆ ಮುಟ್ಟಿದಾಗ ಅವನು - ಬೆಳಗಾಗುವ ತನಕ ಅವುಗಳನ್ನು ಹೆಬ್ಬಾಗಲಿನ ಹತ್ತಿರ ಎರಡು ರಾಶಿಗಳಾಗಿ ಹಾಕಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಆ ಸೇವಕನು ಬಂದು ಯೇಹುವಿಗೆ, “ರಾಜಪುತ್ರರ ತಲೆಗಳನ್ನು ತೆಗೆದುಕೊಂಡು ಬಂದಿದ್ದಾರೆ,” ಎಂದು ತಿಳಿಸಿದನು. ಅದಕ್ಕೆ ಯೇಹು, “ಉದಯಕಾಲದವರೆಗೂ ಅವುಗಳನ್ನು ಹೆಬ್ಬಾಗಿಲಿನಲ್ಲಿ ಎರಡು ರಾಶಿಗಳಾಗಿ ಹಾಕಿರಿ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:8
6 ತಿಳಿವುಗಳ ಹೋಲಿಕೆ  

ಅದನ್ನು ಒಂದು ತಟ್ಟೆಯ ಮೇಲಿಟ್ಟು ತಂದು ಆ ಹುಡುಗಿಗೆ ಕೊಟ್ಟನು. ಅವಳು ಆ ತಲೆಯನ್ನು ತನ್ನ ತಾಯಿಗೆ ಕೊಟ್ಟಳು.


ನಾಯಕರು ಈಜೆಬೆಲಳಿಗೆ ಒಂದು ಸಂದೇಶವನ್ನು ಕಳುಹಿಸಿದರು. ಆ ಸಂದೇಶವು ಹೀಗಿತ್ತು: “ನಾಬೋತನನ್ನು ಕೊಂದುಹಾಕಲಾಗಿದೆ.”


ಇಡೀ ರಾತ್ರಿ ಆ ಮರದಲ್ಲಿ ಅವನ ಶರೀರ ನೇತಾಡುವಂತೆ ಮಾಡಬಾರದು. ಅದೇ ದಿವಸದಲ್ಲಿ ಅವನ ಶವವು ಹೂಳಲ್ಪಡಬೇಕು. ಯಾಕೆಂದರೆ ಮರದಲ್ಲಿ ತೂಗುಹಾಕಲ್ಪಟ್ಟ ಮನುಷ್ಯನು ದೇವರಿಂದ ಶಪಿಸಲ್ಪಟ್ಟವನು. ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟ ದೇಶವನ್ನು ನೀವು ಹೊಲಸು ಮಾಡಬೇಡಿರಿ.


ನಗರದ ನಾಯಕರಿಗೆ ಈ ಪತ್ರವು ಬಂದು ತಲುಪಿದಾಗ, ಅವರು ರಾಜನ ಎಪ್ಪತ್ತುಮಂದಿ ಮಕ್ಕಳನ್ನು ಕರೆದುಕೊಂಡು ಹೋಗಿ ಕೊಂದುಹಾಕಿದರು. ನಂತರ ಆ ನಾಯಕರು ರಾಜನ ಮಕ್ಕಳ ತಲೆಗಳನ್ನು ಬುಟ್ಟಿಗಳಲ್ಲಿ ಹಾಕಿ ಇಜ್ರೇಲಿನಲ್ಲಿದ್ದ ಯೇಹುವಿನ ಬಳಿಗೆ ಕಳುಹಿಸಿದರು.


ಮುಂಜಾನೆ, ಯೇಹು ಹೊರಗೆ ಬಂದು ಜನರ ಮುಂದೆ ನಿಂತು ಅವರಿಗೆ, “ನೀವು ನಿರಪರಾಧಿಗಳು. ನಾನಾದರೋ ನನ್ನ ಒಡೆಯನ ಮೇಲೆ ಒಳಸಂಚು ಮಾಡಿದವನು. ನಾನು ಅವನನ್ನು ಕೊಂದೆನು. ಆದರೆ ಅಹಾಬನ ಮಕ್ಕಳನ್ನೆಲ್ಲ ಕೊಂದವರು ಯಾರು? ನೀವು ಅವರನ್ನು ಕೊಂದಿದ್ದೀರಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು